Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಟೋಲ್‌ಗೇಟ್‌ಗಳಲ್ಲಿ ಫಾಸ್ಟ್ ಟ್ಯಾಗ್...

ಟೋಲ್‌ಗೇಟ್‌ಗಳಲ್ಲಿ ಫಾಸ್ಟ್ ಟ್ಯಾಗ್ ಅಳವಡಿಕೆ ಡಿಜಿಟಲ್ ಹೆಸರಲ್ಲಿ ಜನರ ಕಿಸೆಗೆ ಕತ್ತರಿ: ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ27 Nov 2019 9:50 PM IST
share

 ಉಡುಪಿ, ನ.27: ಹೆದ್ದಾರಿ ಟೋಲ್‌ಗೇಟ್‌ಗಳಲ್ಲಿ ಯಾವುದೇ ಮೂಲ ಸೌಕರ್ಯಗಳನ್ನು ಒದಗಿಸದೆ ಫಾಸ್ಟ್‌ಟ್ಯಾಗ್ ಮೂಲಕ ಕೇಂದ್ರ ಸರಕಾರ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್ ವಸೂಲಿ ಮಾಡ ಹೊರಟಿರುವುದು ಖಂಡನೀಯ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಭಾಸ್ಕರ್ ರಾವ್ ಕಿದಿಯೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫಾಸ್ಟ್‌ಟ್ಯಾಗ್ ಅಳವಡಿಕೆಯೊಂದಿಗೆ ಸ್ಥಳೀಯ ವಾಹನಗಳಿಗೆ ರಿಯಾಯಿತಿ ರದ್ಧು ಪಡಿಸಿರುವುದು ಪರಿಸರದ ನಿವಾಸಿಗಳ ಸಮಸ್ಯೆ ಉಲ್ಬಣಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಪ್ರಾಧಿಕಾರ ಸ್ಥಳಿಯರ ಬೇಡಿಕೆಗೆ ಸ್ಪಂದಿಸಬೇಕಾಗಿದೆ. ಫಾಸ್ಟ್ ಟ್ಯಾಗ್ ಇಲ್ಲದಿದ್ದಲ್ಲಿ ನಗದು ಸುಂಕ ಪಾವತಿಯನ್ನು ಡಿ.1ರಿಂದ ದುಪ್ಪಟ್ಟು ಗೊಳಿಸಿರುವುದು ಹಾಗೂ ನಗದು ಪಾವತಿಗೆ ಒಂದೇ ಗೇಟ್ ಮಾತ್ರ ಕಲ್ಪಿಸಲಾಗುವುದು ಎಂಬ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹೇಳಿಕೆ ಜನರ ಸಮಸ್ಯೆಯನ್ನು ದ್ವಿಗುಣಗೊಳಿಸಿದೆ ಎಂದವರು ಫಾಸ್ಟ್‌ಟ್ಯಾಗ್ ಅಳವಡಿಕೆ ಗೊಂದಲದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಒಂದೆಡೆ ದ್ವಿಗುಣ ಶುಲ್ಕ, ಇನ್ನೊಂದೆಡೆ ಒಂದೇ ಗೇಟಿನಿಂದಾಗಿ ದಟ್ಟಣೆ ಹೆಚ್ಚಬಹುದೆಂಬ ಭೀತಿ ಇದ್ದು, ಇದರಿಂದ ಜನಸಾಮಾನ್ಯರ ಸಮಸ್ಯೆ ಹೆಚ್ಚಾಗಲಿದೆ. ಇಷ್ಟರವರೆಗೆ ವಾಹನಗಳಿಗೆ 24 ಗಂಟೆಗಳ ಪ್ರಯಾಣ ಮಾಡುವ ಅವಕಾಶ ಹಾಗೂ ದ್ವಿಮುಖ ವಾಹನ ಸಂಚಾರದ ಟೋಲ್ ಪಾವತಿಸುವ ವ್ಯವಸ್ಥೆಯಿದ್ದು, ಇನ್ನು ಮುಂದೆ ಆ ಅವಕಾಶದಿಂದ ಪ್ರಯಾಣಿಕರು ವಂಚಿತ ರಾಗುವ ಸಂಭವವಿದೆ ಎಂದವರು ತಿಳಿಸಿದ್ದಾರೆ.

