ಪರೀಕ್ಷೆಯ ನಕಲು ವೀಡಿಯೊ ವೈರಲ್ : ಎಂಐಟಿಯಿಂದ ನಿರಾಕರಣೆ
ಉಡುಪಿ, ನ.27: ಮಣಿಪಾಲದ ಎಂಐಟಿ ವಿದ್ಯಾರ್ಥಿಯೊಬ್ಬ ಸ್ಮಾರ್ಟ್ ವಾಚ್ನಲ್ಲಿ ಪಠ್ಯವನ್ನು ಅಪ್ಲೋಡ್ ಮಾಡಿ ಪರೀಕ್ಷೆಯಲ್ಲಿ ನಕಲು ಮಾಡುವ ವೇಳೆ ಸಿಕ್ಕಿ ಹಾಕಿಕೊಂಡಿರುವುದಾಗಿ ಹೇಳುವ ವಿಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ವಿಚಾರವನ್ನು ಎಂಐಟಿ ಆಡಳಿತ ಮಂಡಳಿ ತಳ್ಳಿಹಾಕಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ವಿಡಿಯೋಗೂ ಎಂಐಟಿಗೂ ಯಾವುದೇ ಸಂಬಂಧ ಇಲ್ಲ. ಎಂಐಟಿಯಲ್ಲಿ ಅಂತಹ ಯಾವುದೇ ಘಟನೆಗಳು ನಡೆದಿಲ್ಲ. ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಎಂಐಟಿ ಹೆಸರು ಹಾಳು ಮಾಡಲು ಈ ರೀತಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಎಂಐಟಿ ನಿರ್ದೇಶಕ ಡಾ.ಶ್ರೀಕಾಂತ್ ರಾವ್ ಸ್ಪಷ್ಟಪಡಿಸಿದ್ದಾರೆ.
Next Story