Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಾಂದಲಪಟ್ಟಿಗೆ ಹಳದಿ ಫಲಕದ ವಾಹನಗಳಿಗೆ...

ಮಾಂದಲಪಟ್ಟಿಗೆ ಹಳದಿ ಫಲಕದ ವಾಹನಗಳಿಗೆ ಮಾತ್ರ ಅವಕಾಶ: ಜಿಲ್ಲಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ27 Nov 2019 11:02 PM IST
share
ಮಾಂದಲಪಟ್ಟಿಗೆ ಹಳದಿ ಫಲಕದ ವಾಹನಗಳಿಗೆ ಮಾತ್ರ ಅವಕಾಶ: ಜಿಲ್ಲಾಧಿಕಾರಿ ಸೂಚನೆ

ಮಡಿಕೇರಿ, ನ.27: ತಾಲೂಕಿನ ಪ್ರವಾಸಿ ತಾಣ ಮಾಂದಲಪಟ್ಟಿಗೆ ಹಳದಿ ಬಣ್ಣದ ನೋಂದಣಿ ಫಲಕ (ಯೆಲ್ಲೊ ಬೋರ್ಡ್) ಹೊಂದಿರುವ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಮಾಡಲು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.  

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾಂದಲ್ಪಟ್ಟಿಗೆ ತೆರಳುವ ವಾಹನಗಳ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. 

ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸಮಿತಿ ಸದಸ್ಯರಿಂದ ಮಾಹಿತಿ ಪಡೆದು ಮಾತನಾಡಿ ಹಳದಿ ಬಣ್ಣದ ನಂಬರಿನ ಫಲಕದ ವಾಹಗಳಿಗೆ ಮಾತ್ರ ಮಾಂದಲಪಟ್ಟಿ ಪ್ರವೇಶಕ್ಕೆ ಅವಕಾಶ ನೀಡಲಾಗುವುದು. ಸಮಿತಿ ನೀಡುವ ನಿಬಂಧನೆಗಳನ್ನು ಚಾಲಕರು ಪಾಲಿಸಬೇಕು ಎಂದು ನಿರ್ದೇಶನ ನೀಡಿದರು. ಪ್ರವಾಸಿಗರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. 

ಮಾಂದಲಪಟ್ಟಿಗೆ ತೆರಳುವ ಹಳದಿ ಬಣ್ಣದ ನೋಂದಣಿ ಫಲಕ ವಾಹನಗಳ ಸಂಬಂಧ ಪ್ರಾದೇಶಿಕ ಸಾರಿಗೆ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆಯಲ್ಲಿ ಗುರುತಿನ ಚೀಟಿ ಪಡೆಯುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಮಾತನಾಡಿ, ಮಾಂದಲಪಟ್ಟಿಗೆ ತೆರಳುವ ರಸ್ತೆ ಮಾರ್ಗ ಸ್ಪೀಡ್ ಬ್ರೇಕರ್ ಹಾಗೂ ಸಿಸಿಟಿವಿ ಅಳವಡಿಸುವ ಸಂಬಂಧ ಪಂಚಾಯತ್ ರಾಜ್, ಪೊಲೀಸ್ ಇಲಾಖೆ ಹಾಗೂ ಇಂಜಿನಿಯರ್ ಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಲಹೆ ಮಾಡಿದರು. ವಾರಾಂತ್ಯದಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಮಾಂದಲಪಟ್ಟಿಗೆ ಭೇಟಿ ನೀಡುವುದರಿಂದ ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಮೋಟಾರು ವಾಹನ ನಿರೀಕ್ಷಕರನ್ನು ನಿಯೋಜಿಸಬೇಕು ಎಂದರು. 

ಪಾನಮತ್ತರಾಗಿ ವಾಹನ ಚಲಾಯಿಸುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಪಾನಮತ್ತರಾಗಿ ವಾಹನ ಚಲಾಯಿಸುವ ಚಾಲಕರ ಪರವಾನಗಿಯನ್ನು ರದ್ದುಪಡಿಸಲು ಕ್ರಮ ವಹಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. 

