Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ: ಒತ್ತುವರಿಯಾಗಿದ್ದ ಸರ್ಕಾರಿ...

ಮಡಿಕೇರಿ: ಒತ್ತುವರಿಯಾಗಿದ್ದ ಸರ್ಕಾರಿ ಭೂಮಿ ವಶಕ್ಕೆ ಪಡೆದ ಜಿಲ್ಲಾಡಳಿತ

ಮಳೆಹಾನಿ ಸಂತ್ರಸ್ತರಿಗೆ ನಿವೇಶನ ಹಂಚಲು ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ1 Dec 2019 11:10 PM IST
share
ಮಡಿಕೇರಿ: ಒತ್ತುವರಿಯಾಗಿದ್ದ ಸರ್ಕಾರಿ ಭೂಮಿ ವಶಕ್ಕೆ ಪಡೆದ ಜಿಲ್ಲಾಡಳಿತ

ಮಡಿಕೇರಿ, ಡಿ.1: ಒತ್ತುವರಿಯಾಗಿರುವ ಸರ್ಕಾರಿ ಭೂಮಿಯ ತೆರವು ಕಾರ್ಯಾಚರಣೆಯನ್ನು ಜಿಲ್ಲಾಡಳಿತ ಚುರುಕುಗೊಳಿಸಿದೆ. ನೆಲ್ಯಹುದಿಕೇರಿ ಭಾಗದಲ್ಲಿ ಒತ್ತುವರಿಯಾಗಿದ್ದ ಸುಮಾರು 7.70 ಎಕರೆ ಪ್ರದೇಶವನ್ನು ಇಂದು ವಶಕ್ಕೆ ಪಡೆಯಲಾಗಿದೆ. 

ಕುಜ್ಞಿ ಮುಹಮ್ಮದ್ ಎಂಬುವವರು ಒತ್ತುವರಿ ಮಾಡಿಕೊಂಡಿದ್ದ 6.37 ಎಕರೆ ಮತ್ತು ಟಾಟಾ ಸಂಸ್ಥೆಯ ಅಧೀನದಲ್ಲಿದ್ದ 1.33 ಎಕರೆ ಸರ್ಕಾರಿ ಜಾಗವನ್ನು ಉಪವಿಭಾಗಾಧಿಕಾರಿ ಜವರೇಗೌಡ ಅವರ ನೇತೃತ್ವದ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆಯಿತು. ಜೆಸಿಬಿ ಯಂತ್ರಗಳನ್ನು ಬಳಸಿ ಮಾರ್ಗವನ್ನು ನಿರ್ಮಿಸಿ ಗಿಡಗಳ ತೆರವು ಕಾರ್ಯ ನಡೆಸಲಾಯಿತು. 

ಈ ಸಂದರ್ಭ ಮಾತನಾಡಿದ ಉಪವಿಭಾಗಾಧಿಕಾರಿ ಜವರೇಗೌಡ ಅವರು ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದ ಕುಜ್ಞಿ ಮುಹಮ್ಮದ್ ಅವರು ಕಳೆದ ಬಾರಿ ತೆರವು ಕಾರ್ಯಾಚರಣೆ ಆರಂಭಿಸಿದಾಗ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು. ಆದರೆ ಜಿಲ್ಲಾಡಳಿತ ಸೂಕ್ತ ದಾಖಲಾತಿಗಳು ಸಲ್ಲಿಸಿದ ಹಿನ್ನೆಲೆ ತಡೆಯಾಜ್ಞೆ ತೆರವಾಗಿದ್ದು, ಮತ್ತೆ ಕಾರ್ಯಾಚರಣೆ ನಡೆಸಿ ಸರ್ಕಾರಿ ಭೂಮಿಯನ್ನು ವಶಕ್ಕೆ ಪಡೆಯಲಾಗುತ್ತಿದೆ ಎಂದರು. ಟಾಟಾ ಸಂಸ್ಥೆಯ ಬಳಿ ಇರುವ ಭೂಮಿಯನ್ನು ಕೂಡ ಜಿಲ್ಲಾಡಳಿತ ವಶಕ್ಕೆ ಪಡೆದಿದೆ ಎಂದು ತಿಳಿಸಿದರು. 

