Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ...

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಫಲಾನುಭವಿಗಳಿಗೆ ಸಹಾಯಧನ ವಿತರಣೆ

ವಾರ್ತಾಭಾರತಿವಾರ್ತಾಭಾರತಿ6 Dec 2019 7:19 PM IST
share
ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಫಲಾನುಭವಿಗಳಿಗೆ ಸಹಾಯಧನ ವಿತರಣೆ

ಮಂಗಳೂರು, ಡಿ. 6:ಮನುಷ್ಯನಿಗೆ ಜೀವನದಲ್ಲಿ ಬಡತನ, ಶ್ರೀಮಂತಿಕೆ ಶಾಶ್ವತವಲ್ಲ. ಸತ್ಯ, ಧರ್ಮದಲ್ಲಿ ನಡೆದರೆ ಆತನ ದಾರಿ ಸುಗಮವಾಗಿ ಸಾಗುತ್ತದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕ ತೋನ್ಸೆ ಆನಂದ ಶೆಟ್ಟಿ ಹೇಳಿದರು.

ಬಂಟ್ಸ್ ಹಾಸ್ಟೆಲ್‌ನಲ್ಲಿರುವ ಅಮೃತೋತ್ಸವ ಕಟ್ಟಡದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕಚೇರಿಯಲ್ಲಿ ಫಲಾನುಭವಿ ಗಳಿಗೆ ಸಹಾಯಧನ ವಿತರಿಸಿ ಅವರು ಮಾತನಾಡಿದರು.

ಬಂಟರು ಅಂದರೆ ಒಂದು ಕುಟುಂಬವಿದ್ದಂತೆ. ಮನುಷ್ಯನಿಗೆ ಕಷ್ಟ-ಸುಖ ಸಾಮಾನ್ಯ. ಬಂಟ ಸಮಾಜದಲ್ಲಿ ಬಡತನದಲ್ಲಿರುವ ಕುಟುಂಬಗಳಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟ ನಿರಂತರ ಸಹಾಯ ಧನ ನೀಡಿ ಅವರ ಕಷ್ಟಗಳನ್ನು ನಿವಾರಿಸುವ ಕೆಲಸದಲ್ಲಿ ತೊಡಗಿದೆ. ಒಕ್ಕೂಟ ಸಹಾಯಧನ ವಿತರಿಸುವಲ್ಲಿ ಯಾವುದೇ ತಾರತಮ್ಯ ಮಾಡದೆ ಸಮಾನವಾಗಿ ಹಂಚಿ ನಿಸ್ವಾರ್ಥ ಸೇವೆ ಮಾಡುತ್ತಿದೆ. ಈ ಸಂಘಟನೆ ಇತರ ಬಂಟರ ಸಂಘಗಳಿಗೆ ಮಾದರಿಯಾಗಿದೆ ಎಂದು ತೋನ್ಸೆ ಆನಂದ ಶೆಟ್ಟಿ ನುಡಿದರು.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ ಈ ಬಾರಿ 26 ಲಕ್ಷಕ್ಕೂ ಅಧಿಕ ಧನ ಸಹಾಯವನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲಾಗಿದೆ ಎಂದರು.

ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನದಾಸ್ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯ ಕೊಲ್ಲಾಡಿ ಬಾಲಕೃಷ್ಣ ರೈ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಪೂಂಜ, ಕೆಮ್ಮಣ್ಣು ಬಂಟರ ಸಂಘದ ಅಧ್ಯಕ್ಷ ತೋನ್ಸೆ ಮನೋಹರ ಶೆಟ್ಟಿ, ಜಗನ್ನಾಥ ಶೆಟ್ಟಿ ಬಾಳ, ಉಲ್ಲಾಸ್ ಆರ್. ಶೆಟ್ಟಿ ಪೆರ್ಮುದೆ, ಸುರೇಶ್ ಶೆಟ್ಟಿ ಸೂರಿಂಜೆ, ಹೇಮನಾಥ ಶೆಟ್ಟಿ, ಚೆಲ್ಲಡ್ಕ ರಾಧಾಕೃಷ್ಣ ಶೆಟ್ಟಿ, ಒಕ್ಕೂಟದ ಆಡಳಿತಾಧಿಕಾರಿ ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ 36 ಮಂದಿಗೆ ಮನೆ ಕಟ್ಟಲು ಮತ್ತು 14 ಮಂದಿಗೆ ವೈದ್ಯಕೀಯ ಹಾಗೂ 13 ಮಂದಿಯ ಮದುವೆಗೆ ಸಹಾಯ ಧನ ವಿತರಿಸಲಾಯಿತು. ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ಪ್ರತೀಕ್ಷಾ ಶೆಟ್ಟಿ ಮತ್ತು ಸೌಂದರ್ಯ ಸ್ಪರ್ಧೆಯಲ್ಲಿ ಸಾಧನೆಗೈದ ಸಾನ್ವಿ ಆರ್.ಶೆಟ್ಟಿ ಸುರತ್ಕಲ್ ಹಾಗೂ ಒಕ್ಕೂಟಕ್ಕೆ ಪ್ರಥಮ ನಿರ್ದೇಶಕರಾಗಿ 25 ಲ.ರೂ. ದೇಣಿಗೆ ನೀಡಿದ ತೋನ್ಸೆ ಆನಂದ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಒಕ್ಕೂಟದಿಂದ ಎಂ. ಫ್ರೆಂಡ್ಸ್ ಸಂಸ್ಥೆಯ ಕಾರುಣ್ಯ ಯೋಜನೆಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ರೋಗಿಗಳ ಪೋಷಕರಿಗೆ ಒಂದು ತಿಂಗಳ ರಾತ್ರಿ ಊಟದ ವ್ಯವಸ್ಥೆಗೆ ನೀಡಿದ ಧನ ಸಹಾಯವನ್ನು ಎಂ. ಫ್ರೆಂಡ್ಸ್ ಸಂಸ್ಥೆಯ ಸುಜಾಹ್ ಮುಹಮ್ಮದ್ ಅಲಂಕಾರ್ ಮತ್ತು ಝುಬೇರ್ ಕಂಬಳಬೆಟ್ಟು ಸ್ವೀಕರಿಸಿದರು.

ಒಕ್ಕೂಟದ ಜತೆ ಕಾರ್ಯದರ್ಶಿ ಸತೀಶ್ ಅಡಪ ಸಂಕಬೈಲ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X