Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಖಾಸಗಿ ಕಾಲೇಜಿನ ಕಿವಿ ಹಿಂಡಿದ ಗ್ರಾಹಕರ...

ಖಾಸಗಿ ಕಾಲೇಜಿನ ಕಿವಿ ಹಿಂಡಿದ ಗ್ರಾಹಕರ ಹಕ್ಕುಗಳ ನ್ಯಾಯಾಲಯ

-ಸಮೀರ್ ದಳಸನೂರು-ಸಮೀರ್ ದಳಸನೂರು3 Dec 2019 10:06 PM IST
share

ಬೆಂಗಳೂರು, ಡಿ.3: ಪ್ರತಿದಿನ ಕೆಲವೊಂದು ಖಾಸಗಿ ಕಾಲೇಜುಗಳು ಕ್ಷುಲ್ಲಕ ಕಾರಣಗಳಿನ್ನಿಟ್ಟುಕೊಂಡು ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡುತ್ತಿರುತ್ತಾರೆ. ಇದಕ್ಕೆ ಪ್ರತಿರೋಧ ವ್ಯಕ್ತಪಡಿಸುವುದು ಬೆರಳೆಣಿಕೆಯಷ್ಟು ಜನ ಮಾತ್ರ. ಆದರೆ, ವಿದ್ಯಾರ್ಥಿನಿಯೊಬ್ಬಾಕೆಯೇ ಕಾನೂನು ಹೋರಾಟ ಮಾಡುವ ಮೂಲಕ ಶುಲ್ಕ ರೂಪದಲ್ಲಿ ಪಡೆದಿದ್ದ ಹಣವನ್ನು ವಾಪಸ್ಸು ಪಡೆಯುವಲ್ಲಿ ಯಶಸ್ಸು ಕಂಡಿದ್ದಾರೆ.

ಬಿಎಸ್ಸಿ ಪದವಿ ಪಡೆಯಲು ರಾಜಧಾನಿ ಬೆಂಗಳೂರಿನ ಖಾಸಗಿ ಕಾಲೇಜಿಗೆ ಸೇರಿದ ಬಳಿಕ ಮೂರ್ಛೆರೋಗಕ್ಕೆ ತುತ್ತಾಗಿ ಶಿಕ್ಷಣ ಮುಂದುವರೆಸಲಾಗದ ವಿದ್ಯಾರ್ಥಿನಿಗೆ ಶುಲ್ಕ ರೂಪದಲ್ಲಿ ಪಡೆದುಕೊಂಡಿದ್ದ ಮೊತ್ತ ಹಿಂದಿರುಗಿಸಲು ಕಾಲೇಜಿಗೆ ಸೂಚಿಸಿರುವ ನಗರದ ಗ್ರಾಹಕರ ಹಕ್ಕುಗಳ ನ್ಯಾಯಾಲಯ, ಕಾನೂನು ಹೋರಾಟದ ಪರಿಹಾರವಾಗಿ 20 ಸಾವಿರ ರೂ.ಗಳ ಪಾವತಿಸಲು ನಿರ್ದೇಶಿಸಿದೆ.

ವಿದ್ಯಾರ್ಥಿನಿ ಪಾವತಿಸಿದ್ದ ಒಟ್ಟು 25 ಸಾವಿರ ರೂ.ಗಳ ಶುಲ್ಕದಲ್ಲಿ ಕಾಲೇಜು ನೋಂದಣಿ ಪ್ರಕ್ರಿಯೆಗೆ 5 ಸಾವಿರ ರೂ.ಪಡೆದು ಇನ್ನುಳಿದ 20 ಸಾವಿರಗಳನ್ನು ಹಿಂದಿರುಗಿಸಬೇಕು. ಈ ಆದೇಶವನ್ನು ಮುಂದಿನ 6 ವಾರಗಳಲ್ಲಿ ಜಾರಿಗೊಳಿಸಬೇಕು ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ.

