ನ.30ರಂದು ಜಲಮಂಡಳಿ ಫೋನ್ ಇನ್ ಕಾರ್ಯಕ್ರಮ
ಬೆಂಗಳೂರು, ನ.28: ಬೆಂಗಳೂರು ಜಲ ಮಂಡಳಿಯ ವತಿಯಿಂದ ನ.30 ರಂದು ಮಂಡಳಿಯ ಅಧ್ಯಕ್ಷರೊಂದಿಗೆ ನೇರ ಫೋನ್-ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ.
ಶನಿವಾರ ಬೆ.9 ರಿಂದ 10-30 ವರೆಗೆ ಫೋನ್ ಇನ್ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರು ತಮ್ಮ ವಲಯ ಹಾಗೂ ಪ್ರದೇಶದಲ್ಲಿನ ಕುಡಿಯುವ ನೀರಿನ ಸಮಸ್ಯೆ ಹಾಗೂ ಒಳಚರಂಡಿ ಕೊಳವೆ ಅಥವಾ ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರ ಬರುತ್ತಿರುವ ಬಗ್ಗೆ ಜಲಮಾಪನ ಹಾಗೂ ನೀರಿನ ಬಿಲ್ಲಿನ ಸಮಸ್ಯೆಯ ಬಗ್ಗೆ ನೇರವಾಗಿ ಕುಂದು-ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ.
ಸಾರ್ವಜನಿಕರು 080-22945119 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ. ನೀರಿನ ಸಂಪರ್ಕ ಹೊಂದಿರುವ ಗ್ರಾಹಕರು ತಮ್ಮ ಆರ್.ಆರ್.ಸಂಖ್ಯೆಯನ್ನು ತಿಳಿಸಿ ದೂರನ್ನು ನೀಡಬೇಕಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story





