ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಲಿಖಿತ ಪರೀಕ್ಷೆ
ಉಡುಪಿ, ನ.27: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸಶಸ್ತ್ರ ಪೊಲೀಸ್ ಕಾನ್‌ಸ್ಟೇಬಲ್ ಮತ್ತು ಮಹಿಳಾ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಗೆ ಜಿಲ್ಲೆಯ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಡಿ.1ರಂದು ಲಿಖಿತ ಪರೀಕ್ಷೆಗಳು ನಡೆಯಲಿವೆ.
ಪೂರ್ಣಪ್ರಜ್ಞ ಕಾಲೇಜು ಉಡುಪಿ, ಪೂರ್ಣಪ್ರಜ್ಞ ಪ.ಪೂ. ಕಾಲೇಜು ಉಡುಪಿ, ಎಂ.ಜಿ.ಎಂ. ಪ.ಪೂ. ಕಾಲೇಜು ಉಡುಪಿ, ಎಂಜಿಎಂ ಕಾಲೇಜು ಉಡುಪಿ, ಡಾ.ಜಿ.ಶಂಕರ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಉಡುಪಿ, ಮಹಿಳಾ ಸರಕಾರಿ ಪ.ಪೂ.ಕಾಲೇಜು ಉಡುಪಿ, ವಿದ್ಯೋದಯ ಪ.ಪೂ. ಕಾಲೇಜು ವಾದಿರಾಜ ರೋಡ್ ಉಡುಪಿ, ಮಿಲಾಗ್ರಿಸ್ ಪ.ಪೂ.ಕಾಲೇಜು ಕಲ್ಯಾಣಪುರ, ಮಿಲಾಗ್ರಿಸ್ ಕಾಲೇಜು ಕಲ್ಯಾಣಪುರ, ವೌಂಟ್ ರೋಸರಿ ಇಂಗ್ಲೀಷ್ ಮೀಡಿಯಮ್ ಸ್ಕೂಲ್ ಕಲ್ಯಾಣಪುರ ಸಂತೆಕಟ್ಟೆ, ಮಾಧವ ಪೈ ಮೆಮೋರಿಯಲ್ ಕಾಲೇಜು ವಿದ್ಯಾನಗರ ಮಣಿಪಾಲ ಈ 11 ಕೇಂದ್ರಗಳಲ್ಲಿ ಡಿ.1ರ ರವಿವಾರದಂದು ಲಿಖಿತ ಪರೀಕ್ಷೆ ನಡೆಯಲಿವೆ.
ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ನಿಗದಿತ ಗುರುತಿನ ಚೀಟಿಯೊಂದಿಗೆ ಪರೀಕ್ಷೆಗೆ ಹಾಜರಾಗ ಬೇಕು. ಲಿಖಿತ ಪರೀಕ್ಷೆಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮತ್ತು ಲಿಖಿತ ಪರೀಕ್ಷೆಯ ಪ್ರವೇಶ ಪತ್ರಕ್ಕಾಗಿ ಇಲಾಖೆಯ ಅಧಿಕೃತ ವೆಬ್‌ಸೈಟ್ www.ksp.gov.inನ್ನು ಪರಿಶೀಲಿಸುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.





