Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅನರ್ಹ ಶಾಸಕ ಸುಧಾಕರ್ ಆಪರೇಷನ್ ಕಮಲದ...

ಅನರ್ಹ ಶಾಸಕ ಸುಧಾಕರ್ ಆಪರೇಷನ್ ಕಮಲದ ಕಿಂಗ್‌ಪಿನ್: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ2 Dec 2019 7:12 PM IST
share
ಅನರ್ಹ ಶಾಸಕ ಸುಧಾಕರ್ ಆಪರೇಷನ್ ಕಮಲದ ಕಿಂಗ್‌ಪಿನ್: ಸಿದ್ದರಾಮಯ್ಯ

ಬೆಂಗಳೂರು, ಡಿ.2: ಚಿಕ್ಕಬಳ್ಳಾಪುರದ ಅನರ್ಹ ಶಾಸಕ ಡಾ.ಕೆ.ಸುಧಾಕರ್ ಒಂಥರ ಊಸರವಳ್ಳಿ ಇದ್ದಂಗೆ. ಜಾತ್ಯತೀತರ ಜೊತೆ ಇದ್ದಾಗ ಅವರಂತೆ, ಕೋಮುವಾದಿಗಳ ಜೊತೆಯಿದ್ದಾಗ ಅವರಂತೆ ಬಣ್ಣ ಬದಲಾಯಿಸುತ್ತಾರೆ. ಬಿಜೆಪಿಯ ಆಪರೇಷನ್ ಕಮಲ ಯಶಸ್ಸಿನ ಕಿಂಗ್‌ಪಿನ್ ಈ ಸುಧಾಕರ್ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಸೋಮವಾರ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಅಭ್ಯರ್ಥಿ ಆಂಜನಪ್ಪ ಪರವಾಗಿ ಮಂಚನಬಲೆಯಲ್ಲಿ ಆಯೋಜಿಸಿದ್ದ ರೋಡ್ ಶೋನಲ್ಲಿ ಭಾಗವಹಿಸಿ ಮಾತನಾಡಿದ ಅವರು, 2013ರಲ್ಲಿ ಆಂಜನಪ್ಪಗೆ ಟಿಕೇಟ್ ನೀಡುವ ಬದಲು ಸುಧಾಕರ್‌ಗೆ ನೀಡಿದ್ದೆ ಎಂದರು. ಒಂದು ವೇಳೆ ಆಗಲೇ ಆಂಜನಪ್ಪಗೆ ಟಿಕೇಟ್ ನೀಡಿದ್ದರೆ ಅವರು ಶಾಸಕರೂ ಆಗಿರುತ್ತಿದ್ದರು ಮತ್ತು ಕ್ಷೇತ್ರ ಇಂದು ಉಪಚುನಾವಣೆ ಎದುರಿಸುವ ಸ್ಥಿತಿಯೂ ಬರುತ್ತಿರಲಿಲ್ಲ ಎಂದರು.

ಎಂಥಾ ನಯವಂಚಕನಿಗೆ ಟಿಕೇಟ್ ನೀಡಿದೆನಲ್ಲಾ ಅಂತ ಈಗ ಪಶ್ಚಾತ್ತಾಪವಾಗುತ್ತಿದೆ. ಈ ಮನುಷ್ಯ ಯಾರಿಗೆ ಬೇಕಾದರೂ ಮಕ್ಮಲ್ ಟೋಪಿ ಹಾಕುತ್ತಾನೆ. ನನಗೂ ಮಕ್ಮಲ್ ಟೋಪಿ ಹಾಕಿ ಹೋಗಿದ್ದಾನೆ. ಸುಳ್ಳು ಹೇಳುವುದರಲ್ಲಿ, ಅದಕ್ಕೆ ಅನುಗುಣವಾಗಿ ಕಥೆ ಕಟ್ಟುವುದರಲ್ಲಿ ಸುಧಾಕರ್ ನಿಸ್ಸೀಮ ಎಂದು ಸಿದ್ದರಾಮಯ್ಯ ಹೇಳಿದರು.

ಮುಂಬೈ ರೆಸಾರ್ಟ್‌ಗೆ ಹೋಗುತ್ತಿರುವ ಬಗ್ಗೆ ವಿಚಾರಿಸಿದಾಗ, ಎಂಟಿಬಿ ಅವರನ್ನ ಬದಲಾಯಿಸಲು ಚೆನ್ನೈಗೆ ಹೋಗಿದ್ದಾಗಿ ಹೇಳಿದ್ದ, ಆದರೆ, ಆಮೇಲೆ ಗೊತ್ತಾಯ್ತು, ಎಂಟಿಬಿ ನಾಗರಾಜರನ್ನ ಆಣೆ-ಪ್ರಮಾಣದ ಹೆಸರಲ್ಲಿ ಹಾಳುಮಾಡಿದ್ದೆ ಈ ಸುಧಾಕರ್ ಎಂದು ಅವರು ಆರೋಪಿಸಿದರು.

