Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಳಪೆ ಕಾಮಗಾರಿ ಆರೋಪ: ಸ್ಮಾರ್ಟ್ ಸಿಟಿ...

ಕಳಪೆ ಕಾಮಗಾರಿ ಆರೋಪ: ಸ್ಮಾರ್ಟ್ ಸಿಟಿ ಅಧಿಕಾರಿಗಳನ್ನು ತರಾಟೆಗೆ ತೆಗೆದ ಸೊಗಡು ಶಿವಣ್ಣ

ವಾರ್ತಾಭಾರತಿವಾರ್ತಾಭಾರತಿ29 Nov 2019 10:50 PM IST
share
ಕಳಪೆ ಕಾಮಗಾರಿ ಆರೋಪ: ಸ್ಮಾರ್ಟ್ ಸಿಟಿ ಅಧಿಕಾರಿಗಳನ್ನು ತರಾಟೆಗೆ ತೆಗೆದ ಸೊಗಡು ಶಿವಣ್ಣ

ತುಮಕೂರು, ನ.29: ನಗರದ ಅಶೋಕ ರಸ್ತೆಯಲ್ಲಿ ಸ್ಮಾರ್ಟ್ ಸಿಟಿ ಕೈಗೊಂಡಿರುವ ಕಾಮಗಾರಿ ಕಳಪೆಯಾಗಿದೆ, ಕಾಮಗಾರಿಯನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದೀರಾ ಎಂದು ಸ್ಮಾರ್ಟ್ ಸಿಟಿ ಅಧಿಕಾರಿಗಳನ್ನು ಮಾಜಿ ಸಚಿವ ಸೊಗಡು ಶಿವಣ್ಣ ತರಾಟೆಗೆ ತೆಗೆದುಕೊಂಡಿದ್ದಾರೆ.

ಸ್ಮಾರ್ಟ್ ಸಿಟಿ ಇಂಜಿನಿಯರ್ ಗಳಾದ ಶಿವಕುಮಾರ್ ಹಾಗೂ ಮಧು ಅವರನ್ನು ಸ್ಥಳಕ್ಕೆ ಕರೆಸಿದ ಸೊಗಡು ಶಿವಣ್ಣ ಅವರು ಕಾಮಗಾರಿಗಳ ಗುಣಮಟ್ಟದ ಬಗ್ಗೆ ತರಾಟೆ ತೆಗೆದುಕೊಳ್ಳುತ್ತಿದ್ದಂತೆ, ಸ್ಮಾರ್ಟ್ ಸಿಟಿ ಅಧಿಕಾರಿಗಳು ತಬ್ಬಿಬ್ಬಾದರು. ರಾತ್ರಿ ವೇಳೆ ಕಾಮಗಾರಿ ಮಾಡುವಾಗ ಅಧಿಕಾರಿಗಳು ಎಲ್ಲಿರುತ್ತಾರೆ ? ಕಣ್ಮುಂಚಿಕೊಂಡು ಕುಳಿತಿದ್ದೀರಾ? ಜನರ ಹಣಕ್ಕೆ ಹೊಣೆಯಾರು ಎಂದು ಪ್ರಶ್ನಿಸಿದರು.

ಅಶೋಕ ರಸ್ತೆಯಲ್ಲಿ ಅಳವಡಿಸುತ್ತಿರುವ ಸ್ಲ್ಯಾಬ್ ಗಳ ಗುಣಮಟ್ಟ ಹೇಗಿದೆ ಎಂದರೆ ಮುಟ್ಟಿದರೆ ಮುರಿದು ಹೋಗುವಂತಿದೆ ಎಂದು ಸ್ಲ್ಯಾಬ್ ಗುಣಮಟ್ಟದ ಬಗ್ಗೆ ಹೇಳಿದ ಅವರು, ರಾತ್ರಿ ವೇಳೆಯಲ್ಲಿ ಅಧಿಕಾರಿಗಳು ಇಲ್ಲದೇ ಇದ್ದಾಗ ಕಾಂಕ್ರೀಟ್ ಮಿಶ್ರಣವನ್ನು ಮಾಡಲಾಗುತ್ತಿದೆ. ಒಂದೇ ದಿನದಲ್ಲಿ ಕ್ಯೂರಿಂಗ್ ಮಾಡಿ ಸ್ಲ್ಯಾಬ್‍ಗಳನ್ನು ಮುಚ್ಚಲಾಗುತ್ತಿದೆ. 1500 ಕೋಟಿ ಕಾಮಗಾರಿಯನ್ನು ನಿರ್ವಹಿಸುವುದು ಹೀಗೇಯೇ ? ಸ್ಮಾರ್ಟ್‍ಸಿಟಿ ಸೂಪರಿಡೆಂಟ್ ಇಂಜನಿಯರ್ ಆಗಲಿ, ಬೇರೆ ಅಧಿಕಾರಿಗಳು ಯಾರಾದರೂ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ ಎಂದು ಆರೋಪಿಸಿದರು.

