Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಿವಿ ಸಂಶೋಧನಾ ಬರಹಗಳಲ್ಲಿ ನಕಲಿ...

ವಿವಿ ಸಂಶೋಧನಾ ಬರಹಗಳಲ್ಲಿ ನಕಲಿ ಹೆಚ್ಚಾಗಿದೆ: ಬೆಂವಿವಿ ಕುಲಪತಿ ವೇಣುಗೋಪಾಲ್

ವಾರ್ತಾಭಾರತಿವಾರ್ತಾಭಾರತಿ28 Nov 2019 11:27 PM IST
share

ಬೆಂಗಳೂರು, ನ.28: ವಿಶ್ವವಿದ್ಯಾಲಯಗಳ ಸಂಶೋಧನಾ ಬರಹಗಳಲ್ಲಿ ನಕಲಿ ಹೆಚ್ಚಾಗಿರುವುದರಿಂದ ದೇಶದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ.ವೇಣುಗೋಪಾಲ್ ಬೇಸರ ವ್ಯಕ್ತಪಡಿಸಿದರು.

ಗುರುವಾರ ಬೆಂಗಳೂರು ವಿಶ್ವವಿದ್ಯಾಲಯದ ಯುಜಿಸಿ ಮಹಿಳಾ ಅಧ್ಯಯನ ಕೇಂದ್ರದ ವತಿಯಿಂದ ಇಲ್ಲಿನ ಪ್ರೊ.ಕೆ.ವೆಂಕಟಗಿರಿಗೌಡ ಸ್ಮಾರಕ ಸಭಾಂಗಣದಲ್ಲಿ ಆಯೋಜಿಸಿದ್ದ ಲೇಖಕ ಡಾ.ಎಂ.ಸಿದ್ಧಪ್ಪ ಬೆಳಗಟ್ಟಿರವರ ‘ಉತ್ತರಾಣಿ’, ‘ಮ್ಯಾಸ ಬೇಡರ ಮಹಿಳೆ’, ‘ಪಾಶ್ಚಾತ್ಯ ಸ್ತ್ರೀವಾದಿ ಚಿಂತಕರು’, ‘ಕಡಗೋಲು’ ಹಾಗೂ ‘ಪಾರಿಜಾತ’ ಕೃತಿಗಳನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರು ಸಂಶೋಧನಾ ಬರಹಗಳು, ವಿಚಾರಗೋಷ್ಠಿಗಳು, ಕಾರ್ಯಾಗಾರಗಳನ್ನು ನಡೆಸುವುದರ ಕಡೆಗೆ ಹೆಚ್ಚಿನ ಗಮನ ಕೊಡಬೇಕು. ಆಗ ಮಾತ್ರ ಪ್ರಾಧ್ಯಾಪಕ ಹುದ್ದೆಗೆ ಘನತೆ ಬರುತ್ತದೆ. ಹಾಗೂ ಸಂಶೋಧನಾ ವಿದ್ಯಾರ್ಥಿಗಳಿಗೂ ಇದರಿಂದ ಪ್ರೇರಣೆ ಸಿಗುವಂತಾಗುತ್ತದೆ ಎಂದು ಅವರು ಹೇಳಿದರು.

ಪ್ರಾಧ್ಯಾಪಕರು ತಮ್ಮ ವಿದ್ಯಾರ್ಥಿಗಳ ಹಿತವನ್ನು ಬಯಸಬೇಕು. ಆದರೆ, ಹಲವು ಪ್ರಾಧ್ಯಾಪಕರು ತಮ್ಮಲ್ಲಿ ಸಂಶೋಧನೆ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅನಗತ್ಯ ಕಿರುಕುಳ ನೀಡುವುದು, ಸಂಶೋಧನೆಗೆ ಅಡ್ಡಿ ಪಡಿಸುವಂತಹ ಘಟನೆಗಳು ನಡೆಯುತ್ತವೆ. ಪ್ರಾಧ್ಯಾಪಕರು ಇಂತಹ ಮನಸ್ಥಿತಿಯನ್ನು ಹೊರಬಂದಾಗ ಮಾತ್ರ ವಿಶ್ವವಿದ್ಯಾಲಯಗಳ ಬೆಳವಣಿಗೆ ಸಾಧ್ಯವೆಂದು ಅವರು ಹೇಳಿದರು.

ಕತೆ, ಕಾದಂಬರಿ, ಲೇಖನಗಳನ್ನು ಬರೆಯುವುದು ಸುಲಭವಾದ ಕೆಲಸವಲ್ಲ. ನಿರಂತರವಾದ ಅಧ್ಯಯನ, ಶಿಸ್ತಿನಿಂದ ಮಾತ್ರ ಉತ್ತಮವಾದ ಕೃತಿಗಳನ್ನು ರಚಿಸಲು ಸಾಧ್ಯ. ನಾವು ಬರೆದ ಪುಸ್ತಕಕ್ಕೆ ಓದುಗರಿಂದ ಉತ್ತಮವಾದ ಪ್ರತಿಕ್ರಿಯೆ ವ್ಯಕ್ತವಾದರೆ, ಅದೇ ಲೇಖಕನೊಬ್ಬನಿಗೆ ಸಿಗುವ ಅತ್ಯಂತ ದೊಡ್ಡ ಗೌರವವೆಂದು ಅವರು ಹೇಳಿದರು.

ಸಂಸ್ಕೃತ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಪದ್ಮಾಶೇಖರ್ ಮಾತನಾಡಿ, ಮಹಿಳಾ ಅಧ್ಯಯನ ಕೇಂದ್ರದಲ್ಲಿ ಪ್ರಾಧ್ಯಾಪಕರಾಗಿರುವ ಲೇಖಕ ಡಾ.ಎಂ.ಸಿದ್ಧಪ್ಪ ಬೆಳಗಟ್ಟಿರದು ಸ್ತ್ರೀಕೇಂದ್ರಿತ ಚಿಂತನಾ ಕ್ರಮವಾಗಿದೆ. ಇದನ್ನು ಬರಹ ರೂಪಕ್ಕೆ ತಂದಿರುವ ಅವರ ಕಾರ್ಯ ಶ್ಲಾಘನೀಯವೆಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇವತ್ತು ಬಿಡುಗಡೆಯಾಗುತ್ತಿರುವ ಡಾ.ಎಂ.ಸಿದ್ಧಪ್ಪರ ಐದು ಕೃತಿಗಳು ಇವತ್ತಿನ ಸಮಾಜಕ್ಕೆ ತೀರ ಅಗತ್ಯವಾಗಿದೆ. ಈ ಕೃತಿಗಳು ಓದುಗರಲ್ಲಿ ಮಹಿಳಾ ಸಮುದಾಯದ ಕುರಿತು ವಿವಿಧ ಮಗ್ಗಲುಗಳಲ್ಲಿ ಚಿಂತಿಸುವಂತೆ ಪ್ರೇರೇಪಿಸಬಲ್ಲವು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಹಿರಿಯ ನಾಟಕಕಾರ ರಾಜಪ್ಪ ದಳವಾಯಿ, ಲೇಖಕ ಡಾ.ಎಂ.ಸಿದ್ಧಪ್ಪ ಬೆಳಗಟ್ಟಿ, ವಿಶ್ವವಿದ್ಯಾಲಯದ ಕುಲಸಚಿವ ಬಿ.ಕೆ.ರವಿ, ಪ್ರಕಾಶಕ ಬಿ.ಕೆ.ಸುರೇಶ್ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X