Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕನ್ನಡ ಕಲಿಸದ ಸಿಬಿಎಸ್‌ಇ ಶಾಲೆಗೆ...

ಕನ್ನಡ ಕಲಿಸದ ಸಿಬಿಎಸ್‌ಇ ಶಾಲೆಗೆ ನೋಟಿಸ್: ಎಡಿಸಿ ರೂಪಾ

ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ

ವಾರ್ತಾಭಾರತಿವಾರ್ತಾಭಾರತಿ28 Nov 2019 10:30 PM IST
share
ಕನ್ನಡ ಕಲಿಸದ ಸಿಬಿಎಸ್‌ಇ ಶಾಲೆಗೆ ನೋಟಿಸ್: ಎಡಿಸಿ ರೂಪಾ

ಮಂಗಳೂರು, ನ.28: ಕನ್ನಡ ಭಾಷೆ ಕಲಿಸದ ಅಥವಾ ದ್ವಿತೀಯ ಭಾಷೆಯಾಗಿ ಕನ್ನಡ ಕಲಿಸದ ಸಿಬಿಎಸ್‌ಇ ಸಿಲಬಸ್ ಹೊಂದಿರುವ ಶಾಲೆಗಳಿಗೆ ನೋಟಿಸ್ ಜಾರಿ ಮಾಡಲು ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಸಿಬಿಎಸ್‌ಇ ಶಿಕ್ಷಣ ವ್ಯವಸ್ಥೆಯ ಶಾಲೆಗಳಲ್ಲಿ ಕನ್ನಡವನ್ನು ದ್ವಿತೀಯ ಭಾಷೆಯನ್ನಾಗಿ ಕಡ್ಡಾಯವಾಗಿ ಕಲಿಸಬೇಕಿದೆ. ಆದರೆ ನಗರದ ಕೆಲವು ಸಿಬಿಎಸ್‌ಇ ಶಾಲೆಗಳಲ್ಲಿ ಕನ್ನಡವನ್ನು ತೃತೀಯ ಭಾಷೆಯನ್ನಾಗಿ ಕಲಿಸುತ್ತಿರುವ ಬಗ್ಗೆ ದೂರುಗಳು ಬಂದಿವೆ. ಈ ನಿಟ್ಟಿನಲ್ಲಿ ಇಂತಹ ಶಾಲೆಗಳಿಗೆ ಕೂಡಲೇ ನೋಟಿಸ್ ಜಾರಿ ಮಾಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿ ದರು. ಕೂಡಲೇ ಜಿಲ್ಲೆಯ ಎಲ್ಲ ಸಿಬಿಎಸ್‌ಇ ಶಾಲೆಗಳಲ್ಲಿ ತಪಾಸಣೆ ನಡೆಸಿ ಪರಿಶೀಲಿಸಲು ಅವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಡಿಡಿಪಿಐ ವಾಲ್ಟರ್ ಡಿಮೆಲ್ಲೋ ಮಾತನಾಡಿ, ಸಿಬಿಎಸ್‌ಇ ಶಾಲೆಗಳಲ್ಲಿ ಕನ್ನಡ ಕಲಿಕೆ ಪರಿಶೀಲಿಸಲು ಈಗಾಗಲೇ ಇಲಾಖೆಯಲ್ಲಿ ಅಧಿಕಾರಿಗಳ ತಂಡ ರಚಿಸಲಾಗಿದೆ. ತಕ್ಷಣದಿಂದಲೇ ಕಾಯೋನ್ಮುಖರಾಗಲಿದ್ದೇವೆ ಎಂದು ತಿಳಿಸಿದರು.

ಕೇಂದ್ರೀಯ ವಿದ್ಯಾಲಯಗಳಲ್ಲಿ ಕನ್ನಡ ಕಲಿಸದೇ ಇರುವುದನ್ನು ಡಿಡಿಪಿಐ ವಾಲ್ಟರ್ ಡಿಮೆಲ್ಲೋ ಸಭೆಯ ಗಮನಕ್ಕೆ ತಂದರು. ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಕೇಂದ್ರೀಯ ವಿದ್ಯಾಲಯದ ಮುಂದಿನ ಸಭೆಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ರೂಪಾ ತಿಳಿಸಿದರು.

ಜಿಲ್ಲೆಯ ಎಲ್ಲ ಸರಕಾರಿ ಕಚೇರಿಗಳಲ್ಲಿ ಕನ್ನಡ ಅನುಷ್ಠಾನ ಸಮಿತಿ ರಚಿಸಿ, ಆಗಿಂದಾಗ್ಗೆ ಕಚೇರಿಯಲ್ಲಿ ಪರಿಶೀಲಿಸಬೇಕು. ಸರಕಾರಿ ವಾಹನಗಳ ನೋಂದಣಿ ಸಂಖ್ಯೆಯನ್ನು ಇಂಗ್ಲಿಷ್ ಲಿಪಿಯೊಂದಿಗೆ ಕನ್ನಡ ಲಿಪಿಯಲ್ಲಿಯೂ ನಮೂದಿಸಬೇಕು. ಕಚೇರಿಯ ಪ್ರಕಟಣೆ, ಸುತ್ತೋಲೆ ಹಾಗೂ ಕಾರ್ಯಸೂಚಿಗಳನ್ನು ಕನ್ನಡ ಭಾಷೆಯಲ್ಲಿಯೇ ಹೊರತರಬೇಕು ಎಂದು ಅಪರ ಜಿಲ್ಲಾಧಿಕಾರಿ ಸೂಚಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಮುಂದಿನ ವಾರ ಜಿಲ್ಲೆಯಲ್ಲಿ ಪ್ರಗತಿ ಪರಿಶೀಲನೆ ನಡೆಸಲಿದ್ದು, ಎಲ್ಲ ಇಲಾಖೆಯವರು ಈ ಬಗ್ಗೆ ಸಿದ್ಧತೆ ನಡೆಸಲು ಅವರು ಸೂಚಿಸಿದರು.

ಸಭೆಯಲ್ಲಿ ಮಂಗಳೂರು ಉಪವಿಭಾಗಾಧಿಕಾರಿ ರವಿಚಂದ್ರ ನಾಯಕ್, ನಗರಪಾಲಿಕೆ ಉಪ ಆಯುಕ್ತ ಸಂತೋಷ್ ಕುಮಾರ್, ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X