ವೈದ್ಯೆ ಅತ್ಯಾಚಾರ, ಕೊಲೆ : ಮಹಿಳಾ ಮೋರ್ಚಾದಿಂದ ಎಸ್ಪಿಗೆ ಮನವಿ

ಉಡುಪಿ, ಡಿ.3: ಪಶುವೈದ್ಯೆ ಡಾ.ಪ್ರಿಯಾಂಕ ರೆಡ್ಡಿ ಅತ್ಯಾಚಾರ ಪ್ರಕರಣದ ತುರ್ತು ವಿಚಾರಣೆ ನಡೆಸಿ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಬಿಜೆಪಿ ಮಹಿಳಾ ಮೋರ್ಚಾ ಉಡುಪಿ ಜಿಲ್ಲೆ ಇದರ ವತಿಯಿಂದ ಮಂಗಳವಾರ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕಿ ನಿಶಾ ಜೇಮ್ಸ್ ಅವರಿಗೆ ಮನವಿ ಸಲ್ಲಿಸ ಲಾಯಿತು.
ನಿರ್ಭಯ ಪ್ರಕರಣದ ನಂತರ ಕೇಂದ್ರ ಸರಕಾರ ಮಹಿಳೆಯರ ಸುರಕ್ಷತೆಗೆ ಬಹಳಷ್ಟು ಕ್ರಮಗಳನ್ನು ಕೈಗೊಂಡರೂ ಅಪರಾಧಗಳು ಮಾತ್ರ ನಿರಂತರವಾಗಿ ನಡೆಯುತ್ತಿದೆ. ಅತ್ಯಾಚಾರ ಪ್ರಕರಣಗಳನ್ನು ಸಮಾಜ ಮತ್ತು ಕಾನೂನು ಗಂಭೀರವಾಗಿ ಪರಿಗಣಿಸಿ ತ್ವರಿತ ವಿಚಾರಣೆ ನಡೆಸಿ ಕಠಿಣ ಶಿಕ್ಷೆ ಜಾರಿಯಾದರೆ ಮಾತ್ರ ಭವಿಷ್ಯದಲ್ಲಿ ಇಂತಹ ಕೃತ್ಯ ಕಡಿಮೆ ಆಗಲು ಸಾಧ್ಯ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಮೋರ್ಚಾದ ಅಧ್ಯಕ್ಷೆ ನಯನ ಗಣೇಶ್, ಪ್ರಧಾನ ಕಾರ್ಯದರ್ಶಿಗಳಾದ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ವೀಣಾ ಶೆಟ್ಟಿ, ಮಾಜಿ ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್ ಮೊದಲಾದವರು ಉಪಸ್ಥಿತರಿದ್ದರು.
Next Story





