Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತುಂಬೆ ಕಾಲೇಜಿನಲ್ಲಿ 31ನೇ ವರ್ಷದ...

ತುಂಬೆ ಕಾಲೇಜಿನಲ್ಲಿ 31ನೇ ವರ್ಷದ ಕ್ರೀಡಾಕೂಟದ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ4 Dec 2019 10:29 PM IST
share
ತುಂಬೆ ಕಾಲೇಜಿನಲ್ಲಿ 31ನೇ ವರ್ಷದ ಕ್ರೀಡಾಕೂಟದ ಉದ್ಘಾಟನೆ

ಬಂಟ್ವಾಳ, ಡಿ. 4: ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಗುಣವನ್ನು ಎಳವೆಯಲ್ಲಿ ರೂಢಿಸಿಕೊಂಡಾಗ ಭವಿಷ್ಯತ್ತಿನ ಜೀವನದಲ್ಲೂ ಸೋಲನ್ನು ಸ್ವೀಕರಿಸುತ್ತಾ ಮುಂದೆ ಯಶಸನ್ನು ಕಾಣಲು ಸಾಧ್ಯ ಎಂದು ವಿಟ್ಲದ ಲಯನ್ಸ್ ಕ್ಲಬ್ ಅಧ್ಯಕ್ಷ ಇಂಜಿನಿಯರ್ ಸಂತೋಷ್ ಶೆಟ್ಟಿ ಪೆಲತ್ತಡ್ಕ ಹೇಳಿದ್ದಾರೆ.

ಅವರು ತುಂಬೆ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಜರಗಿದ ತುಂಬೆ ವಿದ್ಯಾ ಸಂಸ್ಥೆಗಳ 31ನೇ ವರ್ಷದ ಕ್ರೀಡಾಕೂಟ ವನ್ನು ಉದ್ಘಾಟಿಸಿ ಮಾತನಾಡಿದರು.

ಮೊಹಿಯುದ್ದೀನ್ ಎಜುಕೇಶನಲ್ ಟ್ರಸ್ಟ್ ನ ಬಿ.ಅಬ್ದುಲ್ ಸಲಾಂ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಕ್ರೀಡಾ ಜ್ಯೋತಿ ಬೆಳಗಿಸಿ ಮಾತನಾಡಿ, ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನ ಮತ್ತು ಕವಾಯತು ಪ್ರದರ್ಶನವನ್ನು ಪ್ರಶಂಶಿಸಿ, ಕೇವಲ ವಿದ್ಯಾವಂತ ರಾದರೆ ಸಾಲದು, ಸ್ಪೋಟ್ರ್ಸ್ ಎನ್ನುವುದನ್ನು ಜೀವನದ ಒಂದು ಭಾಗವಾಗಿ ಇರಿಸಿಕೊಳ್ಳಬೇಕು ಹಾಗೂ ಆರೋಗ್ಯದಾಯಕ ಸ್ಪರ್ಧೆಗಳಲ್ಲಿ ಸ್ಪೋರ್ಟ್ಸ್  ಒಂದಾಗಿದೆ. ದಿನಕ್ಕೆ ಅರ್ಧ ಗಂಟೆಯಾದರೂ ಶರೀರಕ್ಕೆ ವ್ಯಾಯಾಮವಾಗತಕ್ಕ ಹವ್ಯಾಸವನ್ನು ಬೆಳೆಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಸ್ಥಾಪಕ ಡಾ. ಅಹ್ಮದ್ ಹಾಜಿ ಮುಹಿಯುದ್ದೀನ್ ಆಗಮಿಸಿ ಶುಭ ಹಾರೈಸಿದರು. ಇದೇ ವೇಳೆ ಸಂತೋಷ್ ಶೆಟ್ಟಿ ಪೆಲತ್ತಡ್ಕ ಅವರನ್ನು ಸನ್ಮಾನಿಸಲಾಯಿತು. 

ತುಂಬೆ ಕಾಲೇಜಿನ ಪ್ರಾಂಶುಪಾಲ ಕೆ. ಎನ್. ಗಂಗಾಧರ ಆಳ್ವ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಪಥಸಂಚಲನದ ಉಸ್ತುವಾರಿ ವಹಿಸಿದ್ದರು. ವಿದ್ಯಾರ್ಥಿ ಮುಹಮ್ಮದ್ ಹುಸೇನ್ ಸಾಹೇಬ್ ಪ್ರತಿಜ್ಞಾ ವಿಧಿ ಬೋಧಿಸಿದರು.

ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಬಶೀರ್ ತಂಡೇಲ್, ಉಪಾಧ್ಯಕ್ಷ ನಿಸಾರ್ ಅಹ್ಮದ್ ವಳವೂರು, ಆಡಳಿತಾಧಿಕಾರಿ ಕಿಶೋರ್ ಸುವರ್ಣ, ಕಚೇರಿ ಅಧೀಕ್ಷಕ ಅಬ್ದುಲ್ ಕಬೀರ್ ಬಿ., ದೈಹಿಕ ಶಿಕ್ಷಣ ಶಿಕ್ಷಕಿ ಮೋಲಿ ಎಡ್ನಾ ಗೊನ್ಸಾಲ್ವ್‍ಸ್ ಮುಂತಾದವರು ಉಪಸ್ಥಿತರಿದ್ದ ಉದ್ಘಾಟನಾ ಕಾರ್ಯಕ್ರಮದಲ್ಲಿ ತುಂಬೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸಾಯಿರಾಂ ಜೆ. ನಾಯಕ್ ಕೆ. ವಂದಿಸಿ, ತುಂಬೆ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಶ್ರೀನಿವಾಸ ಕೆ. ನಿರೂಪಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X