Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಚುನಾವಣಾ ಕೆಲಸ ನಿರ್ಲಕ್ಷಿಸಿದರೆ ಕಠಿಣ...

ಚುನಾವಣಾ ಕೆಲಸ ನಿರ್ಲಕ್ಷಿಸಿದರೆ ಕಠಿಣ ಕ್ರಮ: ಮುನಿಷ್ ಮೌದ್ಗಿಲ್ ಎಚ್ಚರಿಕೆ

ಬಸ್-ಆಂಬ್ಯುಲೆನ್ಸ್-ಸರಕಾರಿ ವಾಹನಗಳ ತಪಾಸಣೆ

ವಾರ್ತಾಭಾರತಿವಾರ್ತಾಭಾರತಿ2 Dec 2019 9:56 PM IST
share
ಚುನಾವಣಾ ಕೆಲಸ ನಿರ್ಲಕ್ಷಿಸಿದರೆ ಕಠಿಣ ಕ್ರಮ: ಮುನಿಷ್ ಮೌದ್ಗಿಲ್ ಎಚ್ಚರಿಕೆ

ಬೆಳಗಾವಿ, ಡಿ.2: ಉಪ ಚುನಾವಣೆ ಬಹಳ ಸೂಕ್ಷ್ಮವಾಗಿದ್ದು, ಮತದಾನಕ್ಕೆ ಕೇವಲ ಮೂರು ದಿನಗಳು ಬಾಕಿ ಇರುವುದರಿಂದ ನೀತಿ ಸಂಹಿತೆ ಪಾಲನೆ ಹಾಗೂ ಚುನಾವಣಾ ಅಕ್ರಮ ತಡೆಗಟ್ಟುವಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ತೋರಿಸಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಾದರಿ ನೀತಿ ಸಂಹಿತೆ ಜಾರಿಯ ವಿಶೇಷ ಅಧಿಕಾರಿ ಮುನಿಷ್ ಮೌದ್ಗಿಲ್ ಎಚ್ಚರಿಕೆ ನೀಡಿದರು.

ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ವಿವಿಧ ತಂಡಗಳ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಚುನಾವಣಾ ಆಯೋಗವು ಉಪ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಮಾದರಿ ನೀತಿ ಸಂಹಿತೆಯ ಕಟ್ಟುನಿಟ್ಟಿನ ಜಾರಿ ಬಹಳ ಮುಖ್ಯವಾಗಿದೆ ಎಂದರು.

ಕೊನೆಯ ಮೂರು ದಿನಗಳಲ್ಲಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಚೆಕ್ ಪೋಸ್ಟ್, ಎಫ್.ಎಸ್.ಟಿ., ಎಸ್.ಎಸ್.ಟಿ, ಮಾದರಿ ನೀತಿ ಸಂಹಿತೆ, ವೆಚ್ವ ವೀಕ್ಷಕ ತಂಡಗಳು, ಅಬಕಾರಿ, ಪೊಲೀಸ್ ಮತ್ತಿತರ ತಂಡಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಅವರು ಸೂಚನೆ ನೀಡಿದರು.

ನೇರವಾಗಿ ದೂರು ಸಲ್ಲಿಸಲು ಮನವಿ: ಜಿಲ್ಲೆಯ ಮೂರು ಮತಕ್ಷೇತ್ರಗಳಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮತ್ತು ಅಕ್ರಮಗಳ ಕುರಿತ ಸಾರ್ವಜನಿಕರು ಮತ್ತು ಪಕ್ಷದ ಪ್ರತಿನಿಧಿಗಳು ನೀಡುವ ದೂರುಗಳಿಗೆ ಸ್ಥಳೀಯ ಅಧಿಕಾರಿಗಳು ಮತ್ತು ಸಂಬಂಧಿಸಿದ ಅಧಿಕಾರಿಗಳು ಸ್ಪಂದಿಸದಿದ್ದರೆ ನೇರವಾಗಿ ತಮಗೆ ದೂರು ಸಲ್ಲಿಸಬಹುದು ಎಂದು ಮೌದ್ಗಿಲ್ ತಿಳಿಸಿದರು.

