Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಆರೆಸ್ಸೆಸ್ ವಿರುದ್ಧ ಜನಾಭಿಪ್ರಾಯ...

ಆರೆಸ್ಸೆಸ್ ವಿರುದ್ಧ ಜನಾಭಿಪ್ರಾಯ ಮೂಡಿಸಲು ಒಕ್ಕೂಟ ರಚನೆಯಾಗಲಿ: ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್

"ಸಂಸತ್‌ನ ಒಳಗೂ ಕೋಮುವಾದಿಗಳು ನುಸುಳಿದ್ದಾರೆ"

ವಾರ್ತಾಭಾರತಿವಾರ್ತಾಭಾರತಿ1 Dec 2019 6:14 PM IST
share
ಆರೆಸ್ಸೆಸ್ ವಿರುದ್ಧ ಜನಾಭಿಪ್ರಾಯ ಮೂಡಿಸಲು ಒಕ್ಕೂಟ ರಚನೆಯಾಗಲಿ: ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್

ಬೆಂಗಳೂರು, ಡಿ.1: ಬಿಜೆಪಿ, ಆರೆಸ್ಸೆಸ್ ಸಮಾಜದಲ್ಲಿ ಭಿತ್ತುತ್ತಿರುವ ಕೋಮುವಾದಿ ವಿಚಾರಗಳ ವಿರುದ್ಧ ಜನಾಭಿಪ್ರಾಯ ಮೂಡಿಸಲು ಪ್ರಗತಿಪರ ಸಂಘಟನೆಗಳು ಒಕ್ಕೂಟ ರಚಿಸಿಕೊಂಡು ಕಾರ್ಯಮಗ್ನರಾಗಬೇಕಾದ ಅಗತ್ಯವಿದೆ ಎಂದು ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. 

ರವಿವಾರ ಗೌರಿ ಪತ್ರಿಕಾ ಬಳಗ ನಗರದ ಗಾಂಧಿಭವನದಲ್ಲಿ ಹಿರಿಯ ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಸಾಮಾಜಿಕ ಕಾರ್ಯಕರ್ತರು ಹಾಗೂ ಜನಪರ ಪತ್ರಕರ್ತರ ಮೇಲಿನ ದಾಳಿಯನ್ನು ಎದುರಿಸುವ ಕುರಿತ ಚರ್ಚಾಗೋಷ್ಟಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಜನಪರವಾಗಿ ಕೆಲಸ ಮಾಡುವವರನ್ನು ಬಂಧಿಸುವ ಪ್ರಕ್ರಿಯೆಯನ್ನು ಮುಂದುವರೆಸುವ ಎಲ್ಲ ಮುನ್ಸೂಚನೆಗಳು ಇವೆ. ಇದನ್ನು ತಡೆಯಬೇಕಾದರೆ ಬಿಜೆಪಿಯ ಜನವಿರೋಧಿ ನಿಲುವುಗಳ ಕುರಿತು ಜನಭಿಪ್ರಾಯ ಮೂಡಿಸುವುದೊಂದೆ ನಮಗಿರುವ ಬಹುದೊಡ್ಡ ದಾರಿಯೆಂದು ಅವರು ತಿಳಿಸಿದರು.

ಆರೆಸ್ಸೆಸ್ ಪ್ರಜಾಪ್ರಭುತ್ವದ ದಾರಿಯನ್ನೇ ಬಳಸಿಕೊಂಡು ಇಡೀ ವ್ಯವಸ್ಥೆಯನ್ನು ಕೋಮುವಾದೀಕರಣ ಮಾಡಲು ಹೊರಟಿದೆ. ಸಂಸತ್‌ನ ಒಳಗೂ ಕೋಮುವಾದಿ ವ್ಯಕ್ತಿಗಳನ್ನು ನುಸುಳುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಪ್ರಗತಿಪರ ಸಂಘಟನೆಗಳು ಆರೆಸ್ಸೆಸ್ ಜನವಿರೋಧಿ ನೀತಿಯನ್ನು ಬಯಲು ಮಾಡಲು ಸಾಮಾಜಿಕ ಜಾಲತಾಣಗಳನ್ನು ಯಶಸ್ವಿಯಾಗಿ ಬಳಸಿಕೊಳ್ಳಬೇದೆ ಎಂದು ಅವರು ಹೇಳಿದರು.