ನಗರದಲ್ಲಿ ಸ್ಮಾರ್ಟ್‍ಸಿಟಿಯಿಂದ ನಡೆಯುತ್ತಿರುವ ಕಾಮಗಾರಿಗಳು ಕಳಪೆಯಿಂದ ಕೂಡಿದ್ದು, ಸ್ಮಾರ್ಟ್‍ಸಿಟಿ ಅಧ್ಯಕ್ಷೆ ಶಾಲಿನಿ ರಜನೀಶ್ ಅವರನ್ನು ಅಮಾನತುಗೊಳಿಸಿ, ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದ ಅವರು, ಕಳಪೆ ಕಾಮಗಾರಿ ಮಾಡುತ್ತಿದ್ದರೆ ನೋಡುತ್ತಾ ಕುಳಿತುಕೊಳ್ಳುವುದಿಲ್ಲ. ಏನಾದರೂ ಆಗಲಿ ಕಳಪೆ ಕಾಮಗಾರಿ ಮಾಡುವವರಿಗೆ ಹೊಡೆಯುತ್ತೇನೆ, ಕಾನೂನು ಉಲ್ಲಂಘಿಸಿದರೂ ಪರವಾಗಿಲ್ಲ ಎಂದು ಎಚ್ಚರಿಕೆ ನೀಡಿದರು.

20 ವರ್ಷ ಅಧಿಕಾರವನ್ನು ಜನರು ನೀಡಿದ್ದಾರೆ. ನನ್ನ ಶ್ರಮದಿಂದಲೇ ಇಂದು ನಗರಕ್ಕೆ ಸ್ಮಾರ್ಟ್‍ಸಿಟಿ ಮಂಜೂರಾಗಿದೆ. 1500 ಕೋಟಿಯಲ್ಲಿ ನಗರವನ್ನು ಅತ್ಯಾಧುನಿಕವಾಗಿ ನಿರ್ಮಾಣ ಮಾಡಬಹುದು. ಆದರೆ ಅಧಿಕಾರಿಗಳ ನಿರ್ಲಕ್ಷ್ಯತೆಯಿಂದಾಗಿ ಕಾಮಗಾರಿ ಕಳಪೆಯಾಗುತ್ತಿದೆ. ಜನರಿಗೆ ತೊಂದರೆಯಾಗಲು ಬಿಡುವುದಿಲ್ಲ. ಶಾಲಿನಿಯನ್ನು ಅಮಾನತುಗೊಳಿಸಿ. ತನಿಖೆ ನಡೆಸದೇ ಇದ್ದರೆ ಜೈಲ್‍ಭರೋ ಚಳವಳಿ ಹಮ್ಮಿಕೊಳ್ಳುತ್ತೇನೆ.. ಜೈಲೇನು ನನಗೆ ಹೊಸದಲ್ಲ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಬೆಸ್ಕಾಂ, ಪಾಲಿಕೆ, ಸ್ಮಾರ್ಟ್‍ಸಿಟಿ, ಪೊಲೀಸ್ ಹೀಗೆ ಇಲಾಖೆಗಳ ನಡುವೆ ಸಮನ್ವಯತೆ ಇಲ್ಲದ ಕಾರಣದಿಂದಾಗಿ ಜನರು ತೊಂದರೆಪಡುತ್ತಿದ್ದಾರೆ. ಪದೇ ಪದೇ ರಸ್ತೆಯನ್ನು ಅಗೆದು ತೊಂದರೆ ನೀಡುತ್ತಿದ್ದಾರೆ ಎಂದು ದೂರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X