Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಂಕನಾಡಿ ವಾರ್ಡ್‌ಗೆ 1.37 ಕೋ.ರೂ....

ಕಂಕನಾಡಿ ವಾರ್ಡ್‌ಗೆ 1.37 ಕೋ.ರೂ. ಅನುದಾನ: ಶಾಸಕ ಕಾಮತ್

ವಾರ್ತಾಭಾರತಿವಾರ್ತಾಭಾರತಿ27 Nov 2019 10:41 PM IST
share

ಮಂಗಳೂರು, ನ.27: ಮಹಾನಗರ ಪಾಲಿಕೆ ವತಿಯಿಂದ ಕಂಕನಾಡಿ ವಾರ್ಡಿಗೆ 1.37 ಕೋಟಿ ರೂ. ಅನುದಾನ ಈಗಾಗಲೇ ಬಿಡುಗಡೆಯಾಗಿದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.

ಕಳೆದ ಕೆಲ ತಿಂಗಳ ಹಿಂದೆ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಆಡಳಿತ ಕೊನೆಗೊಂಡ ನಂತರ ಸಾರ್ವಜನಿಕರ ಕೋರಿಕೆಯ ಮೇರೆಗೆ ಲೋಕೋಪಯೋಗಿ ಇಲಾಖೆ, ಕೇಂದ್ರ ಸರಕಾರದ 14ನೇ ಹಣಕಾಸು ಅನುದಾನ ವ್ಯವಸ್ಥೆ, ಮಹಾನಗರ ಪಾಲಿಕೆ ಸಾಮಾನ್ಯ ನಿಧಿ, ಮಳೆಹಾನಿ, ಎಸ್‌ಎಫ್‌ಸಿ ಮುಂತಾದ ವಿವಿಧ ಅನುದಾನಗಳನ್ನು ಜೋಡಿಸಿ ಅಳಪೆ ಮಠದ ಮುಖ್ಯ ರಸ್ತೆಯಿಂದ ರಾಜಕಾಲುವೆಗೆ ಕಾಲು ಸಂಕ ನಿರ್ಮಾಣಕ್ಕೆ 5 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ನಾಗುರಿಯಲ್ಲಿ 150 ಅಡಿ ಉದ್ದ ಹಾಗೂ 10 ಅಡಿ ಅಗಲದ ರಸ್ತೆ ಕಾಂಕ್ರಿಟೀಕರಣಕ್ಕೆ 3.50 ಲಕ್ಷ ರೂ. ಮೀಸಲಿಡಲಾಗಿದೆ ಎಂದು ಹೇಳಿದರು.

ಕಪಿತಾನಿಯೋ - ಪಂಪ್‌ವೆಲ್ ಜಿಪಂ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಸಾರ್ವಜನಿಕ ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕೆ 8 ಲಕ್ಷ ರೂ., ಪಂಪ್‌ವೆಲ್ ಸಮೀಪದ ಎಂಐಒ ಕ್ಯಾನ್ಸರ್ ಆಸ್ಪತ್ರೆಗೆ ಸಂಧಿಸುವ ರಸ್ತೆ ಅಭಿವೃದ್ಧಿಗೆ 10 ಲಕ್ಷ ರೂ., ನೆಕ್ಕರೆಮಾರು ಬಳಿ ಕಿರು ಸೇತುವೆ ಹತ್ತಿರ ತಡೆಗೋಡೆ ನಿರ್ಮಾಣಕ್ಕೆ 5 ಲಕ್ಷ ರೂ., ಕಂಕನಾಡಿ ಮಹಾಲಿಂಗೇಶ್ವರ ದೇವಸ್ಥಾನದ ಮುಖ್ಯರಸ್ತೆ ಸಮೀಪ ಬೃಹತ್ ತೋಡಿಗೆ ತಡೆಗೋಡೆ ನಿರ್ಮಾಣಕ್ಕೆ 5 ಲಕ್ಷ ರೂ., ಪಂಪ್‌ವೆಲ್ ಸಮೀಪ ಬೃಹತ್ ತೋಡಿಗೆ ತಡೆಗೋಡೆ ನಿರ್ಮಾಣಕ್ಕೆ 5 ಲಕ್ಷ ರೂ. ಅನುದಾನ ಬಿಡುಗಡೆಗೊಂಡಿದೆ ಎಂದರು.