ಇವತ್ತಿನ ರಾಜಕಾರಣಿಗಳು, ನ್ಯಾಯಾಧೀಶರು, ಪೊಲೀಸ್ ವ್ಯವಸ್ಥೆಯು ಪತ್ರಿಕೆ, ದೃಶ್ಯ ಮಾಧ್ಯಮಗಳಿಗಿಂತ ಫೇಸ್‌ಬುಕ್, ವಾಟ್ಸಾಪ್‌ಗಳಲ್ಲಿ ಬರುವ ಸುದ್ಧಿಗಳನ್ನು ಹೆಚ್ಚು ಗಂಭೀರವಾಗಿ ಪರಿಗಣಿಸುತ್ತಿದ್ದಾರೆ. ಹೀಗಾಗಿ ಪ್ರಗತಿಪರವಾಗಿ ಚಿಂತಿಸುವ ಪ್ರತಿಯೊಬ್ಬರು ತಮಗೆ ಗೊತ್ತಿರುವ ಸತ್ಯ ಸಂಗತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಬರೆಯುವ ಮೂಲಕ ಹೆಚ್ಚು ಜನರಿಗೆ ತಲುಪುವಂತೆ ಮಾಡಬೇಕಾಗಿದೆ ಎಂದು ಅವರು ಹೇಳಿದರು.

ಕೋಮು ಸೌಹಾರ್ದ ವೇದಿಕೆಯ ಕೆ.ಎಲ್.ಅಶೋಕ್ ಮಾತನಾಡಿ, ಕೋಮುವಾದಿಗಳು ಮನೆ ಒಳಗೆ ನುಸುಳಿದ್ದಾರೆ. ಮಾಡು ಇಲ್ಲವೆ ಮಡಿ ಎನ್ನುವ ಸ್ಥಿತಿಗೆ ಬಂದು ತಲುಪಿದ್ದೇವೆ. ಇಂತಹ ಸಂದರ್ಭದಲ್ಲಿ ಪ್ರಗತಿಪರ ಸಂಘಟನೆಗಳು ಒಕ್ಕೂಟವಾಗಿ ಆರೆಸ್ಸೆಸ್ ಚಿಂತನೆಯ ವಿರುದ್ಧ ಜನಾಭಿಪ್ರಾಯ ಮೂಡಿಸುವುದು ಅಗತ್ಯವಾಗಿದೆ ಎಂದರು.

ಹಿರಿಯ ಪತ್ರಕರ್ತ ಸುನಿಲ್ ಶಿರಸಂಗಿ ಮಾತನಾಡಿ, ಇಪ್ಪತ್ತು ವರ್ಷಗಳಿಂದ ಜನಪರವಾಗಿ ಕಾರ್ಯನಿರ್ವಹಿಸುತ್ತಿದ್ದ ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರನ್ನು ಬಿಜೆಪಿ ಸರಕಾರ ಬಂಧಿಸಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಪತ್ರಕರ್ತರು, ಮಾನವ ಹಕ್ಕು ಹೋರಾಟಗಾರರನ್ನು ಬಂಧಿಸುವಂತಹ ಷಡ್ಯಂತ್ರಗಳನ್ನು ರೂಪಿಸಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ನಾವೆಲ್ಲರೂ ಹೋರಾಟ ಮಾಡಬೇಕಿದೆ ಎಂದು ತಿಳಿಸಿದರು.

