Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉಪ ಚುನಾವಣೆ: ಮತದಾನಕ್ಕೆ ಚುನಾವಣಾ ಆಯೋಗ...

ಉಪ ಚುನಾವಣೆ: ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ಧತೆ

►ಡಿ.5ಕ್ಕೆ ಮತದಾನ ► ಡಿ.9ಕ್ಕೆ ಮತ ಎಣಿಕೆ

ವಾರ್ತಾಭಾರತಿವಾರ್ತಾಭಾರತಿ2 Dec 2019 7:18 PM IST
share
ಉಪ ಚುನಾವಣೆ: ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ಧತೆ

ಬೆಂಗಳೂರು, ಡಿ.2: ಶಾಸಕರ ರಾಜೀನಾಮೆಯಿಂದ ತೆರವುಗೊಂಡಿದ್ದ ರಾಜ್ಯದ ಹದಿನೈದು ಕ್ಷೇತ್ರಗಳಿಗೆ ಡಿ.5ರಂದು ಉಪಚುನಾವಣೆ ಮತದಾನ ನಡೆಯಲಿದ್ದು, ಈ ಸಂಬಂಧ ಚುನಾವಣಾ ಆಯೋಗ ಸಕಲ ಸಿದ್ಧತೆ ಕೈಗೊಂಡಿದೆ.

ಗುರುವಾರ (ಡಿ.5) ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಮತದಾನ ನಡೆಯಲಿದೆ. 15 ವಿಧಾನಸಭಾ ಕ್ಷೇತ್ರಗಳಲ್ಲಿ 4,185 ಮತಗಟ್ಟೆಗಳಲ್ಲಿ, 37.82 ಲಕ್ಷ ಮತದಾರರು ಹಕ್ಕು ಚಲಾಯಿಸಲಿದ್ದಾರೆ. ಎಲ್ಲ ಹದಿನೈದು ಕ್ಷೇತ್ರಗಳಿಂದ ಬಿಜೆಪಿ, ಕಾಂಗ್ರಸ್ ಹಾಗೂ ಜೆಡಿಎಸ್ ಸೇರಿ ಒಟ್ಟು 165 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ.

ಎಲ್ಲೆಲ್ಲಿ ಎಷ್ಟು ಮತಗಟ್ಟೆಗಳು: ಅಥಣಿ-260, ಕಾಗವಾಡ-231, ಗೋಕಾಕ-288, ಯಲ್ಲಾಪುರ-231, ಹಿರೇಕೆರೂರು-229, ರಾಣೆಬೆನ್ನೂರು-266, ವಿಜಯನಗರ (ಹೊಸಪೇಟೆ)- 247, ಚಿಕ್ಕಬಳ್ಳಾಪುರ-254, ಕೆ.ಆರ್.ಪುರಂ-437, ಯಶವಂತಪುರ -461, ಮಹಾಲಕ್ಷ್ಮಿ ಲೇಔಟ್-270, ಶಿವಾಜಿನಗರ-193, ಹೊಸಕೋಟೆ-286, ಕೆ.ಆರ್.ಪೇಟೆ-258 ಹಾಗೂ ಹುಣಸೂರು-274 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ. ಅದರಲ್ಲಿ 39 ಸಖಿ ಮತಗಟ್ಟೆಗಳು, ಅಂಗವಿಕಲ ನಿರ್ವಹಿಸುವ 13 ಹಾಗೂ 3 ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಸೂಕ್ಷ್ಮಮತಗಟ್ಟೆಗಳು: 15 ಕ್ಷೇತ್ರಗಳ ವ್ಯಾಪ್ತಿಯಲ್ಲಿ 884 ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ. ಉಳಿದಂತೆ 414 ಮತಗಟ್ಟೆಗಳಲ್ಲಿ ಸಿಎಪಿಎಫ್ ತಂಡ ಕಾರ್ಯನಿರ್ವಹಿಸಲಿದೆ. 805 ಮತಗಟ್ಟೆಗಳಲ್ಲಿ ಸೂಕ್ಷ್ಮ ವೀಕ್ಷಕರು, 206 ಮತಗಟ್ಟೆಗಳಲ್ಲಿ ವೆಬ್‌ಕೆಮೆರಾ ಹಾಗೂ 259 ಮತಗಟ್ಟೆಗಳಲ್ಲಿ ವಿಡಿಯೋ ಚಿತ್ರೀಕರಣ ಮಾಡಲಾಗುವುದು.

