ಉಪಚುನಾವಣೆ ಹಿನ್ನೆಲೆ: ನಿಷೇಧಾಜ್ಞೆ ಜಾರಿ

ಬೆಂಗಳೂರು, ನ.30: ಉಪಚುನಾವಣೆ ಹಿನ್ನೆಲೆ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಬೆಂಗಳೂರಿನ ನಾಲ್ಕು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.
ಕೆಆರ್‌ಪುರ, ಯಶವಂತಪುರ, ಮಹಾಲಕ್ಷ್ಮೀಲೌಟ್, ಶಿವಾಜಿನಗರ ವ್ಯಾಪ್ತಿಗಳಲ್ಲಿ ಡಿ.5ರಂದು ಮತದಾನ ನಡೆಯಲಿದ್ದು, ಸುಸೂತ್ರವಾಗಿ ಮತದಾನ ಪ್ರಕ್ರಿಯೆ ಜರುಗಿಸುವ ನಿಟ್ಟಿನಲ್ಲಿ ಸಿಆರ್‌ಪಿಸಿ ಕಲಂ 144ರ ಅನ್ವಯ ಡಿ.3ರಿಂದ 6ರವರೆಗೆ ನಿಷೇಧಾಜ್ಞೆ ವಿಧಿಸಲಾಗಿದೆ.
ಆ ಸಮಯದಲ್ಲಿ ಗುಂಪು ಸೇರುವುದು, ಪಟಾಕಿ ಸಿಡಿಸುವುದು, ವಿಜಯೋತ್ಸವ, ಮೆರವಣಿಗೆ, ಖಾಸಗಿ ವ್ಯಕ್ತಿಗಳು ಧ್ವನಿವರ್ಧಕ ಬಳಸುವುದು, ಮಾರಕ ಆಯುಧಗಳನ್ನು ಹೊಂದಿರುವುದು ಅಥವಾ ಹಿಡಿದುಕೊಂಡು ಓಡಾಡುವುದು ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಲಾಗಿದೆ ಎಂದು ಪ್ರಕಟನೆಯಲ್ಲಿ ಅವರು ತಿಳಿಸಿದ್ದಾರೆ.
Next Story





