ವಿಧಾನಸಭೆ ಉಪಚುನಾವಣೆ: ಡಿ.3ರಿಂದ ಮದ್ಯ ನಿಷೇಧ

ಬೆಂಗಳೂರು, ನ.28: ವಿಧಾನಸಭೆ ಉಪಚುನಾವಣೆ ನಡೆಯುತ್ತಿರುವ ಕೆ.ಆರ್.ಪುರ, ಯಶವಂತಪುರ, ಮಹಾಲಕ್ಷ್ಮಿಲೇಔಟ್, ಶಿವಾಜಿನಗರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಡಿ.3ರ ಸಂಜೆ 6ರಿಂದ ಮತದಾನ ನಡೆಯುವ ಡಿ.5ರ ಮಧ್ಯರಾತ್ರಿ 12ರವರೆಗೆ ಮದ್ಯ ನಿಷೇಧಿಸಿ ನಗರ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ.
ವಿಧಾನಸಭೆಯ ಉಪಚುನಾವಣೆಯಲ್ಲಿ ಮತದಾರರು ಮುಕ್ತ ಮತ್ತು ನ್ಯಾಯಸಮ್ಮತ ಮತದಾನಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಮತದಾನ ಮುಕ್ತಾಯದ ಹಿಂದಿನ 48ಗಂಟೆ ಕ್ಷೇತ್ರ ವ್ಯಾಪ್ತಿಯಲ್ಲಿ ಪಾನ ನಿರೋಧ ದಿನವೆಂದು ಘೋಷಿಸಲು ಚುನಾವಣಾ ಆಯೋಗವು ನಿರ್ದೇಶನ ನೀಡಿದೆ. ಆ ಪ್ರಕಾರವಾಗಿ ಮದ್ಯಪಾನ ನಿಷೇಧಿಸಲಾಗಿದೆ. ಮತದಾನ ನಡೆಯುವ ಕ್ಷೇತ್ರವ್ಯಾಪ್ತಿಯಲ್ಲಿ ಮದ್ಯಮಾರಾಟವನ್ನು ಸಂಪೂರ್ಣ ನಿಷೇದಿಸಲಾಗಿದೆ. ಹಾಗೂ ಮತ ಎಣಿಕೆಯ ಹಿನ್ನೆಲೆಯಲ್ಲಿ ಡಿ.8ರ ಮಧ್ಯರಾತ್ರಿಯಿಂದ ಡಿ.9ರ ಮಧ್ಯರಾತ್ರಿ 12ರವರೆಗೆ ಈ ಮೇಲಿನ ಕ್ಷೇತ್ರ ವ್ಯಾಪ್ತಿಯಲ್ಲಿ ಮದ್ಯ ನಿಷೇಧಿಸಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
Next Story





