ಕುವೆಂಪು ಭಾಷಾ ಭಾರತಿ ವಾರ್ಷಿಕ ಪ್ರಶಸ್ತಿ ಪ್ರಕಟ
ಬೆಂಗಳೂರು, ನ.27: ಕುವೆಂಪು ಭಾಷಾ ಭಾರತಿ ಪ್ರಾಧಿಕಾರವು 2019-20ನೇ ಸಾಲಿನ ಐದು ವಾರ್ಷಿಕ ಗೌರವ ಪ್ರಶಸ್ತಿಗಳು ಮತ್ತು 2018ನೇ ಸಾಲಿನ ಪುಸ್ತಕ ಬಹುಮಾನ ಪುರಸ್ಕೃತರನ್ನು ಪ್ರಾಧಿಕಾರದ ಸರ್ವ ಸದಸ್ಯರ ಸಭೆ ಆಯ್ಕೆ ಮಾಡಿದೆ.
ಪ್ರಸಕ್ತ ಸಾಲಿನ ಗೌರವ ಪ್ರಶಸ್ತಿಗೆ ಡಾ. ಪ್ರಧಾನ್ ಗುರುದತ್ತ, ನಾಡೋಜ ಎಸ್.ಆರ್ ರಾಮಸ್ವಾಮಿ, ಪ್ರೊ. ಬಾಲಚಂದ್ರ ಜಯಶೆಟ್ಟಿ, ಎಲ್.ವಿ ಶಾಂತಕುಮಾರಿ, ಡಾ. ಆರ್. ಲಕ್ಷ್ಮೀನಾರಾಯಣ ಅವರು ಆಯ್ಕೆಯಾಗಿದ್ದಾರೆ.
ಪ್ರಸಕ್ತ ಸಾಲಿನ ಪುಸ್ತಕ ಬಹುಮಾನಕ್ಕೆ ಡಾ.ಕೆ. ಪುಟ್ಟಸ್ವಾಮಿ, ಮೈತ್ರೇಯ ಕರ್ನೂರು, ಡಾ. ಸಿದ್ಧರಾಮ ಸ್ವಾಮೀಜಿ, ಡಾ. ನರೇಂದ್ರ ರೈ ದೇರ್ಲ ಮತ್ತು ಗೀತಾ ಶೆಣೈ ಅವರು ಆಯ್ಕೆಯಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story