Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಿ.22 ರಂದು ಮಡಪ್ಪಾಡಿಯಲ್ಲಿ ಪತ್ರಕರ್ತರ...

ಡಿ.22 ರಂದು ಮಡಪ್ಪಾಡಿಯಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ

ವಾರ್ತಾಭಾರತಿವಾರ್ತಾಭಾರತಿ3 Dec 2019 8:34 PM IST
share
ಡಿ.22 ರಂದು ಮಡಪ್ಪಾಡಿಯಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ

ಸುಳ್ಯ,ಡಿ.3: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಹಯೋಗದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಸುಳ್ಯ ತಾಲೂಕಿನ ಮಡಪ್ಪಾಡಿಯಲ್ಲಿ ಡಿಸೆಂಬರ್ 22 ರಂದು ನಡೆಯಲಿದೆ. 

ಈ ಕುರಿತು ಚರ್ಚಿಸಲು ಸುಳ್ಯದ ಎಪಿಎಂಸಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಈ ಕುರಿತು ನಿರ್ಧರಿಸಲಾಯಿತು. ಗ್ರಾಮ ವಾಸ್ತವ್ಯದ ಸಿದ್ಧತೆಗಳ ಬಗ್ಗೆ ಚರ್ಚಿಸಲು ಡಿ.7 ರಂದು ಅಪರಾಹ್ನ 2.30ಕ್ಕೆ ಮಡಪ್ಪಾಡಿಯಲ್ಲಿ ಸಭೆ ನಡೆಸಲು ನಿರ್ಧರಿಸಲಾಯಿತು.

ಸಭೆಯಲ್ಲಿ ಮಾತನಾಡಿದ ಶಾಸಕ ಎಸ್‌.ಅಂಗಾರ ಗ್ರಾಮ ವಾಸ್ತವ್ಯದ ಯಶಸ್ವಿಗೆ ಎಲ್ಲಾ ರೀತಿಯ ಪ್ರಯತ್ನ ನಡೆಸಲಾಗುವುದು ಎಂದು ಹೇಳಿದರು. ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಜನರು ಮುಂದಿರಿಸುವ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಇಲಾಖೆಗಳು ಸನ್ನದ್ಧರಾಗಿರಬೇಕು ಎಂದು ಸೂಚಿಸಿದರು. ಅದಕ್ಕಾಗಿ ಏನು ಬೇಕಾಗಿದೆಯೋ ಅದನ್ನು ಜೋಡಿಸಿಕೊಳ್ಳಬೇಕು ಎಂದು ಅವರು ತಹಶೀಲ್ದಾರ್ ಮತ್ತು ತಾ.ಪಂ.ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದರು.

ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಮಾತನಾಡಿ ' ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡಿರುವ ಈ ವಿನೂತನ ಕಾರ್ಯಕ್ರಮದ ಯಶಸ್ವಿಗೆ ಎಲ್ಲಾ ಸಹಕಾರ ನೀಡಲಾಗುವುದು ಎಂದು ಹೇಳಿದರು.

ಸುಳ್ಯ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಮಡಪ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಕುಂತಳಾ ಕೇವಳ, ಉಪಾಧ್ಯಕ್ಷ ಎನ್.ಟಿ.ಹೊನ್ನಪ್ಪ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ, ಪೊಲೀಸ್ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ, ಸುಳ್ಯ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರಮುಖರಾದ ಪಿ.ಸಿ.ಜಯರಾಮ, ಭರತ್ ಮುಂಡೋಡಿ, ದಿನೇಶ್ ಮಡಪ್ಪಾಡಿ, ಎಂ.ಡಿ.ವಿಜಯಕುಮಾರ್, ಜಯರಾಮ ಹಾಡಿಕಲ್ಲು, ಮಿತ್ರದೇವ ಮಡಪ್ಪಾಡಿ, ವಿನಯಕುಮಾರ್ ಮುಳುಗಾಡು, ಸೋಮಶೇಖರ ಕೇವಳ, ಶಶಿಧರ ಕೇವಳ, ಗಂಗಯ್ಯ ಪೂಂಬಾಡಿ ಮತ್ತಿತರರು ಮಾತನಾಡಿ ಸಲಹೆ ಸೂಚನೆಗಳನ್ನು ನೀಡಿದರು.