ಮಳೆಹಾನಿಯಿಂದ ಸಂಪೂರ್ಣವಾಗಿ ಮನೆ ಕಳೆದುಕೊಂಡವರಿಗೆ ಒತ್ತುವರಿ ತೆರವಾದ ಪ್ರದೇಶದಲ್ಲಿ ಮನೆ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು. ಇದಕ್ಕೂ ಮೊದಲು ಅರಣ್ಯ ಇಲಾಖೆಯ ಅನುಮತಿ ಪಡೆದು ಇಲ್ಲಿರುವ ಮರಗಳನ್ನು ತೆರವುಗೊಳಿಸಲಾಗುವುದು. ನಂತರ ತಾತ್ಕಾಲಿಕ ಶೆಡ್‍ಗಳ ನಿರ್ಮಾಣಕ್ಕೆ ಸಂತ್ರಸ್ತರಿಗೆ ಅವಕಾಶ ನೀಡಲಾಗುವುದು. ಮಾಸಿಕ 5 ಸಾವಿರ ರೂ.ಗಳಂತೆ 10 ತಿಂಗಳ ಮನೆ ಬಾಡಿಗೆ ಒಟ್ಟು 50 ಸಾವಿರ ರೂ.ಗಳಲ್ಲಿ 25 ಸಾವಿರವನ್ನು ಒಂದೇ ಕಂತಿನಲ್ಲಿ ನೀಡಲು ಸರ್ಕಾರ ನಿರ್ಧರಿಸಿದೆ. ಈ ಹಣದಿಂದ ಸಂತ್ರಸ್ತರು ತಾತ್ಕಾಲಿಕ ಶೆಡ್‍ಗಳನ್ನು ನಿರ್ಮಿಸಿಕೊಳ್ಳಬಹುದಾಗಿದೆ ಎಂದು ಉಪವಿಭಾಗಾಧಿಕಾರಿ ತಿಳಿಸಿದರು.   

ಜಿಲ್ಲಾಧಿಕಾರಿಗಳ ಸೂಚನೆಯಂತೆ ಒತ್ತುವರಿಯಾದ ಸರ್ಕಾರಿ ಭೂಮಿಯನ್ನು ತೆರವುಗೊಳಿಸಿ ಆ ಪ್ರದೇಶದಲ್ಲಿ ಸಂತ್ರಸ್ತರಿಗೆ ನೆಲೆ ಕಲ್ಪಿಸುವ ಯೋಜನೆಯನ್ನು ಶೀಘ್ರ ಆರಂಭಿಸಲಾಗುವುದೆಂದು ಅವರು ಭರವಸೆ ನೀಡಿದರು. ನೆಲ್ಯಹುದಿಕೇರಿ, ಕರಡಿಗೋಡು, ಬೆಟ್ಟದ ಕಾಡು ಸೇರಿದಂತೆ ಇನ್ನಿತರ ಪ್ರದೇಶಗಳ ಸಂತ್ರಸ್ತರು ಆಶ್ರಯ ಪಡೆಯಲಿದ್ದಾರೆ. ನದಿ ದಂಡೆಯ ನಿರಾಶ್ರಿತ ನಿವಾಸಿಗಳನ್ನು ಶಾಶ್ವತವಾಗಿ ಸ್ಥಳಾಂತರಗೊಳಿಸಲಾಗುವುದು ಎಂದು ಉಪವಿಭಾಗಾಧಿಕಾರಿ ಇದೇ ಸಂದರ್ಭ ತಿಳಿಸಿದರು. ಕಂದಾಯ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಈ ಸಂದರ್ಭ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X