Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕರಾವಳಿ ಉತ್ಸವದ ಪೂರ್ವಭಾವಿ ಸಭೆಯಲ್ಲಿ...

ಕರಾವಳಿ ಉತ್ಸವದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್

ಕರಾವಳಿ ಉತ್ಸವದಲ್ಲಿ ಸಾಂಸ್ಕೃತಿಕ ವೈಭವ

ವಾರ್ತಾಭಾರತಿವಾರ್ತಾಭಾರತಿ6 Dec 2019 7:27 PM IST
share

ಮಂಗಳೂರು, ಡಿ.6: ಪ್ರಸಕ್ತ ವರ್ಷದ ಕರಾವಳಿ ಉತ್ಸವ ಕಾರ್ಯಕ್ರಮದಲ್ಲಿ ಅತ್ಯುನ್ನತ ಗುಣಮಟ್ಟದ ಹಾಗೂ ವೈವಿಧ್ಯಮಯ ಪ್ರಕಾರಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಕರಾವಳಿ ಉತ್ಸವ ಪ್ರಯುಕ್ತ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಂಗಳೂರು ನಗರದ ಲಾಲ್‌ಬಾಗ್ ಕರಾವಳಿ ಉತ್ಸವ ಮೈದಾನ ಹಾಗೂ ಕದ್ರಿ ಪಾರ್ಕ್‌ನಲ್ಲಿ ಸಾಂಸ್ಕತಿಕ ಕಾರ್ಯಕ್ರಮಗಳು ಪ್ರತೀ ದಿನ ನಡೆಯಲಿವೆ. ಜನವರಿ ತಿಂಗಳ ಮೊದಲ ವಾರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಮಾಲೋಚಿಸಿ ಶೀಘ್ರವೇ ದಿನಾಂಕ ಅಂತಿಮಗೊಳಿಸಲಾಗುವುದು ಎಂದು ಅವರು ಹೇಳಿದರು.

ಕರಾವಳಿ ಉತ್ಸವದ ಮೊದಲ ದಿನ ನಗರದ ನೆಹರೂ ಮೈದಾನದಿಂದ ಆಕರ್ಷಕ ಸಾಂಸ್ಕೃತಿಕ ಮೆರವಣಿಗೆ ಕರಾವಳಿ ಉತ್ಸವ ಮೈದಾನದವರೆಗೆ ನಡೆಯಲಿದೆ. ರಾಜ್ಯದ ಎಲ್ಲ ಜಿಲ್ಲೆಗಳ ವೈವಿಧ್ಯಮಯ ಕಲಾ ಪ್ರಕಾರಗಳ ಸಾಂಸ್ಕೃತಿಕ ತಂಡಗಳು ಇದರಲ್ಲಿ ಭಾಗವಹಿಸಲಿವೆ. ಇದು ಮಂಗಳೂರು ನಗರದ ಪ್ರಮುಖ ರಾಜಬೀದಿಗಳಲ್ಲಿ ಸಂಚರಿಸಿ, ಸಾರ್ವಜನಿಕರಿಗೆ ನಾಡಿನ ಸಾಂಸ್ಕೃತಿಕ ವೈಭವವನ್ನು ಪ್ರದರ್ಶಿಸಲಾಗುವುದು ಎಂದು ಜಿಲ್ಲಾಧಿಕಾರಿ ನುಡಿದರು.

ಕರಾವಳಿ ಉತ್ಸವ ಪ್ರಯುಕ್ತ 10 ದಿನಗಳ ಕಾಲ ಉತ್ಸವ ಮೈದಾನ ಹಾಗೂ ಕದ್ರಿ ಪಾರ್ಕ್‌ನಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಗಳು ನಡೆಯಲಿವೆ. ನಾಡಿನ ಹಿರಿಮೆ ಹಾಗೂ ಸಾಂಪ್ರದಾಯಿಕ ಅಲ್ಲದೇ ಜನಾಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗುವುದು. ಇದಕ್ಕಾಗಿ ತಕ್ಷಣದಿಂದಲೇ ಸಿದ್ಧತೆ ಮಾಡಿಕೊಳ್ಳುವಂತೆ ಅವರು ಸೂಚಿಸಿದರು.