ಏನಾದರೂ ಚುನಾವಣಾ ಅಕ್ರಮ ಕಂಡು ಬಂದರೆ ನೇರವಾಗಿ ತಮ್ಮ ಮೊಬೈಲ್ ಸಂಖ್ಯೆ-9900099111 ಗೆ ಕರೆ ಮಾಡಿ ಮಾಹಿತಿ ನೀಡಬಹುದು. ಇದುವರೆಗೆ ಕಾರ್ಯನಿರ್ವಹಿಸಿರುವ ಎಲ್ಲ ತಂಡಗಳನ್ನು ಮುಂದಿನ ಮೂರು ದಿನಗಳವರೆಗೆ ಯಥಾಪ್ರಕಾರ ಕಾರ್ಯನಿರ್ವಹಿಸಲು ಸೂಚಿಸಿದ ಅವರು, ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿಸಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಬಸ್-ಆಂಬ್ಯುಲೆನ್ಸ್‌ಗಳ ತಪಾಸಣೆ: ಚುನಾವಣೆ ನಡೆಯುತ್ತಿರುವ ಜಿಲ್ಲೆಯ ಮೂರು ಮತಕ್ಷೇತ್ರಗಳನ್ನು ಪ್ರವೇಶಿಸುವ ಎಲ್ಲ ಮಾರ್ಗಗಳಲ್ಲಿ ಚೆಕ್ ಪೋಸ್ಟ್ ಸ್ಥಾಪಿಸಲಾಗಿದೆ. ಇದಲ್ಲದೇ ಅಕ್ಕಪಕ್ಕದ ಮತಕ್ಷೇತ್ರಗಳಲ್ಲಿ ಕೂಡ ಯಾವ ರೀತಿ ನಿಗಾ ವಹಿಸಬೇಕು ಎಂಬುದರ ಬಗ್ಗೆ ಆಯೋಗದ ಜತೆ ಚರ್ಚಿಸಿ ತಕ್ಷಣ ಕ್ರಮಕೈಗೊಳ್ಳಲಾಗುತ್ತದೆ ಎಂದು ಮೌದ್ಗಿಲ್ ಸ್ಪಷ್ಟಪಡಿಸಿದರು.

ಖಚಿತ ಮಾಹಿತಿ ಸಿಕ್ಕರೆ ಪಕ್ಕದ ಮತಕ್ಷೇತ್ರಗಳ ವ್ಯಾಪ್ತಿಯಲ್ಲೂ ಕಾರ್ಯಾಚರಣೆ ನಡೆಸಲಾಗುವುದು. ಸಾರಿಗೆ ಬಸ್, ಆಂಬ್ಯುಲೆನ್ಸ್ ಸೇರಿದಂತೆ ಎಲ್ಲ ಬಗೆಯ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದ್ದು, ಇದುವರೆಗೆ ನಾಲ್ಕು ಸಾವಿರ ಸಾರಿಗೆ ಬಸ್‌ಗಳನ್ನು ತಪಾಸಣೆ ಮಾಡಲಾಗಿದೆ. ಪೊಲೀಸ್ ಸೇರಿದಂತೆ ಎಲ್ಲ ಬಗೆಯ ಸಾರ್ವಜನಿಕ ಸಾರಿಗೆ ವಾಹನಗಳನ್ನು ಮತ್ತು ಸರಕಾರಿ ವಾಹನಗಳನ್ನೂ ತಪಾಸಣೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

ಮಾದರಿ ನೀತಿ ಸಂಹಿತೆ ಉಲ್ಲಂಘನೆ ಹಾಗೂ ಚುನಾವಣಾ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ವಿವರಿಸಿದರು. ಅಬಕಾರಿ ಇಲಾಖೆಯ ಅಧಿಕಾರಿಗಳು ಇದುವರೆಗೆ 77 ಪ್ರಕರಣ ದಾಖಲು ಮಾಡಲಾಗಿದೆ ಎಂದು ಅಬಕಾರಿ ಆಯುಕ್ತ ಬಸವರಾಜ ಮಾಹಿತಿಯನ್ನು ನೀಡಿದರು.

ಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮಲಕ್ಷ್ಮಣ ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X