ಪ್ರಕರಣದ ವಿವರ?: ಕೋಲಾರ ಜಿಲ್ಲೆ ಮಾಲೂರು ನಿವಾಸಿ ಸುಪ್ರಿಯಾ(ಹೆಸರು ಬದಲಿಸಲಾಗಿದೆ) ಎಂಬುವರು 2018-19ನೆ ಶೈಕ್ಷಣಿಕ ಸಾಲಿನಲ್ಲಿ ಬಿಎಸ್ಸಿ ಪದವಿ ವಿದ್ಯಾಭ್ಯಾಸಕ್ಕೆ ನಗರದ ಎಚ್‌ಎಸ್‌ಆರ್ ಬಡಾವಣೆಯಲ್ಲಿರುವ ಆಕ್ಸ್‌ಫರ್ಡ್ ಕಾಲೇಜ್ ಆಫ್ ಸೈನ್ಸ್‌ಗೆ ಸೇರಿದ್ದರು. ಕಾಲೇಜು ಆಡಳಿತ ಮಂಡಳಿ ಒತ್ತಾಯದ ಮೇರೆಗೆ 25 ಸಾವಿರ ರೂ.ಗಳನ್ನು ಶುಲ್ಕದ ರೂಪದಲ್ಲಿ ಪಾವತಿಸಿದ್ದರು. ಈ ನಡುವೆ ಮೂರ್ಛೆರೋಗಕ್ಕೆ ತುತ್ತಾದ ಸುಪ್ರಿಯಾ ಖಾಸಗಿ ಆಸ್ಪತ್ರೆಯಲ್ಲಿ ಸುಧೀರ್ಘ ಚಿಕಿತ್ಸೆ ಪಡೆಯಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಶಿಕ್ಷಣ ಮುಂದುವರೆಸಲು ಸಾಧ್ಯವಾಗದಂತಾಗಿತ್ತು.

ಅನಾರೋಗ್ಯದ ಕಾರಣದಿಂದ ತಾನು ಶಿಕ್ಷಣ ಮುಂದುವರೆಸಲು ಸಾಧ್ಯವಾಗುತ್ತಿಲ್ಲ, ಹಾಗಾಗಿ, ಈಗಾಗಲೇ ಪಾವತಿ ಮಾಡಿದ್ದ ಶುಲ್ಕ ಹಿಂದುರಿಗಿಸಬೇಕು ಎಂದು ಕಾಲೇಜಿನ ಆಡಳಿತ ಮಂಡಳಿಗೆ ಮನವಿ ಮಾಡಿದ್ದರು. ಈ ಮನವಿಗೆ ಕಾಲೇಜು ಆಡಳಿತ ಮಂಡಳಿ ಸಕಾರಾತ್ಮಕ ಉತ್ತರ ನೀಡಿರಲಿಲ್ಲ. ಬಳಿಕ ತಮ್ಮ ವಕೀಲರ ಮೂಲಕ ಲೀಗಲ್ ನೋಟಿಸ್ ಕಳುಹಿಸಲಾಗಿತ್ತು. ಆದರೂ, ಕಾಲೇಜು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.

ಕಾಲೇಜು ಆಡಳಿತ ಮಂಡಳಿಯ ಈ ಕ್ರಮ ಪ್ರಶ್ನಿಸಿ ಸುಪ್ರಿಯಾ, ಬೆಂಗಳೂರಿನ ಗ್ರಾಹಕರ ಹಕ್ಕುಗಳ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ಸಂಬಂಧ ಕಾಲೇಜಿನ ಆಡಳಿತ ಮಂಡಳಿಗೆ ನೋಟಿಸ್ ಜಾರಿ ಮಾಡಲಾಗಿತ್ತು. ಆದರೂ, ಕಾಲೇಜು ಯಾವುದೇ ರೀತಿಯ ಆಕ್ಷೇಪಣೆ ಸಲ್ಲಿಸಿರಲಿಲ್ಲ ಎಂದು ತಿಳಿದುಬಂದಿದೆ.

ಸುಪ್ರಿಯಾ ಸಲ್ಲಿಸಿದ್ದ ದಾಖಲೆಗಳಾದ ಶುಲ್ಕ ಪಾವತಿ ರಸೀದಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವ ಸಂಬಂಧದ ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಾಧೀಶರು, ಅನಾರೋಗ್ಯದಿಂದ ಕೂಡಿರುವ ವಿದ್ಯಾರ್ಥಿನಿ ಶಿಕ್ಷಣ ಪಡೆಯಲು ಸಾಧ್ಯವಿಲ್ಲ ಎಂಬ ಅಂಶ ದೃಢಪಟ್ಟಿದೆ. ಆದ್ದರಿಂದ ವಿದ್ಯಾರ್ಥಿನಿ ಪಾವತಿಸಿರುವ ಮೊತ್ತವನ್ನು ಹಿಂದಿರುಗಿಸಬೇಕು ಎಂದು ತನ್ನ ಆದೇಶದಲ್ಲಿ ತಿಳಿಸಿದ್ದಾರೆ.

share
-ಸಮೀರ್ ದಳಸನೂರು
-ಸಮೀರ್ ದಳಸನೂರು
Next Story
X