ಆಪರೇಷನ್ ಕಮಲ ಮಾಡಿದ್ದಕ್ಕೆ ಸಾಕ್ಷಿಗಳಿವೆ: ದಿನೇಶ್ ಗುಂಡೂರಾವ್

ಹುಬ್ಬಳ್ಳಿ, ನ.28: ರಾಜ್ಯದಲ್ಲಿ ಬಿಜೆಪಿ ಪಕ್ಷ ಆಪರೇಷನ್ ಕಮಲ ಮಾಡಿದ್ದು ಸತ್ಯ. ಆ ಬಗ್ಗೆ ಸಾಕಷ್ಟು ಸಾಕ್ಷಿಗಳಿವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇಂದಿಲ್ಲಿ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಬಿಜೆಪಿ ಮುಖಂಡರು ಶಾಸಕ ಶ್ರೀನಿವಾಸಗೌಡ ಮನೆಗೆ ಬಂದು ಐದು ಕೋಟಿ ಕೊಡುತ್ತೇವೆ ಎಂಬ ಆಮಿಷವನ್ನೊಡ್ಡಿದ್ದರು. ಇದು ಇಡೀ ರಾಜ್ಯದ ಜನತೆಗೆ ತಿಳಿದಿದೆ. ಹಿಂದೆ ಮುಖ್ಯಮಂತ್ರಿ ಯಡಿಯೂರಪ್ಪ ಆಡಿಯೋ ರೆಕಾರ್ಡ್ ಮಾಡಿದ್ದು, ಆಪರೇಷನ್ ಕಮಲ ಆಗಿದ್ದಂತೂ ಸತ್ಯ ಎಂದು ಪ್ರತಿಪಾದಿಸಿದರು.
ಅನರ್ಹ ಶಾಸಕರು ಮುಂಬೈನ ಪ್ರತಿಷ್ಠಿತ ಹೊಟೇಲ್‌ಗಳಲ್ಲಿ ಇದ್ದಿದ್ದು ರಾಜ್ಯದ ಜನತೆಗೆ ತಿಳಿದಿದೆ. ಅನರ್ಹ ಶಾಸಕರು ತಮ್ಮನ್ನು ತಾವು ಮಾರಿಕೊಂಡಿದ್ದಾರೆ. ಮತದಾರರಿಗೆ ಅನರ್ಹ ಶಾಸಕ ಬಿ.ಸಿ.ಪಾಟೀಲ್ ಯಾವ ರೀತಿ ನಡೆದುಕೊಂಡಿದ್ದಾರೆ ಎಂಬುದು ತಿಳಿದಿದೆ ಎಂದು ಹೇಳಿದರು.
Next Story





