ಎಸ್ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಅಬ್ದುಲ್ ಕಲಾಂ ಆಯ್ಕೆ
ಸುಳ್ಯ: ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಸುಳ್ಯ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಅಬ್ದುಲ್ ಕಲಾಂ ನೇಮಕಗೊಂಡಿದ್ದಾರೆ. ಅವರು ಎಸ್ಡಿಪಿಐಯ ಆರಂಭದ ಐದು ವರ್ಷ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಎಸ್ ಡಿಪಿಐ ಸುಳ್ಯ ನಗರಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ.
15 ವರ್ಷಗಳ ಕಾಲ ಸುಳ್ಯ ತಾಲೂಕು ಅಲ್ಪಸಂಖ್ಯಾತ ಸಹಕಾರಿ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಸಹಕಾರಿ ಸಂಘಕ್ಕೆ 2010ರಲ್ಲಿ ನಡೆದ ಜುನಾವಣೆಯಲ್ಲಿ ಎಸ್ಡಿಪಿಐ ಬೆಂಬಲಿತವಾಗಿ ಸ್ಪರ್ದಿಸಿ ಜಯಗಳಿಸಿದ್ದರು.
ಇತ್ತೀಚೆಗೆ ನಡೆದ ಸುಳ್ಯ ನಗರ ಪಂಚಾಯತ್ ಚುನಾವಣೆಯಲ್ಲಿ ನಾವೂರು ವಾರ್ಡ್ ನಿಂದ ಎಸ್ ಡಿಪಿಐ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಅವರು ರೋಟರಿ ಕ್ಲಬ್ ಸೇರಿ ವಿವಿಧ ಸಂಘ ಸಂಸ್ಥೆಗಳಲ್ಲಿಯೂ ಸಕ್ರೀಯರಾಗಿದ್ದಾರೆ.
Next Story