ಎಕ್ಕೂರು ಸೇತುವೆಯ ಮುಂದುವರಿದ ಕಾಮಗಾರಿಗೆ 10 ಲಕ್ಷ ರೂ., ಕುಂಟಲಗುಡ್ಡೆ ಕೊರಗಜ್ಜ ದೈವಸ್ಥಾನದ ಬದಿ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ 6 ಲಕ್ಷ ರೂ., ಕುಂಟಲಗುಡ್ಡೆ ಹಿಂದೂ ಯುವಸೇನೆಯ ಕಚೇರಿ ಬಳಿ ರಸ್ತೆ ಚರಂಡಿ ಅಭಿವೃದ್ಧಿ ಕಾಮಗಾರಿಗೆ 8 ಲಕ್ಷ ರೂ., ಕುಂಟಲಗುಡ್ಡೆ ಮುಖ್ಯರಸ್ತೆ, ಚರಂಡಿ ಅಭಿವೃದ್ಧಿಗೆ 5 ಲಕ್ಷ ರೂ., ಕಾವುಬೈಲ್ ಬದಿ ರಸ್ತೆ, ಚರಂಡಿ ಅಭಿವೃದ್ಧಿಗೆ 5 ಲಕ್ಷ ರೂ., ಕಂಕನಾಡಿ ಮಹಾಲಿಂಗೇಶ್ವರ ದೇವಸ್ಥಾನ ರಸ್ತೆ ಬಳಿ ತಡೆಗೋಡೆ ದುರಸ್ತಿ ಕಾಮಗಾರಿಗೆ 4.63 ಲಕ್ಷ ರೂ., ಕಂಕನಾಡಿ ಮಹಾಲಿಂಗೇಶ್ವರ ದೇವಸ್ಥಾನ ರಸ್ತೆ ಬಳಿ ಗಂಗಾ ಬಡಾವಣೆ ಬಳಿ ಚರಂಡಿ ದುರಸ್ತಿ ಕಾಮಗಾರಿಗೆ 4.3 ಲಕ್ಷ ರೂ. ಮೀಸಲಿಡಲಾಗಿದೆ ಎಂದು ಮಾಹಿತಿ ನೀಡಿದರು.

ಎಕ್ಕೂರು ಗುಡ್ಡ ರಸ್ತೆ ಬಳಿ ರಸ್ತೆ ದುರಸ್ತಿ ಕಾಮಗಾರಿಗೆ 4.94 ಲಕ್ಷ ರೂ., ನಾಗುರಿ ಬಿಲ್ಲವ ಸೇವಾ ಸಮಾಜ ಮಂದಿರದ ಬಳಿ ಅಭಿವೃದ್ಧಿ ಕಾಮಗಾರಿಗೆ 5 ಲಕ್ಷ ರೂ., ಗೋರಿಗುಡ್ಡ ಬಸ್ ನಿಲ್ದಾಣ ಬಳಿ ಟೈಲರ್ ಭವನದ ಮುಂದುವರಿದ ಕಾಮಗಾರಿಗೆ 5 ಲಕ್ಷ ರೂ., ಸಾಯಿಬಾಬಾ ಮಂದಿರದ ಬಳಿ ಅಭಿವೃದ್ಧಿ ಕಾಮಗಾರಿಗೆ 4 ಲಕ್ಷ ರೂ., ನೆಕ್ಕರೆಮಾರ್ ಕಟ್ಟೆಪುಣಿಯಲ್ಲಿ ಪರಿಶಿಷ್ಟ ಕಾಲನಿ ಬಳಿ ಅಭಿವೃದ್ಧಿ ಕಾಮಗಾರಿಗೆ 16.70 ಲಕ್ಷ ರೂ., ದಂಬೆ ಬಳಿ ಚರಂಡಿ ತಡೆಗೋಡೆ ನಿರ್ಮಾಣ ಕಾಮಗಾರಿ ಸೇರಿದಂತೆ 20ಕ್ಕೂ ಅಧಿಕ ಕಾಮಗಾರಿಗಳಿಗಾಗಿ 1.37 ಕೋಟಿ ರೂ. ಅನುದಾನ ಬಿಡುಗಡೆಗೊಳಿಸಲಾಗಿದೆ. ಶೀಘ್ರವೇ ಎಲ್ಲ ಕಾಮಗಾರಿಗಳು ನಡೆಯಲಿದೆ ಎಂದು ಶಾಸಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X