ಕ್ರೀಡಾಕೂಟ: ಕರಾವಳಿ ಉತ್ಸವ ಪ್ರಯುಕ್ತ ವಿವಿಧ ಕ್ರೀಡಾಕೂಟಗಳನ್ನು ಏರ್ಪಡಿಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳು ಭಾಗವಹಿಸಬೇಕು. ಇದರಲ್ಲಿ ಜಿಲ್ಲೆಯ ಎಲ್ಲ ಕ್ರೀಡಾತಂಡಗಳು, ಶಿಕ್ಷಣ ಸಂಸ್ಥೆಗಳ ಕ್ರೀಡಾಪಟುಗಳು ಪಾಲ್ಗೊ ಳ್ಳಲು ಹಾಗೂ ಕ್ರೀಡಾಳುಗಳುಗಳಿಗೆ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಿಕೊಡಲು ಜಿಲ್ಲಾಧಿಕಾರಿಯು ಯುವಜನಸೇವೆ ಮತ್ತು ಕ್ರೀಡಾ ಇಲಾಖೆಗೆ ಸೂಚಿಸಿದರು.

ಅದೇರೀತಿ ಎರಡು ದಿನಗಳ ಯುವ ಉತ್ಸವವನ್ನೂ ಪರಿಣಾಮಕಾರಿಯಾಗಿ ಆಯೋಜಿಸಬೇಕು. ಜಿಲ್ಲೆಯ ಎಲ್ಲ ಕಾಲೇಜುಗಳ ಯುವಕ-ಯುವತಿಯರು ಇದರಲ್ಲಿ ಭಾಗವಹಿಸಿ ಕಾರ್ಯಕ್ರಮ ನೀಡಬೇಕಿದೆ ಎಂದು ಸಿಂಧೂ ರೂಪೇಶ್ ತಿಳಿಸಿದರು.
ಕರಾವಳಿ ಉತ್ಸವ ಪ್ರಯುಕ್ತ ರಚಿಸಲಾಗಿರುವ ಎಲ್ಲ ಉಪಸಮಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಜಿಲ್ಲೆಯ ಸಾರ್ವಜನಿಕರೂ ಇದರಲ್ಲಿ ಪಾಲ್ಗೊಂಡು ಇದನ್ನು ಜನತೆಯ ಉತ್ಸವವನ್ನಾಗಿ ಮಾಡಬೇಕು ಎಂದು ಸಿಂಧೂ ಬಿ. ರೂಪೇಶ್ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಜೆ.ರೂಪಾ, ಮಹಾನಗರ ಪಾಲಿಕೆ ಆಯುಕ್ತ ಶಾನಾಡಿ ಅಜಿತ್ ಕುಮಾರ್, ಉಪ ಆಯುಕ್ತ ಸಂತೋಷ್, ತಹಶೀಲ್ದಾರ್ ಗುರುಪ್ರಸಾದ್, ಕರಾವಳಿ ಉತ್ಸವ ವಿವಿಧ ಉಪಸಮಿತಿಗಳ ಮುಖ್ಯಸ್ಥರು ಭಾಗವಹಿಸಿದ್ದರು.

''ಕರಾವಳಿ ಉತ್ಸವ ಪ್ರಯುಕ್ತ ನಡೆಯುವ ಎಲ್ಲ ಕಾರ್ಯಕ್ರಮಗಳನ್ನು ಅಗತ್ಯ ಸಿದ್ಧತೆಗಳೊಂದಿಗೆ ಪರಿಣಾಮಕಾರಿಯಾಗಿ ನಡೆಸಬೇಕು. ಯಾವುದೇ ಕಾರಣಕ್ಕೂ ಕೊನೆಯ ಕ್ಷಣದಲ್ಲಿ ರದ್ದುಗೊಳಿಸುವ ಪ್ರಸಂಗ ಎದುರಾಗಬಾರದು''.

-ಸಿಂಧೂ ಬಿ. ರೂಪೇಶ್, ಜಿಲ್ಲಾಧಿಕಾರಿ

ಪಣಂಬೂರಿನಲ್ಲಿ ಬೀಚ್ ಉತ್ಸವ
ಕರಾವಳಿ ಉತ್ಸವದ ಕೊನೆಯ ಮೂರು ದಿನಗಳಲ್ಲಿ ನಡೆಯುವ ಬೀಚ್ ಉತ್ಸವವನ್ನು ಪಣಂಬೂರು ಬೀಚ್‌ನಲ್ಲಿ ನಡೆಸಲಾಗುವುದು. ಬೀಚ್ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ನಡೆಸಬೇಕು. ಬೀಚ್‌ನಲ್ಲಿ ನಡೆಯುವ ಕ್ರೀಡಾಕೂಟಗಳಲ್ಲಿ ಹೆಚ್ಚು ತಂಡಗಳು ಭಾಗವಹಿಸುವಂತೆ ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸೂಚನೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X