ನ.30: ವಿಶೇಷ ಮಕ್ಕಳ ಒಲಿಂಪಿಕ್ಸ್ ಸ್ಪರ್ಧಾಕೂಟಕ್ಕೆ ಆಯ್ಕೆ ಪ್ರಕ್ರಿಯೆ
ಮಂಗಳೂರು, ನ.29: ಸ್ಪೆಶಲ್ ಒಲಿಂಪಿಕ್ಸ್ ಭಾರತ್ ವಿಶೇಷ ಮಕ್ಕಳಿಗಾಗಿ ರಾಷ್ಟ್ರಮಟ್ಟದ ಸ್ಪರ್ಧಾಕೂಟವನ್ನು ನಡೆಸುತ್ತಿದ್ದು, 2023ರ ವಿಶೇಷ ಮಕ್ಕಳ ಒಲಿಂಪಿಕ್ಸ್ ಸ್ಪರ್ಧಾಕೂಟಕ್ಕೆ ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆ ನ.30ರಂದು ನಗರದ ಪ್ರೆಸ್ಟೀಜ್ ಇಂಟರ್‌ನ್ಯಾಶನಲ್ ಶಾಲೆಯಲ್ಲಿ ನಡೆಯಲಿದೆ ಎಂದು ಸ್ಪೆಶಲ್ ಒಲಿಂಪಿಕ್ಸ್ ಭಾರತ್ ಕರ್ನಾಟಕ ಏರಿಯಾ ಡೈರೆಕ್ಟರ್ ಕುಮುದಾ ಹೇಳಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸ್ಪೆಶಲ್ ಒಲಿಂಪಿಕ್ಸ್ ಭಾರತ್-ಕರ್ನಾಟಕ, ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್ ಹಾಗೂ ರೋಲರ್ ಸ್ಕೇಟಿಂಗ್ ಕ್ರೀಡೆಗಳಲ್ಲಿ ರಾಜ್ಯ ತಂಡವನ್ನು ಆರಿಸುವುದಕ್ಕಾಗಿ ಸ್ಪರ್ಧಾಕೂಟವನ್ನು ಮಂಗಳೂರಿನಲ್ಲಿ ಆಯೋಜಿಸಲಾಗಿದೆ. ಮೂರು ಕ್ರೀಡೆಯಲ್ಲಿ ರಾಜ್ಯದಿಂದ 150ಕ್ಕೂ ಅಧಿಕ ಸ್ಪರ್ಧೆಗಳು ಭಾಗವಹಿಸಲಿದ್ದಾರೆ ಎಂದರು.
ಸ್ಪರ್ಧಾಕೂಟವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದಾರೆ. ದ.ಕ.ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಮೆಸ್ಕಾಂನ ಎಂ.ಡಿ. ಸ್ನೇಹಲ್ ಆರ್ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಪ್ರವೀಣ್ ಕುಮಾರ್, ಮಹೇಶ್ ಕುಮಾರ್ ಅಮರೇಂದ್ರ ಉಪಸ್ಥಿತರಿದ್ದರು.





