Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿದ್ದರಾಮಯ್ಯ ಸಿಂಗಲ್ ಸ್ಟಾರ್: ಸಚಿವ...

ಸಿದ್ದರಾಮಯ್ಯ ಸಿಂಗಲ್ ಸ್ಟಾರ್: ಸಚಿವ ಶ್ರೀರಾಮುಲು

ವಾರ್ತಾಭಾರತಿವಾರ್ತಾಭಾರತಿ28 Nov 2019 7:00 PM IST
share
ಸಿದ್ದರಾಮಯ್ಯ ಸಿಂಗಲ್ ಸ್ಟಾರ್: ಸಚಿವ ಶ್ರೀರಾಮುಲು

ರಾಣೆಬೆನ್ನೂರು, ನ.28: ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದ ಆಡಳಿತಾವಧಿಯಲ್ಲಿ ಉತ್ತರ ಕರ್ನಾಟಕ ಹಾಗೂ ಮಧ್ಯ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಲಾಗಿತ್ತು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಆರೋಪಿಸಿದ್ದಾರೆ.

ಗುರುವಾರ ನಗರದ ಬಿಜೆಪಿ ಕಚೇರಿ ಎದುರು ಆಯೋಜಿಸಲಾಗಿದ್ದ ಎಸ್ಸಿ-ಎಸ್ಟಿ ಸಮುದಾಯದ ಬೃಹತ್ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್ ಕುಮಾರ್ ಪರವಾಗಿ ಮತ ಯಾಚನೆ ಮಾಡುತ್ತಾ ಅವರು ಮಾತನಾಡಿದರು.

ಕುಮಾರಸ್ವಾಮಿ ಮಾಡಿದ ನಿರ್ಲಕ್ಷದ ಆಡಳಿತದಿಂದ ಬೇಸತ್ತು, 17 ಮಂದಿ ಕಾಂಗ್ರೆಸ್, ಜೆಡಿಎಸ್ ಶಾಸಕರು ತಮ್ಮ ಶಾಸಕ ಸ್ಥಾನಗಳಿಗೆ ರಾಜೀನಾಮೆ ನೀಡಿದರು. ಈ 15 ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಪ್ರಕಟವಾದ ಬಳಿಕ, ಮತ್ತಷ್ಟು ಕಾಂಗ್ರೆಸ್ ಹಾಗೂ ಜೆಡಿಎಸ್‌ನ ಶಾಸಕರು ಬಿಜೆಪಿಗೆ ಸೇರ್ಪಡೆಯಾಗಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಶ್ರೀರಾಮುಲು ಹೇಳಿದರು.

ಕುಮಾರಸ್ವಾಮಿ ದಿನಕ್ಕೊಂದು ಹೇಳಿಕೆ ಕೊಡುತ್ತಿದ್ದಾರೆ. ಉಪ ಚುನಾವಣೆ ಬಳಿಕ ಯಾವುದೇ ಕಾರಣಕ್ಕೂ ಬಿಜೆಪಿ ಸರಕಾರ ಬೀಳಲು ಬಿಡುವುದಿಲ್ಲ ಎಂದು ಹೇಳಿಕೆ ನೀಡಿದ್ದ ಕುಮಾರಸ್ವಾಮಿ, ಇದೀಗ ಉಲ್ಟಾ ಹೊಡೆಯುತ್ತಿದ್ದು, ನಾನು ಯಾವ ಪಕ್ಷದ ಸರಕಾರ ಎಂದು ಹೇಳಿರಲಿಲ್ಲ ಎನ್ನುತ್ತಿದ್ದಾರೆ ಎಂದು ಶ್ರೀರಾಮುಲು ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಸಿಂಗಲ್ ಸ್ಟಾರ್: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಿಂಗಲ್ ಸ್ಟಾರ್, ಅವರ ಜೊತೆ ಯಾವ ಕಾಂಗ್ರೆಸ್ ನಾಯಕರು ಇಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರನ್ನು ತುಳಿದು ಸಿದ್ದರಾಮಯ್ಯ ಇವತ್ತು ಈ ಮಟ್ಟಕ್ಕೆ ಬೆಳೆದಿದ್ದಾರೆ ಎಂದು ಅವರು ಆರೋಪಿಸಿದರು.

ದಲಿತ ಸಮುದಾಯದ ನಾಯಕ ಡಾ.ಜಿ.ಪರಮೇಶ್ವರ್ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ, ಎಲ್ಲಿ ಮುಖ್ಯಮಂತ್ರಿ ಆಗುತ್ತಾರೆ ಎಂದು 2013ರ ಚುನಾವಣೆಯಲ್ಲಿ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಮುಂದೆ ನಿಂತು ಅವರನ್ನು ಚುನಾವಣೆಯಲ್ಲಿ ಸೋಲಿಸಿದರು ಎಂದು ಶ್ರೀರಾಮುಲು ದೂರಿದರು.

ರಾಜ್ಯದಲ್ಲಿ ಆರು ವರ್ಷಗಳ ಕಾಲ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಈ ಅವಧಿಯಲ್ಲಿ ಸಿದ್ದರಾಮಯ್ಯ ಹಿಂದುಳಿದ ವರ್ಗಗಳಿಗೆ ಏನು ಅನುಕೂಲ ಮಾಡಿಕೊಟ್ಟಿದ್ದಾರೆ? ಈ ವರ್ಗಗಳ ಅಭಿವೃದ್ಧಿಗೆ ಯಾವ ಯಾವ ಕಲ್ಯಾಣ ಕಾರ್ಯಕ್ರಮಗಳು, ಯೋಜನೆಗಳನ್ನು ಜಾರಿಗೆ ತಂದಿದ್ದಾರೆ? ಅವುಗಳಿಂದ ಹಿಂದುಳಿದ ವರ್ಗಗಳಿಗೆ ಆಗಿರುವ ಲಾಭ ಏನು? ಎಂಬುದರ ಕುರಿತು ನನ್ನ ಜೊತೆ ಬಹಿರಂಗ ಚರ್ಚೆಗೆ ಬರಲಿ ಎಂದು ಸಿದ್ದರಾಮಯ್ಯಗೆ ಶ್ರೀರಾಮುಲು ಸವಾಲು ಹಾಕಿದರು.

ಈ ಸಂದರ್ಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಂ.ಪಿ.ರೇಣುಕಾಚಾರ್ಯ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X