ಈ ನಿಯಮ ಜಾರಿಗೊಂಡಲ್ಲಿ ಜನಸಾಮಾನ್ಯನ ಸೌಲಭ್ಯವನ್ನು ಕಸಿದು ಕೊಂಡಂತೆ. ಫಾಸ್ಟ್‌ಟ್ಯಾಗ್ ಅಳವಡಿಕೆಯಿಂದ ಪ್ರಾಧಿಕಾರಕ್ಕೆ ಮೂರರಿಂದ ನಾಲ್ಕು ಪಟ್ಟು ಆದಾಯ ಏರಿಕೆಯಾಗುವುದರಲ್ಲಿ ಸಂಶಯವಿಲ್ಲ. ಜನರ ಹಿತಾಸಕ್ತಿಯನ್ನು ಕಡೆಗಣಿಸಿ ಜನಸಾಮಾನ್ಯರ ಕಿಸೆಗೆ ಕತ್ತರಿಯಾಡಿಸಲು ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ ಎಂದವರು ಆರೋಪಿಸಿದರು.

ಫಾಸ್ಟ್ ಟ್ಯಾಗ್ ಅಳವಡಿಕೆಯೊಂದಿಗೆ ಸುಂಕ ಪಾವತಿಗೆ ಬ್ಯಾಂಕ್ ಖಾತೆಗೆ ಲಿಂಕ್ ಮಾಡಿದಾಗ ಬ್ಯಾಂಕಿನಲ್ಲೂ ನಿರ್ದಿಷ್ಟ ಹಣವನ್ನು ಠೇವಣಿಯಾಗಿ ಇಡ ಬೇಕಾಗುವುದು. ದೇಶದಲ್ಲಿ 15 ಕೋಟಿಗೂ ಅಧಿಕ ವಾಹನಗಳು ಚಾಲನೆಯ ಲ್ಲಿರಬಹುದು. ಎಲ್ಲರೂ ಫಾಸ್ಟ್ ಟ್ಯಾಗ್ ನೊಂದಣಿ ಮಾಡಿಸಿಕೊಂಡಲ್ಲಿ ಬ್ಯಾಂಕ್‌ಗಳಿಗೆ ಬಂಡವಾಳ ಹರಿದು ಬರುವುದಲ್ಲಿ ಸಂಶಯವಿಲ್ಲ. ಫಾಸ್ಟ್ ಟ್ಯಾಗ್ ಅಳವಡಿಕೆ ಬಗ್ಗೆ ಮುತುವರ್ಜಿ ವಹಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ ಹಾಗೂ ಸರ್ವಿಸ್ ರಸ್ತೆ ನಿರ್ಮಾಣದ ಬಗ್ಗೆ ಆಸಕ್ತಿ ವಹಿಸಿಲ್ಲ ಎಂದರು.

ಸುರತ್ಕಲ್ ಟೋಲ್ ಕೇಂದ್ರದ ಕೇವಲ 36 ಕಿ.ಮೀ. ಅಂತರದಲ್ಲಿ ಇನ್ನೊಂದು ಟೋಲ್ ಗೇಟ್ ಇರುವುದನ್ನು ಜನತೆ ವಿರೋಧಿಸಿ ಪ್ರತಿಭಟಿಸಿದರೂ ಹೆದ್ದಾರಿ ಪ್ರಾಧಿಕಾರ ಜನತೆಯ ಬೇಡಿಕೆಗೆ ಸ್ಪಂದಿಸಿಲ್ಲ. ರಾಷ್ಟ್ರೀಯ ಹೆದ್ದಾರಿ ಬಗ್ಗೆಯಾಗಲಿ ಟೋಲ್‌ಗೇಟ್ ನೈಜ ಸಮಸ್ಯೆಯ ಪರಿಹಾರಕ್ಕಾಗಿ ಉಡುಪಿ ಹಾಗೂ ಮಂಗಳೂರು ಸಂಸದರು ಯಾವುದೇ ಕಾಳಜಿ ವಹಿಸಿಲ್ಲ. ಜನರ ಸಮಸ್ಯೆಗಳ ಬಗ್ಗೆ ಗಮನ ಹರಿಸದೆ ಡಿಜಿಟಲ್ ಅಳವಡಿಕೆಯೊಂದಿಗೆ ಜನರ ಕಿಸೆಗೆ ಕತ್ತರಿ ಪ್ರಯೋಗಕ್ಕೆ ಮುಂದಾಗಿರುವುದು ಕೇಂದ್ರದ ಜನವಿರೋಧಿ ನೀತಿಗೆ ಉದಾಹರಣೆಯಾಗಿದೆ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X