Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಮಿಳುನಾಡಿನಲ್ಲಿ ನಿರ್ಮಾಣವಾಗುತ್ತಿದೆ...

ತಮಿಳುನಾಡಿನಲ್ಲಿ ನಿರ್ಮಾಣವಾಗುತ್ತಿದೆ ದೇಶದ ಎರಡನೇ ಬಾಹ್ಯಾಕಾಶ ಬಂದರು

ವಾರ್ತಾಭಾರತಿವಾರ್ತಾಭಾರತಿ2 Dec 2019 9:50 AM IST
share
ತಮಿಳುನಾಡಿನಲ್ಲಿ ನಿರ್ಮಾಣವಾಗುತ್ತಿದೆ ದೇಶದ ಎರಡನೇ ಬಾಹ್ಯಾಕಾಶ ಬಂದರು

ಹೊಸದಿಲ್ಲಿ, ಡಿ.2: ಮುಂದಿನ ವರ್ಷಗಳಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಉಡಾವಣೆ ಚಟುವಟಿಕೆಗಳನ್ನು ವಿಸ್ತರಿಸಲಿರುವ ಹಿನ್ನೆಲೆಯಲ್ಲಿ ದೇಶದ ಎರಡನೇ ಬಾಹ್ಯಾಕಾಶ ಬಂದರಿಗೆ ತಮಿಳುನಾಡು ಸಜ್ಜಾಗುತ್ತಿದೆ.

"ತಮಿಳುನಾಡಿನ ಕುಲಶೇಖರಪಟ್ಟಿಣಂ ಬಳಿ ರಾಕೆಟ್ ಉಡಾವಣಾ ಕೇಂದ್ರ ನಿರ್ಮಾಣದ ಪ್ರಸ್ತಾವ ಸರ್ಕಾರದ ಮುಂದಿದೆ" ಎಂದು ಕೇಂದ್ರ ಬಾಹ್ಯಾಕಾಶ ಖಾತೆ ಸಚಿವ ಜಿತೇಂದ್ರ ಸಿಂಗ್ ರಾಜ್ಯಸಭೆಗೆ ತಿಳಿಸಿದ್ದಾರೆ. ಇದನ್ನು ಇಸ್ರೋ ಅಧ್ಯಕ್ಷ ಕೆ.ಶಿವನ್ ದೃಢಪಡಿಸಿದ್ದು, "ಭಾರತದ ಎರಡನೇ ಬಾಹ್ಯಾಕಾಶ ಬಂದರು ಸ್ಥಾಪನೆಗೆ ತೂತುಕುಡಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ" ಎಂದು ಹೇಳಿದ್ದಾರೆ. ಪ್ರಮುಖ ಬಾಹ್ಯಾಕಾಶ ಚಟುವಟಿಕೆ ನಡೆಸುತ್ತಿರುವ ದೇಶಗಳು ಒಂದಕ್ಕಿಂತ ಹೆಚ್ಚು ರಾಕೆಟ್ ಉಡಾವಣಾ ಕೇಂದ್ರಗಳನ್ನು ಹೊಂದಿವೆ.

ತೂತುಕುಡಿ ಬಾಹ್ಯಾಕಾಶ ಬಂದರು ಮುಖ್ಯವಾಗಿ ಹೊಸದಾಗಿ ಅಭಿವೃದ್ಧಿಪಡಿಸಿದ ಚಿಕ್ಕ ಉಪಗ್ರಹ ಉಡಾವಣಾ ವಾಹನಗಳ (ಎಸ್‌ಎಸ್‌ಎಲ್‌ವಿ ಅಥವಾ ಮಿನಿ-ಪಿಎಸ್‌ಎಲ್‌ವಿ) ಉಡಾವಣೆಗೆ ಬಳಕೆಯಾಗಲಿದೆ. ಆರಂಭಿಕ ಹಂತದಲ್ಲಿ ಎಸ್‌ಎಸ್‌ಎಲ್‌ವಿಗಳು ಕೂಡಾ ಶ್ರೀಹರಿ ಕೋಟಾದಿಂದ ಉಡಾವಣೆಯಾಗಲಿವೆ. ಆದರೆ ಎರಡನೇ ಬಾಹ್ಯಾಕಾಶ ಬಂದರು ಸಿದ್ಧವಾಗುತ್ತಿದ್ದಂತೆ ಎಸ್‌ಎಸ್‌ಎಲ್‌ವಿ ಉಡಾವಣೆಯನ್ನು ಅಲ್ಲಿಗೆ ವರ್ಗಾಯಿಸಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕಡಿಮೆ ಪೇಲೋಡ್ ಸಾಮರ್ಥ್ಯದ ಅಂದರೆ 500 ಕೆಜಿ ಸಾಮರ್ಥ್ಯದ ಮೊಟ್ಟಮೊದಲ ಎಸ್‌ಎಸ್‌ಎಲ್‌ವಿ ಉಡಾವಣೆ 2020ರ ಮೊದಲ ತ್ರೈಮಾಸಿಕದಲ್ಲಿ ನಡೆಯಲಿದೆ. ಬೇಡಿಕೆಯನ್ನು ಆಧರಿಸಿ ಉಳಿದ ರಾಕೆಟ್‌ಗಳನ್ನು ಪ್ರಸ್ತಾವಿತ ಬಾಹ್ಯಾಕಾಶ ಬಂದರಿನಿಂದ ಉಡಾಯಿಸಲಾಗುವುದು ಎಂದು ಹೇಳಿದ್ದಾರೆ. ನೇರ ದಕ್ಷಿಣಮುಖಿ ಉಡಾವಣೆಗಳು ತಮಿಳುನಾಡಿನ ಕೇಂದ್ರದಿಂದ ಸಾಧ್ಯವಾಗಲಿದೆ. ನೇರ ಮಾರ್ಗದ ಕಾರಣದಿಂದ ಹೆಚ್ಚಿನ ಪೇಲೋಡ್ ಒಯ್ಯಬಹುದಾಗಿದೆ. ಇದೀಗ ಶ್ರೀಹರಿ ಕೋಟಾದಿಂದ ರಾಕೆಟ್‌ಗಳನ್ನು ದಕ್ಷಿಣಾಭಿಮುಖವಾಗಿ ಉಡಾಯಿಸಲು ಅವಕಾಶವಿಲ್ಲ ಎಂದು ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X