Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಯುವತಿಯರ ಸರಣಿ ಹತ್ಯೆಯ 18ನೇ ಪ್ರಕರಣ :...

ಯುವತಿಯರ ಸರಣಿ ಹತ್ಯೆಯ 18ನೇ ಪ್ರಕರಣ : ಸಯನೈಡ್ ಮೋಹನ್‌ಗೆ ಮರಣ ದಂಡನೆ

ವಾರ್ತಾಭಾರತಿವಾರ್ತಾಭಾರತಿ27 Nov 2019 7:34 PM IST
share
ಯುವತಿಯರ ಸರಣಿ ಹತ್ಯೆಯ 18ನೇ ಪ್ರಕರಣ : ಸಯನೈಡ್ ಮೋಹನ್‌ಗೆ ಮರಣ ದಂಡನೆ

ಮಂಗಳೂರು, ನ. 27: ಯುವತಿಯರ ಸರಣಿ ಹಂತಕ ಸಯನೈಡ್ ಮೋಹನ್‌ ಕುಮಾರ್ (56) ಮಹಿಳೆಯರ ಹತ್ಯೆಯ 18ನೇ ಪ್ರಕರಣದಲ್ಲಿ ಕೊಲೆ ಅಪರಾಧಕ್ಕೆ ಮರಣದಂಡನೆ ಹಾಗೂ 30 ಸಾವಿರ ರೂ. ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.

ಆರೋಪಿ ಮೋಹನ್ ಮೇಲೆ ಅಪಹರಣ ಪ್ರಕರಣಕ್ಕೆ 10 ವರ್ಷ ಜೈಲು, 5 ಸಾವಿರ ರೂ. ದಂಡ, ಅತ್ಯಾಚಾರ ಪ್ರಕರಣಕ್ಕೆ 7 ವರ್ಷ ಜೈಲು, 5 ಸಾವಿರ ರೂ. ದಂಡ, ವಿಷ ಉಣಿಸಿರುವುದಕ್ಕೆ 10 ವರ್ಷ ಜೈಲು, 5 ಸಾವಿರ ರೂ. ದಂಡ, ಚಿನ್ನಾಭರಣ ಸುಲಿಗೆ 5 ವರ್ಷ ಜೈಲು, 5 ಸಾವಿರ ರೂ. ದಂಡ, ವಿಷ ಉಣಿಸಿ ಸುಲಿಗೆ ಮಾಡಿರುವುದಕ್ಕೆ 10 ವರ್ಷ ಜೈಲು, 5 ಸಾವಿರ ರೂ.ದಂಡ, ವಂಚನೆ ಮಾಡಿರುವುದಕ್ಕೆ 1 ವರ್ಷ ಜೈಲು, ಸಾಕ್ಷ ನಾಶ ಮಾಡಿರುವುದಕ್ಕೆ 7 ವರ್ಷ ಜೈಲು ಹಾಗೂ 5 ಸಾವಿರ ರೂ. ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

ಈ ಎಲ್ಲ ಶಿಕ್ಷೆಗಳನ್ನು ಏಕಕಾಲದಲ್ಲಿ ಅನುಭವಿಸಬೇಕು. ಹೈಕೋರ್ಟ್ ಮರಣದಂಡನೆ ದೃಢೀಕರಿಸಿದರೆ ಈ ಎಲ್ಲ ಶಿಕ್ಷೆಗಳನ್ನು ಅಂತರ್ಗತ ಮಾಡಬೇಕು ಎಂದು ನ್ಯಾಯಾಲಯ ಹೇಳಿದೆ.