ಬೆಳಗ್ಗೆ 9 ಗಂಟೆಗೆ ರಾಜೀನಾಮೆ ವಾಪಾಸು ತಗೋತೀನಿ ಅಂತ ರಾತ್ರಿ ನನಗೆ ಮಾತು ಕೊಟ್ಟು, ಮುಂಜಾನೆ 6 ಗಂಟೆಗೆ ಕದ್ದು ಮುಂಬೈ ಓಡಿಹೋದ ಆಸಾಮಿ ಸುಧಾಕರ್. ಇಂಥವರನ್ನು ನಯಾಪೈಸೆಗೂ ನಂಬಬೇಡಿ. ಸದಾ ಇವರ ಒಳ್ಳೆಯದನ್ನೇ ಬಯಸಿದ ನಮ್ಮ ಬೆನ್ನಿಗೇ ಚೂರಿ ಹಾಕಿದವರು ಇನ್ನು ಕ್ಷೇತ್ರದ ಅಮಾಯಕ ಜನರನ್ನು ಬಿಟ್ಟಾರೆಯೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

2016-17ರ ಬಜೆಟ್‌ನಲ್ಲಿ ರಾಜ್ಯದ ಪ್ರತಿ ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಸ್ಥಾಪನೆಗೆ ಅನುಮೋದನೆ ನೀಡಿದ್ದು ನಮ್ಮ ಸರಕಾರ. ಹಾಗಾಗಿ ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗುತ್ತಿದೆ. ಅಂದಿನ ಬಜೆಟ್ ಮಂಡಿಸಿದ್ದು ನಾನು, ಆರ್ಥಿಕ ಸಚಿವ ನಾನು, ಮುಖ್ಯಮಂತ್ರಿ ನಾನು. ಇದರಲ್ಲಿ ನಿಮ್ಮ ಸಾಧನೆ ಏನಿದೆ ಮಿಸ್ಟರ್ ಸುಧಾಕರ್ ಎಂದು ಅವರು ಹೇಳಿದರು.

ಚಿಕ್ಕಬಳ್ಳಾಪುರ ಭಾಗಕ್ಕೆ ನೀರು ಹರಿಸುವ ಎತ್ತಿನಹೊಳೆ ಯೋಜನೆ ಅನುಷ್ಠಾನಗೊಳಿಸಿದ್ದು ನಮ್ಮ ಸರಕಾರ. ನಾನು ಮುಖ್ಯಮಂತ್ರಿಯಾಗಿದ್ದಾಗ ವೀರಪ್ಪ ಮೊಯ್ಲಿ, ಶಿವಶಂಕರ್ ರೆಡ್ಡಿ ಇವರೆಲ್ಲರ ಸಹಕಾರದಿಂದ ಯೋಜನೆ ಜಾರಿ ಮಾಡಿದ್ದೆ. ಕುಡಿಯಲು ನೀರು ಕೊಟ್ಟವರಿಗೆ ಮೋಸಮಾಡಿ, ಯೋಜನೆಗೆ ವಿರೋಧ ಮಾಡಿದ್ದ ಬಿಜೆಪಿ ಜೊತೆ ಈಗ ಸುಧಾಕರ್ ಕೈಜೋಡಿಸಿದ್ದಾರೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾತನಾಡಿ, ಸುಧಾಕರ್ ಮತ್ತೆ ಶಾಸಕರಾಗಿ ಆಯ್ಕೆಯಾದಲ್ಲಿ ಜನತಂತ್ರ ವ್ಯವಸ್ಥೆಗೆ ದೊಡ್ಡ ಕೊಡಲಿ ಪೆಟ್ಟು ಬಿದ್ದಂತೆ ಆಗುತ್ತದೆ. ಹಾಗಾಗಿ ಇಂತಹ ವ್ಯಕ್ತಿಗಳಿಗೆ ಸರಿಯಾದ ಪಾಠ ಕಲಿಸಲೇಬೇಕು. ಇಲ್ಲದಿದ್ದರೆ ರಾಜಕೀಯ ಕ್ಷೇತ್ರದ ಶುದ್ಧೀಕರಣ ಆಗುವುದಿಲ್ಲ. ತತ್ವ-ಸಿದ್ಧಾಂತ ನಿಷ್ಠರಿಗೂ ಗೌರವ ಇರುವುದಿಲ್ಲ ಎಂದರು.

5 ಬಾರಿ ಶಾಸಕರಾಗಿ ಆಯ್ಕೆಯಾದ ಬಳಿಕವೂ, ಸಚಿವ ಸ್ಥಾನ ಸಿಗದೇ ಇದ್ದಾಗಲೂ ಬೇಸರ ಮಾಡಿಕೊಳ್ಳದೇ ಪಕ್ಷ ನಿಷ್ಠೆ ಮೆರೆದವರು ಕಾಂಗ್ರೆಸ್‌ನಲ್ಲಿದ್ದಾರೆ. ಸುಧಾಕರ್ ಕಾಂಗ್ರೆಸ್ ಪಕ್ಷದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು, ಇದೀಗ ಅವರು ತಮ್ಮ ಶಾಸಕ ಸ್ಥಾನವನ್ನು ಮಾರಾಟ ಮಾಡಿಕೊಳ್ಳುವಂತ ಹೀನ ಕೃತ್ಯ ಮಾಡಿದ್ದಾರೆ. ಇವರು ಮಾಡಿರುವ ಮೋಸಗಳಿಗೆ ಇತಿ-ಮಿತಿಗಳಿಲ್ಲ ಎಂದು ಅವರು ಟೀಕಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಂಜನಪ್ಪ, ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಚಿವರಾದ ಶಿವಶಂಕರೆಡ್ಡಿ, ಕೃಷ್ಣಭೈರೇಗೌಡ, ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್, ವಿಧಾನಪರಿಷತ್ ಸದಸ್ಯ ನಸೀರ್ ಅಹ್ಮದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X