ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ಮತದಾನ ಜಾಗೃತಿ ಜಾಥ

ಬೆಂಗಳೂರು, ನ.30: ಪಾಲಿಕೆ ವ್ಯಾಪ್ತಿಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಪಾಲಿಕೆಯ ಸ್ವೀಪ್ ತಂಡವು ಶನಿವಾರ ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಶಾಲಾ-ಕಾಲೇಜುಗಳಲ್ಲಿ ಚುನಾವಣಾ ಜಾಗೃತಿ ಜಾಥಾ ಕಾರ್ಯಕ್ರಮವನ್ನು ನಡೆಸಿತು.
ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಹಾಲಕ್ಷ್ಮೀಪುರದ ಅಂಬೇಡ್ಕರ್ ಪದವಿ ಪೂರ್ವ ಕಾಲೇಜು, ಅನುಪಮ ಪದವಿ ಪೂರ್ವ ಕಾಲೇಜು, ನಳಂದ ಪದವಿ ಪೂರ್ವ ಕಾಲೇಜಿನ ಸೇರಿದಂತೆ 900ಕ್ಕೂ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದ್ದರು.
ಈ ವೇಳೆ ಚುನಾವಣೆಯಲ್ಲಿ ಮತದಾರರು ಕಡ್ಡಾಯವಾಗಿ ಭಾಗವಹಿಸುವ ಕುರಿತು ಅರಿವು ಮೂಡಿಸುವ ಹಿನ್ನೆಲೆಯಲ್ಲಿ ಮತದಾರರ ಜಾಗತಿ ಕಾರ್ಯ ನಡೆಯಿತು. ಸುಮಾರು 6 ಕಿ.ಮೀ. ರವರೆಗೆ ಜಾಥ ಕಾಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು ಭಾಗವಹಿಸಿ, ಸಾರ್ವಜನಿಕರಿಗೆ ಹಾಗೂ ಮತದಾರರಿಗೆ ಮತದಾನದ ಬಗ್ಗೆ ಅರಿವು ಮೂಡಿಸುವ ಬಿತ್ತಿಪತ್ರ, ಘೋಷಣೆಗಳೊಂದಿಗೆ ಜಾಥ ನಡೆಸಲಾಯಿತು. ಜಾಥ ನಡುವೆ ಜನದಟ್ಟಣೆ ಹೆಚ್ಚು ಇರುವ ಕಡೆ ಓಟ್ ಹಾಕೋಣ ಬನ್ನಿ ಎಂಬ ಬೀದಿ ನಾಟಕದ ಮೂಲಕ ಅರಿವು ಮೂಡಿಸಲಾಯಿತು.
ಜಾಥಕ್ಕೆ ಸ್ವೀಪ್ ಜಿಲ್ಲಾ ನೋಡಲ್ ಅಧಿಕಾರಿ ಎನ್. ರಾಜು ಚಾಲನೆ ನೀಡಿದರು. ಮಹಾಲಕ್ಷ್ಮೀ ಲೇಔಟ್ ಚುನಾವಣಾಧಿಕಾರಿ ಆಶಾ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರಾಜಶೇಖರ್, ಎಎಂಎಸ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ನಾಗರಾಜು, ಅನುಪಮ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ರಂಗಪ್ಪ ಎಂ, ಕಾರ್ಮಲ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಸಂದ್ಯಾ ಮೆನೆಜಸ್ ಹಾಗೂ ನಳಂದ ನ್ಯಾಷನಲ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಶ್ರೀಧರ್ ಇದ್ದರು.