ಮತದಾನದ ಸಂದರ್ಭದಲ್ಲಿ ಯಾವುದೇ ಅಡೆತಡೆಗಳು ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದೆ. ಅಗತ್ಯಕ್ಕಿಂತ ಅಧಿಕ ಮತಯಂತ್ರ ಹಾಗೂ ವಿವಿ ಫ್ಯಾಟ್‌ಗಳನ್ನು ಸಿದ್ಧಪಡಿಸಲಾಗಿದೆ. ಇದೀಗ ಒಟ್ಟಾರೆ 8, 370 ಬಿಯು, 8,370 ಸಿಯು, 8,370 ವಿವಿ ಫ್ಯಾಟ್‌ಗಳನ್ನು ಸಿದ್ಧಪಡಿಸಿಡಲಾಗಿದೆ ಎಂದು ಸಂಜೀವ್ ಕುಮಾರ್ ಮಾಹಿತಿ ನೀಡಿದರು.

ಗುರುತಿನ ಚೀಟಿ: ಉಪಚುನಾವಣೆಯಲ್ಲಿಯೂ ಮತದಾರರ ಭಾವಚಿತ್ರವುಳ್ಳ ಚೀಟಿ ನೀಡಲಾಗುತ್ತದೆ. ಆದರೆ, ಇದು ಗುರುತಿನ ಚೀಟಿಯಲ್ಲ. ಮತದಾರರು ಆಯೋಗ ನೀಡುವ ಅಧಿಕೃತ ಗುರುತಿನ ಚೀಟಿ ಸೇರಿದಂತೆ 11 ಇನ್ನಿತರೆ ಗುರುತಿನ ಚೀಟಿಗಳನ್ನು ತೋರಿಸಿ ಮತ ಚಲಾಯಿಸಬಹುದಾಗಿದೆ.

ಗುರುತಿನ ಚೀಟಿಯ ಜತೆಗೆ ಪಾಸ್‌ಪೋರ್ಟ್, ಚಾಲನಾ ಪರವಾನಿಗೆ ಪತ್ರ, ಖಾಸಗಿ ಕಂಪೆನಿಗಳಿಂದ ನೀಡಿರುವ ಭಾವಚಿತ್ರವುಳ್ಳ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್, ಪಾನ್ ಪಾರ್ಡ್, ನರೇಗಾ ಕಾರ್ಡ್, ಹೆಲ್ತ್‌ಕಾರ್ಡ್, ಸರಕಾರಿ ಅಧಿಕೃತ ಕಾರ್ಡ್ ಹಾಗೂ ಆಧಾರ್‌ಕಾರ್ಡ್ ಬಳಸಬಹುದಾಗಿದೆ.

ವಿಶೇಷಚೇತನರು ಮತ ಹಾಕಲು ಸಹಾಯವಾಗುವಂತೆ ಚುನಾವಣಾ ಆಯೋಗದಿಂದ ನೆರವು ನೀಡಲಾಗುತ್ತದೆ. ಇದುವರೆಗೂ 24,744 ಜನರು ನೋಂದಾಯಿಸಿಕೊಂಡಿದ್ದಾರೆ. ಇನ್ನೂ ನೋಂದಣಿಗೆ ಅವಕಾಶವಿದ್ದು, ತಕ್ಷಣವೇ ಆನ್‌ಲೈನ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ.

ಎಡಗೈ ತೋರಿ ಬೆರಳಿಗೆ ಶಾಹಿ

‘ಹದಿನೈದು ಕ್ಷೇತ್ರಗಳ ಉಪಚುನಾವಣೆಯಲ್ಲಿ ಮತ ಹಾಕುವ ಮತದಾರರ ಎಡಗೈ ತೋರುಬೆರಳಿಗೆ ನೀಲಿ ಬಣ್ಣದ ಅಳಿಸಲಾಗದ ಶಾಹಿಯನ್ನು ಹಾಕಲಾಗುತ್ತದೆ’

-ಸಂಜೀವ್ ಕುಮಾರ್, ಮುಖ್ಯ ಚುನಾವಣಾಧಿಕಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X