ಒಂದು ದೇಶ, ಒಂದು ಸಂವಿಧಾನ ಜಿಲ್ಲಾ ಮಟ್ಟದ ಕಾರ್ಯಕ್ರಮ

ಉಡುಪಿ, ನ.27: ಪ್ರತಿಯೊಬ್ಬ ಭಾರತೀಯ ಪ್ರಜೆಯು ಸಮಾನತೆ ಮತ್ತು ಸಹೋದರತ್ವದಿಂದ ಬದುಕಬೇಕು. ಭಾರತೀಯ ಸಂವಿಧಾನವು ವಿಶ್ವದಲ್ಲಿಯೇ ಉತ್ಕೃಷ್ಟ ಮತ್ತು ಸದೃಢ ಸಂವಿಧಾನವಾಗಿದ್ದು ಅದನ್ನು ಗೌರವಿಸುವುದು ಭಾರತೀಯರಾದ ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಉಡುಪಿ ಜಿಪಂ ಅ್ಯಕ್ಷ ದಿನಕರ ಬಾಬು ಹೇಳಿದ್ದಾರೆ.
ಮಂಗಳವಾರ ಉಡುಪಿ ಜಿಲ್ಲಾಡಳಿತ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಇದರ ರಾಷ್ಟ್ರೀಯ ಸೇವಾ ಯೋಜನೆಯ ಜಂಟಿ ಆಶ್ರಯದಲ್ಲಿ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಸಂವಿಧಾನ ದಿನಾಚರಣೆಯ ಅಂಗವಾಗಿ ನಡೆದ ಜಿಲ್ಲಾಮಟ್ಟದ ಒಂದು ದೇಶ ಒಂದು ಸಂವಿಧಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಎಸ್. ಹೆಗ್ಡೆ ಸಮಾರಂದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂವಿಧಾನದ ಆಶಯಗಳನ್ನು ಗೌರವಿಸುವಲ್ಲಿ ಯುವ ಜನರ ಪಾತ್ರ ಮಹತ್ವದ್ದು, ಆದುದರಿಂದ ವಿದ್ಯಾರ್ಥಿಗಳು ಸಂವಿಧಾನ ವನ್ನು ಓದಿ ಅರ್ಥೈಸಿಕೊಂಡು ಅನುಷ್ಠಾನಕ್ಕೆ ತರುವಲ್ಲಿ ಕಾರ್ುಪ್ರವೃತ್ತ ರಾಗಬೇಕು ಎಂದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಎಂಜಿಎಂ ಕಾಲೇಜಿನ ಪ್ರಾಧ್ಯಾಪಕ ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಮಾತ ನಾಡಿ, ಪ್ರಜಾಪ್ರುತ್ವದ ಎಲ್ಲ ಸತ್ವ-ತತ್ವಗಳನ್ನು ಮೈಗೂಡಿಸಿಕೊಂಡ ಶ್ರೀಮಂತ ಸಂವಿಧಾನ ನಮ್ಮದು. ಅಲ್ಲದೆ ಅನೇಕತೆಯಲ್ಲಿ ಏಕತೆಯನ್ನು ಕಾಣುವ ಭಾರತ ದೇಶಕ್ಕೆ ಶೋಷಣೆ ಮುಕ್ತ ಸಮಾಜವನ್ನು ನಿರ್ಮಿಸುವ ನಿಟ್ಟಿನಲ್ಲಿ ತಿದ್ದುಪಡಿಗೆ ಅವಕಾಶ ಕಲ್ಪಿಸುವ ಜಗತ್ತಿನ ಸರ್ವಶ್ರೇಷ್ಠ ಸಂವಿಧಾನ ಇದಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಸೈನಿಕ ರಾಧಾಕೃಷ್ಣ ಶೆಣೈ ಗುಂಡಿಬೈಲು ಇವರನ್ನು ಸನ್ಮಾನಿಸಲಾಯಿತು. ಮಂಗಳೂರು ವಿವಿ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಾರಿ ವಿನೀತಾ ರೈ ಕೆ. ಮಾತನಾಡಿದರು. ಪ್ರೊ.ಪ್ರಸಾದ್ ರಾವ್ ಎಂ. ಸ್ವಾಗತಿಸಿದರು. ಡಾ. ದುಗ್ಗಪ್ಪ ಕಜೆಕಾರ್ ಕಾರ್ಯಕ್ರಮ ನಿರೂಪಿಸಿ ಡಾ.ಹೆ್.ಕೆ. ವೆಂಕಟೇಶ ವಂದಿಸಿದರು.
ಕಾರ್ಯಕ್ರಮ ಸಂಚಾಲಕಿ ಪ್ರೊ.ಮೇವಿ ಮಿರಾಂದ ಉಪಸ್ಥಿತರಿದ್ದರು. ಚುನಾವಣಾ ಸಾಕ್ಷರತಾ ಕ್ಲಬ್‌ನ ಸಂಚಾಲಕ ಪ್ರೊ. ಮಂಜುನಾಥ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಪ್ರೊ.ಪ್ರಸಾದ್ ರಾವ್ ಎಂ. ಸ್ವಾಗತಿಸಿದರು. ಡಾ. ದುಗ್ಗಪ್ಪ ಕಜೆಕಾರ್ ಕಾರ್ಯಕ್ರಮ ನಿರೂಪಿಸಿ ಡಾ.ಹೆಚ್.ಕೆ. ವೆಂಕಟೇಶ ವಂದಿಸಿದರು.