ಸಭೆಯ ಅಧ್ಯಕ್ಷತೆವಹಿಸಿದ್ದ ಹಿರಿಯ ಪತ್ರಕರ್ತ ಇಂದೂಧರ ಹೊನ್ನಾಪುರ ಮಾತನಾಡಿ, ಇವತ್ತಿನ ಸನ್ನಿವೇಶ ಜನಪರವಾಗಿ ಚಿಂತಿಸುವವರಿಗೆ ತೀರಾ ಆತಂಕಕಾರಿಯಾಗಿದೆ. ಪ್ರಭುತ್ವ ಮಾಡುವ ಜನವಿರೋಧಿ ನೀತಿಗಳನ್ನು ಟೀಕೆ ಮಾಡಿದರೆ ಬಂಧಿಸುವಂತಹ, ಬೆದರಿಕೆ ಹಾಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಪ್ರಗತಿಪರರು ತಮ್ಮ ಎಲ್ಲ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಟ್ಟಾಗಬೇಕಾದ ಅಗತ್ಯವಿದೆ ಎಂದರು.

ಸಭೆಯಲ್ಲಿ ಮಾಜಿ ಐಎಎಸ್ ಅಧಿಕಾರಿ ಕಣ್ಣನ್ ಗೋಪಿನಾಥ್, ಪ್ರೊ.ನಗರಗೆರೆ ರಮೇಶ್, ಕರ್ನಾಟಕ ಜನಶಕ್ತಿಯ ವಾಸು, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸರೋವರ ಬೆಂಕಿಕೆರೆ, ಚಂದ್ರು, ಮಾನವ ಹಕ್ಕು ಹೋರಾಟಗಾರ ಮನೋಹರ್, ಪ್ರೊ.ಶಿವರಾಮಯ್ಯ, ಅಂಕಣಕಾರ ನಾರಾಯಣ, ಹುಲಿಕುಂಟೆಮೂರ್ತಿ ಸೇರಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಉಪಸ್ಥಿತರಿದ್ದರು.

ಕೇಂದ್ರ ಸರಕಾರ ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಪಡಿಸಿ, ಇಡೀ ಕಾಶ್ಮೀರನ್ನು ಜೈಲಾಗಿ ಪರಿವರ್ತಿಸಿತು. ಜನಪ್ರತಿನಿಧಿಗಳು ಸೇರಿದಂತೆ ಸಾವಿರಾರು ಮಂದಿಯನ್ನು ಕಾರಣವಿಲ್ಲದೆ ಬಂಧನಕ್ಕೆ ಒಳಪಡಿಸಲಾಯಿತು. ಇದೆಲ್ಲವನ್ನು ನೋಡಿಕೊಂಡು ಇರಲು ನನ್ನಿಂದ ಸಾಧ್ಯವಾಗಲಿಲ್ಲ. ಹೀಗಾಗಿ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದೆ. ನನ್ನ ರಾಜೀನಾಮೆ ನಂತರ ಶಶಿಕಾಂತ್ ಸೆಂಥಿಲ್ ಕೂಡ ರಾಜೀನಾಮೆ ನೀಡಿದ್ದು, ನನಗೆ ನೈತಿಕವಾಗಿ ಸ್ಥೈರ್ಯ ಹೆಚ್ಚಿಸಿತು. ನನ್ನ ರೀತಿಯಲ್ಲಿ ಚಿಂತಿಸುವ ಅಧಿಕಾರಿಗಳು ಬಹಳಷ್ಟು ಮಂದಿ ಇದ್ದಾರೆ ಎಂದೆನಿಸಿ ಸಂತೋಷವಾಯಿತು. ಈಗ ದೇಶಾದ್ಯಂತ ಸಂಚರಿಸಿ ಕೇಂದ್ರ ಸರಕಾರ ನಡೆಸುತ್ತಿರುವ ಜನವಿರೋಧಿ ನೀತಿಯ ವಿರುದ್ಧ ಅಭಿಪ್ರಾಯ ಸಂಗ್ರಹಿಸುತ್ತಿದ್ದೇನೆ.

-ಕಣ್ಣನ್ ಗೋಪಿನಾಥ್, ಮಾಜಿ ಐಎಎಸ್ ಅಧಿಕಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X