ವ್ಯಾಸಂಗ ವೇತನ/ಫೆಲೋಶಿಪ್‌ಗೆ ಅರ್ಜಿ ಆಹ್ವಾನ
ಉಡುಪಿ, ನ.28: 2019-20ನೇ ಸಾಲಿಗೆ ಪೂರ್ಣಾವಧಿ ಪಿಹೆಚ್‌ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, 3ಬಿ ಹಾಗೂ ಹಾಗೂ ಇತರ ಒಬಿಸಿ ವರ್ಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಮಾಸಿಕ 10,000ರೂ.ನಂತೆ ವ್ಯಾಸಂಗ ವೇತನ/ ಫೆಲೋಶಿಪ್ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಇಲಾಖೆಯಿಂದ ಈ ಹಿಂದೆ ಮಾಸಿಕ ವ್ಯಾಸಂಗ ವೇತನ /ಫೆಲೋಶಿಪ್‌ಗೆ ಆಯ್ಕೆಯಾಗಿದ್ದು, ಪ್ರಸ್ತುತ ಸಾಲಿನಲ್ಲಿ ಮುಂದುವರಿಯು ತ್ತಿರುವ ಅರ್ಹ ನವೀಕರಣ ವಿದ್ಯಾರ್ಥಿಗಳು ಹಾಗೂ 2019-20ನೇ ಸಾಲಿನಲ್ಲಿ ಪ್ರಥಮ ವರ್ಷ ಅಧ್ಯಯನ ನಡೆಸುತ್ತಿರುವ ಹೊಸ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಡಿ.12 ಕೊನೆಯ ದಿನ.
ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‌ಸೈಟ್ www.backwardclasses.kar.nic.in ಹಾಗೂ ದೂರವಾಣಿ ಸಂಖ್ಯೆ: 8050770004 ಹಾಗೂ 0820-2573881ನ್ನು ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Next Story