ಪ್ರಕರಣ ಹಿನ್ನೆಲೆ

ಮೋಹನ್‌ಗೆ ಕಾಸರಗೋಡು ಬದಿಯಡ್ಕದ ಕಯ್ಯೆರ ಗ್ರಾಮದ ಪೈವಳಿಕೆ ನಿವಾಸಿ ಬೀಡಿ ಕಟ್ಟುವ ಕೆಲಸ ಮಾಡುತ್ತಿದ್ದ 25 ವರ್ಷದ ಯುವತಿಯ ಪರಿಚಯವಾಗಿ, ತನ್ನನ್ನು ಆನಂದ ಎಂದು ಪರಿಚಯಿಸಿಕೊಂಡಿದ್ದ. ಬಳಿಕ ಆಕೆಯೊಂದಿಗೆ ಸಲುಗೆ ಬೆಳೆಸಿ, ಮದುವೆಯಾಗುವುದಾಗಿ ನಂಬಿಸಿದ್ದ.

2009ರ ಮೇ 21ರಂದು ಕುಶಾಲನಗರಕ್ಕೆ ತೆರಳಿ ಅಲ್ಲಿನ ಲಾಡ್ಜ್‌ನಲ್ಲಿ ತಂಗಿದ್ದ. ರಾತ್ರಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದ. ಮರುದಿನ, ‘ದೇವಸ್ಥಾನಕ್ಕೆ ಹೋಗಲಿಕ್ಕಿದೆ. ಚಿನ್ನಾಭರಣ ರೂಮಲ್ಲೇ ಇರಲಿ’ ಎಂದು ತೆಗೆದಿಡಲು ಹೇಳಿ ಆಕೆಯನ್ನು ಸರಕಾರಿ ಬಸ್ ನಿಲ್ದಾಣಕ್ಕೆ ಕರೆದೊಯ್ದಿದ್ದ. ಬಳಿಕ ಗರ್ಭಪಾತ ಮಾತ್ರೆ ಎಂದು ಸಯನೈಡ್ ನೀಡಿ ಹತ್ಯೆ ಮಾಡಿದ್ದ. ಹಿಂದಿರುಗಿ ರೂಮ್‌ಗೆ ತೆರಳಿದ ಆತ ಚಿನ್ನಾಭರಣದೊಂದಿಗೆ ಪರಾರಿಯಾಗಿ, ಬಳಿಕ ಮಂಗಳೂರಿಗೆ ತಂದು ಮಾರಾಟ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಯುವತಿ ಮನೆಯಲ್ಲಿ ಅಜ್ಜನ ಮನೆಗೆ ಹೋಗಿ ಬರುವುದಾಗಿ ತಿಳಿಸಿ ಹೋಗಿದ್ದಳು. ಆದರೆ ಅಲ್ಲಿಯೂ ಹೋಗದೆ, ಹಿಂದಿರುಗಿ ಬಾರದೆ ನಾಪತ್ತೆಯಾಗಿದ್ದಳು. ಮೂರು ದಿನಗಳ ಬಳಿಕ ಮನೆಯವರು ಪೊಲೀಸ್ ಠಾಣೆಗೆ ನಾಪತ್ತೆ ದೂರು ನೀಡಿದ್ದರು. ಸಯನೈಡ್ ಮೋಹನ್ ಬಂಧನವಾದ ಬಳಿಕ ಈಕೆಯನ್ನು ಕೊಲೆ ಮಾಡಿರುವ ವಿಷಯ ಬಹಿರಂಗಗೊಂಡಿತ್ತು. ಅಂದಿನ ಸಿಒಡಿ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

47 ಸಾಕ್ಷಿ ವಿಚಾರಣೆ: ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸಯಿದುನ್ನೀಸಾ 47 ಸಾಕ್ಷಿ ವಿಚಾರಣೆ ನಡೆಸಿ ಅಪರಾಧ ಸಾಬೀತುಪಡಿಸಿ ತೀರ್ಪು ನೀಡಿದ್ದಾರೆ. ಸರಕಾರದ ಪರವಾಗಿ ಜುಡಿತ್ ಒ.ಎಂ. ಕ್ರಾಸ್ತ ವಾದಿಸಿದ್ದರು. ಶಿಕ್ಷೆಯ ಪ್ರಮಾಣದ ಸಂದರ್ಭ ಸರಕಾರಿ ಅಭಿಯೋಜಕ ಜಯರಾಮ ಶೆಟ್ಟಿ ವಾದಿಸಿದ್ದರು. ಸಯನೈಡ್ ಮೋಹನ್ ಬೆಳಗಾವಿ ಹಿಂಡಲಗಾ ಜೈಲ್‌ನಿಂದ ವೀಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ಎದುರಿಸಿದ್ದ.

