ನ. 30: ಜಿಲ್ಲಾಮಟ್ಟದ ಉದ್ಯೋಗ ಮೇಳ
ಮಂಗಳೂರು, ನ.27: ದ.ಕ. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಯುವ ಉದ್ಯೋಗಾಕಾಂಕ್ಷಿಗಳ ಸೇವಾ ಕೇಂದ್ರದಿಂದ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ನ.30ರಂದು ಬೆಳಗ್ಗೆ 9:30ಕ್ಕೆ ಜಿಲ್ಲಾಮಟ್ಟದ ಉದ್ಯೋಗ ಮೇಳವನ್ನು ಬಂಟ್ವಾಳ ತಾಲೂಕಿನ ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಸುಮಾರು 50ಕ್ಕಿಂತ ಹೆಚ್ಚು ಕಂಪೆನಿಗಳು ಭಾಗವಹಿಸಲಿದ್ದು, ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಎಸೆಸೆಲ್ಸಿ, ಪಿಯುಸಿ, ಐಟಿಐ, ಪದವಿ, ಬಿ.ಎಡ್, ಡಿ.ಫಾರ್ಮ, ಬಿ.ಫಾರ್ಮ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಹಾಗೂ ಡ್ರೈವರ್ ಆಗಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ದಾಖಲೆಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಂಗಳೂರು ಇವರನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.
Next Story





