'ಮಹಾವಿಕಾಸ್ ಆಘಾಡಿ' ವಿರುದ್ಧ ಸಲ್ಲಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ
ಹೊಸದಿಲ್ಲಿ, ನ.27: ಮಹಾರಾಷ್ಟ್ರದಲ್ಲಿ ಎನ್ಸಿಪಿ-ಕಾಂಗ್ರೆಸ್-ಶಿವಸೇನೆ ಮೈತ್ರಿಕೂಟ (ಮಹಾವಿಕಾಸ್ ಆಘಾಡಿ) ಸರಕಾರ ರಚನೆಯ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಮಹಾರಾಷ್ಟ್ರದಲ್ಲಿ ಶಿವಸೇನೆ-ಎನ್ಸಿಪಿ-ಕಾಂಗ್ರೆಸ್ ಮೈತ್ರಿ ಜನಾದೇಶದ ವಿರುದ್ಧವಾಗಿದೆ. ಮತದಾರರ ನಂಬಿಕೆಯನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ಸಲ್ಲಿಸಲಾದ ಮನವಿಯ ತುರ್ತು ವಿಚಾರಣೆಯನ್ನು ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿತು.
Next Story