18 ಪ್ರಕರಣಗಳಲ್ಲಿ 5ರಲ್ಲಿ ಮರಣದಂಡನೆ

ಇದು ಸಯನೈಡ್ ಮೋಹನ್‌ನ 18ನೇ ಕೊಲೆ ಪ್ರಕರಣವಾಗಿದ್ದು, ಇನ್ನೂ 2 ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ. ಜಿಲ್ಲಾ ನ್ಯಾಯಾಲಯ ಮರಣ ದಂಡನೆ ಶಿಕ್ಷೆ ವಿಧಿಸಿದ 5ನೇ ಪ್ರಕರಣ ಇದಾಗಿದೆ. ಈ ಹಿಂದಿನ 4 ಪ್ರಕರಣಗಳಲ್ಲಿ ಹೈಕೋರ್ಟ್ ಒಂದು ಪ್ರಕರಣದಲ್ಲಿ ಶಿಕ್ಷೆಯ ಪ್ರಮಾಣವನ್ನು ಜೀವಾವಧಿ ಶಿಕ್ಷೆಗೆ ಹಾಗೂ ಇನ್ನೊಂದು ಪ್ರಕರಣದಲ್ಲಿ 5 ವರ್ಷಗಳ ಕಠಿಣ ಶಿಕ್ಷೆಗೆ ಇಳಿಸಿದೆ. ಒಂದು ಪ್ರಕರಣದಲ್ಲಿ ಮಾತ್ರ ಮರಣ ದಂಡನೆ ಶಿಕ್ಷೆಯನ್ನು ಹೈಕೋರ್ಟ್ ಎತ್ತಿ ಹಿಡಿದಿತ್ತು. ಕಳೆದ ಅಕ್ಟೋಬರ್‌ನಲ್ಲಿ ವಿಧಿಸಲಾಗಿದ್ದ ಮರಣದಂಡನೆ ಶಿಕ್ಷೆ ಹೈಕೋರ್ಟಿನ ದೃಢೀಕರಣಕ್ಕೆ ಬಾಕಿ ಇದೆ.

ಶಾಂತ ಚಿತ್ತನಾಗಿ ತೀರ್ಪು ಆಲಿಸಿದ ಮೋಹನ್

ಸಯನೈಡ್ ಮೋಹನ್ ಪ್ರಸ್ತುತ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದು, ಅಲ್ಲಿಂದಲೇ ವೀಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ವಿಚಾರಣೆ ನಡೆಸಲಾಯಿತು. ನ. 22 ರಂದು ಕೊಲೆ ಆರೋಪ ಸಾಬೀತಾಗಿ ಶಿಕ್ಷೆಗೆ ಅರ್ಹ ಎಂದು ನ್ಯಾಯಾಲಯ ತೀರ್ಪು ನೀಡಿದಾಗ ಆತ ಶಿಕ್ಷೆಯ ಪ್ರಮಾಣವನ್ನು ಇಳಿಸಬೇಕು ಎಂದು ಮನವಿ ಮಾಡಿದ್ದನು. ನ. 27 ರಂದು ನ್ಯಾಯಾಧೀಶರು ಮರಣ ದಂಡನೆ ಶಿಕ್ಷೆಯನ್ನು ಪ್ರಕಟಿಸುವಾಗ ಆತ ಯಾವುದೇ ಪ್ರತಿಕ್ರಿಯೆ ತೋರಿಸದೆ ಶಾಂತ ಚಿತ್ತನಾಗಿ ತೀರ್ಪನ್ನು ಆಲಿಸಿದ್ದನು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X