ವೈದ್ಯೆಯ ಮೃತದೇಹ ಪತ್ತೆಯಾದ ಪ್ರದೇಶದ ಸಮೀಪ ಮತ್ತೊಬ್ಬ ಮಹಿಳೆಯ ಸುಟ್ಟು ಕರಕಲಾದ ಮೃತದೇಹ ಪತ್ತೆ
ಅತ್ಯಾಚಾರ, ಸಜೀವ ದಹನ ಪ್ರಕರಣ

ಹೈದರಾಬಾದ್, ನ.29: ದೇಶವನ್ನೇ ಬೆಚ್ಚಿಬೀಳಿಸಿದ ತೆಲಂಗಾಣದ ವೈದ್ಯೆಯ ಅತ್ಯಾಚಾರ, ಸಜೀವ ದಹನ ಘಟನೆಯ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವ ನಡುವೆಯೇ ಇಂತಹ ಮತ್ತೊಂದು ಘಟನೆ ನಡೆದಿದೆ. ವೈದ್ಯೆಯ ಮೃತದೇಹ ಪತ್ತೆಯಾಗಿದ್ದ ಶಂಶಾಬಾದ್ ನಲ್ಲೇ ಈ ಘಟನೆಯೂ ನಡೆದಿದೆ. ವೈದ್ಯೆಯ ಮೃತದೇಹ ಪತ್ತೆಯಾಗಿದ್ದ ಪ್ರದೇಶದ ಸಮೀಪದಲ್ಲೇ ಮತ್ತೊಬ್ಬ ಮಹಿಳೆಯ ಸುಟ್ಟು ಕರಕಲಾದ ಮೃತದೇಹ ಪತ್ತೆಯಾಗಿದೆ.
"ಶಂಶಾಬಾದ್ ನಲ್ಲಿ ಸುಟ್ಟು ಕರಕಲಾದ ಮೃತದೇಹ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗುವುದು. ಈ ಬಗ್ಗೆ ಪ್ರಕರಣ ದಾಖಲಾಗಿದೆ" ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ವೈದ್ಯೆಯ ಮೃತದೇಹ ಪತ್ತೆಯಾದ ಕೆಲ ಕಿಲೋಮೀಟರ್ ಅಂತರದಲ್ಲಿ ಈ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದು, ಎರಡೂ ಘಟನೆಗಳಿಗೆ ಸಂಬಂಧವಿದೆಯೇ ಎನ್ನುವುದು ಇನ್ನೂ ಸ್ಪಷ್ಟಗೊಂಡಿಲ್ಲ.
Next Story





