ಸುಲಿಗೆ ಆರೋಪ: ಇಬ್ಬರ ಬಂಧನ

ಬೆಂಗಳೂರು, ನ.29: ಪಾದಚಾರಿಗಳನ್ನು ಗುರಿಯಾಗಿಸಿಕೊಂಡು ಸುಲಿಗೆ ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ಬಂಧಿಸುವಲ್ಲಿ ಇಲ್ಲಿನ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಮುಹಮ್ಮದ್ ಯಾಸಿನ್ ಮತ್ತು ಅಶೋಕ್ ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.
ನ.27ರಂದು ಕಾರು ಚಾಲಕ ರವಿಕುಮಾರ್ ಎಂಬುವರು ಹೋಗುತ್ತಿರುವಾಗ ಅವರನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳು ಚಾಕು ತೋರಿಸಿ ಬೆದರಿಸಿ, ಚಿನ್ನಾಭರಣ, ನಗದು ದೋಚಿ ಪರಾರಿಯಾಗಿದ್ದರು. ಈ ಸಂಬಂಧ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ದೂರು ದಾಖಲಿಸಿಕೊಂಡಿದ್ದರು.
ದೂರಿನನ್ವಯ ಇಬ್ಬರನ್ನು ಬಂಧಿಸಿ, ತನಿಖೆ ಮುಂದುವರೆಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Next Story





