Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಮೇರಿಕಾದಲ್ಲಿ ಶಿರ್ವ ಮೂಲದ ಯುವಕನ ಹತ್ಯೆ

ಅಮೇರಿಕಾದಲ್ಲಿ ಶಿರ್ವ ಮೂಲದ ಯುವಕನ ಹತ್ಯೆ

ವಾರ್ತಾಭಾರತಿವಾರ್ತಾಭಾರತಿ29 Nov 2019 10:26 PM IST
share
ಅಮೇರಿಕಾದಲ್ಲಿ ಶಿರ್ವ ಮೂಲದ ಯುವಕನ ಹತ್ಯೆ

 ಉಡುಪಿ, ನ.29: ಕ್ಯಾಲಿಫೋರ್ನಿಯಾದ ಸ್ಯಾನ್ ಬರ್ನಾರ್ಡ್‌ಡಿನೋದ ಕ್ಯಾಲಿಪೋರ್ನಿಯ ಸ್ಟೇಟ್ ಯುನಿವರ್ಸಿಟಿಯ ಅಂತಿಮ ಸೆಮಿಸ್ಟರ್ ಎಂಎಸ್ (ಕಂಪ್ಯೂಟರ್ ಸೈನ್ಸ್) ವಿದ್ಯಾರ್ಥಿಯನ್ನು ದುಷ್ಕರ್ಮಿಯೊಬ್ಬ ಹಣೆಗೆ ಗುಂಡಿಟ್ಟು ಕೊಂದ ಘಟನೆ ಗುರುವಾರ ವರದಿಯಾಗಿದೆ.

ಶಿರ್ವ ಮೂಲದ ಮೈಸೂರು ಕುವೆಂಪು ನಗರ ನಿವಾಸಿ ಅಭಿಷೇಕ್ ಸುದೇಶ್ ಭಟ್ (25) ಇಂಜಿನಿಯರಿಂಗ್ ಪದವಿ ಬಳಿಕ ಸ್ನಾತಕೋತ್ತರ ಅಧ್ಯಯನಕ್ಕೆ 2018ರಲ್ಲಿ ಅಮೇರಿಕಾಕ್ಕೆ ತೆರಳಿದ್ದರು. ವಾರಾಂತ್ಯದಲ್ಲಿ ಅಭಿಷೇಕ್ ಮೋಟೆಲ್ (ಲಾಡ್ಜಿಂಗ್) ಒಂದರಲ್ಲಿ ರಿಸೆಪ್ಷನಿಸ್ಟ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಅಮೇರಿಕಾ ಕಾಲಮಾನ ನ.27ರಂದು ಮಧ್ಯಾಹ್ನ 12:30ಕ್ಕೆ ಅಭಿಷೇಕ್ ಮತ್ತು ಗ್ರಾಹಕನ ಮಧ್ಯೆ ಸಣ್ಣ ಮಾತಿನ ಚಕಮಕಿ ನಡೆದಿದ್ದು, ಆತ ಹಣೆಗೆ ರಿವಾಲ್ವರ್‌ನಿಂದ ಗುಂಡಿಟ್ಟು ಹತ್ಯೆ ಮಾಡಿದ್ದಾನೆ. ಸಿಸಿ ಟಿವಿಯಲ್ಲಿ ಘಟನೆ ದಾಖಲಾಗಿದ್ದು, ಪೊಲೀಸರ ತಂಡ ತನಿಖೆ ಕೈಗೊಂಡಿದೆ ಅಮೆರಿಕದಿಂದ ಬಂದ ವರದಿಗಳು ತಿಳಿಸಿವೆ.