ಜಿಲ್ಲಾ ಪಂಚಾಯತ್ ಸದಸ್ಯರಾದ ಹರೀಶ್ ಕಂಜಿಪಿಲಿ, ಎಸ್.ಎನ್.ಮನ್ಮಥ, ಆಶಾ ತಿಮ್ಮಪ್ಪ, ಪುಷ್ಪಾವತಿ ಬಾಳಿಲ, ತಾ.ಪಂ.ಉಪಾಧ್ಯಕ್ಷೆ ಶುಭದಾ ಎಸ್.ರೈ, ನ.ಪಂ.ಸದಸ್ಯರಾದ ಎಂ.ವೆಂಕಪ್ಪ ಗೌಡ, ವಿನಯಕುಮಾರ್ ಕಂದಡ್ಕ, ಕೆ.ಎಸ್.ಉಮ್ಮರ್, ಪ್ರಮುಖರಾದ ಎಂ.ಬಿ‌.ಸದಾಶಿವ, ಡಾ.ಯು.ಪಿ.ಶಿವಾನಂದ, ಪಿ.ಬಿ.ಸುಧಾಕರ ರೈ, ಅಬ್ದುಲ್ ಕಲಾಂ, ಸುರೇಶ್ ಕಣೆಮರಡ್ಕ, ಶಂಕರ್ ಪೆರಾಜೆ, ಕೆ.ಎಲ್.ಪ್ರದೀಪ್ ಕುಮಾರ್, ತಿಮ್ಮಪ್ಪ ಗೌಡ ಕುಂಡಡ್ಕ, ಡಾ.ಪುರುಷೋತ್ತಮ ಕೆ.ಜಿ, ದೇವರಾಜ್ ಕುದ್ಪಾಜೆ, ಸುಳ್ಯ ಆರಕ್ಷಕ ಉಪನಿರೀಕ್ಷಕ ಎಂ.ಆರ್.ಹರೀಶ್, ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸಣ್ಣೇ ಗೌಡ, ಮಡಪ್ಪಾಡಿ ಗ್ರಾಪಂ.ಅಭಿವೃದ್ಧಿ ಅಧಿಕಾರಿ ಧನಪತಿ, ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ದೇವರಾಜ್ ಮುತ್ಲಾಜೆ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಲಕ್ಷ್ಮೀಶ ರೈ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಗ್ರಾಮಾಂತರ ಕಾರ್ಯದರ್ಶಿ ಸಿದ್ದಿಕ್ ನೀರಾಜೆ, ಕಾರ್ಯಕಾರಿ ಸಮಿತಿ ಸದಸ್ಯರಾದ ಆರ್.ಸಿ.ಭಟ್, ಪುಷ್ಪರಾಜ್.ಬಿ‌.ಎನ್, ಭಾಸ್ಕರ ರೈ ಕಟ್ಟ, ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ, ಪತ್ರಕರ್ತರಾದ ಗಂಗಾಧರ ಮಟ್ಟಿ, ಹರೀಶ್ ಬಂಟ್ವಾಳ್, ಶಿವಪ್ರಸಾದ್ ಕೇರ್ಪಳ, ತೇಜೇಶ್ವರ ಕುಂದಲ್ಪಾಡಿ, ಕಿರಣ್ ಪ್ರಸಾದ್ ಕುಂಡಡ್ಕ, ದಯಾನಂದ ಕೊರತ್ತೋಡಿ, ಪದ್ಮನಾಭ ಮುಂಡೋಕಜೆ, ಶರೀಪ್ ಜಟ್ಟಿಪಳ್ಳ, ಹಸೈನಾರ್ ಜಯನಗರ, ದಿನೇಶ್ ಮಠ, ರಮೇಶ್ ನೀರಬಿದಿರೆ, ಕೆ.ಟಿ.ಭಾಗೀಶ್ ಭಾಗವಹಿಸಿದ್ದರು.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಗಂಗಾಧರ ಕಲ್ಲಪಳ್ಳಿ ಸ್ವಾಗತಿಸಿ, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ದುರ್ಗಾಕುಮಾರ್ ನಾಯರ್ ಕೆರೆ ವಂದಿಸಿದರು. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಲೋಕೇಶ್ ಪೆರ್ಲಂಪಾಡಿ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X