ಮಾಂದಲಪಟ್ಟಿ ಬಳಿ ಅರಣ್ಯ ಇಲಾಖೆಯವರು ಅಳಡಿಸಿರುವ ಗೇಟ್‍ನಿಂದ ಒಳ ಪ್ರವೇಶಿಸುವ ವಾಹನಗಳಿಗೆ 50 ರೂ. ಮತ್ತು ಒಬ್ಬ ಪ್ರವಾಸಿಗರಿಗೆ 25 ರೂ. ಪಡೆಯಲಾಗುವುದು ಹಾಗೂ ಗೇಟ್ ಬಳಿ ವಾಹನ ನಿಲುಗಡೆ ಮಾಡಿದ್ದಲ್ಲಿ ಪಂಚಾಯತ್ ರಾಜ್ ಇಲಾಖೆಯವರು 4 ಚಕ್ರದ ವಾಹನಗಳಿಗೆ 25 ರೂ. ಮತ್ತು ದ್ವಿಚಕ್ರದ ವಾಹನಗಳಿಗೆ 15 ರೂ. ಶುಲ್ಕ ಪಡೆಯಲಾಗುವುದು ಎಂದು ಸಮಿತಿ ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರ್ ಹಾಗೂ ತಾ.ಪಂ.ಇಒ ಲಕ್ಷ್ಮಿ ಅವರು ತಿಳಿಸಿದರು. ಅರಣ್ಯ ಅಥವಾ ಪಂಚಾಯತ್ ರಾಜ್ ಯಾವುದರೂ ಒಂದು ಇಲಾಖೆಯವರು ಮಾತ್ರ ವಾಹನ ನಿಲುಗಡೆ ಶುಲ್ಕ ಪಡೆಯಲಾಗುತ್ತದೆ ಎಂದು ಎಂದು ಅವರು ಮಾಹಿತಿ ನೀಡಿದರು.   

ಡಿವೈಎಸ್‍ಪಿ ದಿನೇಶ್ ಕುಮಾರ್ ಮಾತನಾಡಿ, ಮಾಂದಲಪಟ್ಟಿಗೆ ತೆರಳುವ ವಾಹನಗಳು ಮಡಿಕೇರಿ ಮತ್ತು ಗಾಳಿಬೀಡು ಗ್ರಾ.ಪಂ.ಕಚೇರಿ ಬಳಿ ನಿಲುಗಡೆ ಮಾಡಬಹುದಾಗಿದೆ ಎಂದರು. ಜಿಲ್ಲಾ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಧಿಕಾರಿ ಪಿ.ಚಂದನ್ ಅವರು ಮಾತನಾಡಿ, ಅಗ್ನಿಶಾಮಕ ಇಲಾಖೆಯಿಂದ ವಾಹನ ಸುಸ್ಥಿತಿ ದೃಢೀಕರಿಸುವ ‘ಕಿರು ಅಗ್ನಿನಂದಕ’ವನ್ನು ವಾಹನಗಳಿಗೆ ಅಳವಡಿಸಿಕೊಳ್ಳುವಂತಾಗಬೇಕು ಎಂದು ಸಲಹೆ ಮಾಡಿದರು.  

ಸಮಿತಿ ಸದಸ್ಯರಾದ ಧನಂಜಯ ಹಾಗೂ ಥಾಮಸ್ ಅವರು ವಾಹನ ಚಾಲಕರ ಅಹವಾಲು ಮತ್ತಿತರ ಸಂಬಂಧ ಸಮಿತಿ ಸಭೆಯಲ್ಲಿ ಮಾಹಿತಿ ನೀಡಿದರು.  

ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ್ ಶಿರಾಲಿ, ವ್ಯವಸ್ಥಾಪಕ ಶಿವಣ್ಣ, ತಾ.ಪಂ.ಇಒ ಲಕ್ಷ್ಮಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಧನಂಜಯ, ಪೊಲೀಸ್ ಇನ್ಸ್ ಪೆಕ್ಟರ್ ಚಂದ್ರಶೇಖರ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಘವೇಂದ್ರ, ಪಿಡಿಒಗಳಾದ ಶಶಿಕಲಾ(ಗಾಳಿಬೀಡು) ಮತ್ತು ನಂಜುಂಡಸ್ವಾಮಿ (ಕೆ.ನಿಡುಗಣೆ) ಅವರು ಹಲವು ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X