ಘಟನೆಯ ಕುರಿತಂತೆ ಅಭಿಷೇಕ್‌ರ ತಂದೆ ಯೋಗಗುರು ಸುದೇಶ್‌ಚಂದ್‌ಗೆ ನಿನ್ನೆ ಅಪರಾಹ್ನ 11:30ರ ಸುಮಾರಿಗೆ ಅಪರಿಚಿತ ದೂರವಾಣಿ ಕರೆಯಲ್ಲಿ ಮಾಹಿತಿ ತಿಳಿಸಿದ್ದು, ಆತ ಹೆಚ್ಚಿನ ಯಾವುದೇ ಮಾಹಿತಿ ತಿಳಿಸಿರಲಿಲ್ಲ. ಇದರಿಂದ ಆಘಾತಕ್ಕೊಳಗಾದ ಅಭಿಷೇಕ್ ಕುಟುಂಬ ದಿನವಿಡೀ ಮಾಹಿತಿಗಾಗಿ ಪರದಾಡಿದ್ದು, ಇಂದು ಮುಂಜಾನೆ 5:30ರ ಸುಮಾರಿಗೆ ಘಟನೆಯ ವಿವರಗಳು ತಿಳಿದುಬಂತು ಎಂದು ಕುಟುಂಬದ ಮೂಲವೊಂದು ತಿಳಿಸಿದೆ.

ಅಭಿಷೇಕ್ ಅವರನ್ನು ಅವರು ಅರೆಕಾಲಿಕ ಕೆಲಸ ಮಾಡುತಿದ್ದ ಹೊಟೇಲ್ ಒಳಗೆ ಗುಂಡಿಟ್ಟು ಕೊಲ್ಲಲಾಗಿದ್ದು, ಅವರ ಮೃತದೇಹ ವನ್ನು ಪೊಲೀಸ್ ತನಿಖೆ ಹಾಗೂ ಪ್ರಾಥಮಿಕ ರೀತಿ ರಿವಾಜುಗಳ ಬಳಿಕ ಬರ್ನಾರ್ಡ್‌ಡಿನೋದ ಆಸ್ಪತ್ರೆಯೊಂದರಲ್ಲಿ ಇರಿಸಲಾಗಿದೆ ಎಂದು ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ.

ಅಭಿಷೇಕ್ ಅವರ ಫೇಸ್‌ಬುಕ್ ಪ್ರೊಪೈಲ್ ತಿಳಿಸುವಂತೆ ಅವರು 2018ರ ಅ.31ರಿಂದ ಕ್ಯಾಲಿಫೋರ್ನಿಯ ಸ್ಟೇಟ್ ವಿವಿಯ ಸ್ಯಾನ್‌ಬರ್ನಾರ್ಡ್‌ಡಿನೋ ಕಾಲೇಜ್ ಆಫ್ ನ್ಯಾಚುರಲ್ ಸಾಯನ್ಸ್‌ನಲ್ಲಿ ಟೀಚಿಂಗ್ ಅಸಿಸ್ಟೆಂಟ್ ಆಗಿದ್ದಾರೆ. ಹಾಗೂ ಸಿಎಸ್‌ಯುಎಸ್‌ಬಿಯಲ್ಲಿ ಕಂಪ್ಯೂಟರ್ ಸಾಯನ್ಸ್ (ಮಾಸ್ಟರ್ ಆಫ್ ಸಾಯನ್ಸ್) ಕಲಿಯುತಿದ್ದಾರೆ. ಹಿಂದಿ, ತುಳು, ಸಂಸ್ಕೃತ, ಇಂಗ್ಲೀಷ್ ಭಾಷೆ ತಿಳಿದಿದೆ ಹಾಗೂ ಅಭಿಶ್ರೇಷ್ಠ ಎಂಬ ಸಹೋದರ ಇದ್ದಾರೆ.

ಅಭಿಷೇಕ್ ಅವರು ಕುವೆಂಪುನಗರದಲ್ಲಿ ಉಪನಿಷದ್ ಯೋಗ ಸೆಂಟರ್‌ನ್ನು ನಡೆಸುತ್ತಿರುವ ಸುದೇಶ್‌ಚಂದ್ ಹಾಗೂ ನಂದಿನಿ ಐತಾಳ್ ದಂಪತಿಯ ಪುತ್ರ. ಮೈಸೂರಿನ ವಿದ್ಯಾವಿಕಾಸ್ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಕಂಪ್ಯೂಟರ್ ಸಾಯನ್ಸ್‌ನಲ್ಲಿ ಪದವಿ ಪಡೆದ ಬಳಿಕ ಒಂದೂವರೆ ವರ್ಷದ ಹಿಂದೆ ಉನ್ನತ ವಿದ್ಯಾಭ್ಯಾಸಕ್ಕಾಗಿ ಅಮೆರಿಕಕ್ಕೆ ತೆರಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X