ಉಡುಪಿ: ಪತ್ನಿ, ಇಬ್ಬರು ಮಕ್ಕಳನ್ನು ಹತ್ಯೆಗೈದು ವ್ಯಕ್ತಿ ಆತ್ಮಹತ್ಯೆ

ಉಡುಪಿ : ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ವೆ ಎಂಬಲ್ಲಿ ವ್ಯಕ್ತಿಯೊಬ್ಬರು ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆಗೈದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ರಾತ್ರಿ ಬೆಳಕಿಗೆ ಬಂದಿದೆ.
ಬೆಳ್ವೆ ಗ್ರಾಮದ ಸೂರ್ಗೊಳಿ ಸಮೀಪದ ಸೆತ್ತೋಳಿ ನಿವಾಸಿ ಸೂರ್ಯ ನಾರಾಯಣ ಭಟ್ ಅಲ್ಸೆ (52), ಅವರ ಪತ್ನಿ ಮಾನಸ (50), ಪುತ್ರರಾದ ಸುದೀಂದ್ರ (14), ಸುದೇಶ್ (8) ಮೃತರು ಎಂದು ಗುರುತಿಸಲಾಗಿದೆ.
ಪತ್ನಿ ಮತ್ತು ಮಕ್ಕಳನ್ನು ಮಾರಕಾಯುಧದಿಂದ ಕೊಚ್ಚಿ ಕೊಂದು ನಂತರ ಸೂರ್ಯ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಅಂದಾಜಿಸಲಾಗಿದೆ.
ಸ್ಥಳಕ್ಕೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕಿ ನಿಶಾ ಜೇಮ್ಸ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ವಿವರ ಇನ್ನಷ್ಟೇ ತಿಳಿದು ಬರಬೇಕಾಗಿದೆ.
Next Story





