ವೈಜ್ಞಾನಿಕ ತ್ಯಾಜ್ಯ ನಿರ್ವಹಣೆ ಅಗತ್ಯ: ದಿನಕರ ಬಾಬು
ತ್ಯಾಜ್ಯ ನಿರ್ವಹಣೆ ಕುರಿತು ಜಾಗೃತಿ ಕಾರ್ಯಗಾರ
ಉಡುಪಿ, ಡಿ.7:ತ್ಯಾಜ್ಯ ವಿಲೇವಾರಿ ಎಂಬುದು ಇಂದು ಬಹು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ವೈಜ್ಞಾನಿಕ ರೀತಿಯಲ್ಲಿ ತ್ಯಾಜ್ಯ ವಿಲೇವಾರಿ ಮಾಡಿದಲ್ಲಿ ಅನೇಕ ರೋಗಗಳನ್ನು ತಡೆಗಟ್ಟಬಹುದು. ನಮ್ಮ ಸಂಘ-ಸಂಸ್ಥೆಗಳು ಜನರಲ್ಲಿ ತ್ಯಾಜ್ಯ ನಿರ್ವಹಣೆ, ಪ್ಲಾಸ್ಟಿಕ್ ಬಳಕೆಯ ಬಗ್ಗೆ ಜಾಗೃತಿ ಮೂಡಿಸುವುದು ಸ್ತುತ್ಯಾರ್ಹ ಕಾರ್ಯವಾಗಿದೆ ಎಂದು ಉಡುಪಿ ಜಿಪಂ ಅಧ್ಯಕ್ಷ ದಿನಕರಬಾಬು ಹೇಳಿದ್ದಾರೆ.
ಮಣಿಪಾಲ ಕೆಎಂಸಿಯ ಸಮುದಾಯ ವೈದ್ಯಕೀಯ ವಿಭಾಗ ಇದರ ವತಿಯಿಂದ ಅಲೆವೂರು ಗ್ರಾಮಪಂಚಾಯತ್, ರೋಟರಿ ಮಣಿಪಾಲ ಹಿಲ್ಸ್, ಸಾರ್ವಜನಿಕ ಗಣೇಶೋತ್ಸವ ಸಮಿತಿ ಗುಡ್ಡೆಅಂಗಡಿ, ನೆಹರೂ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಅಸೋಸಿಯೇಷನ್ ಅಲೆವೂರು ಇವರ ಸಹಕಾರದಲ್ಲಿ ‘ತ್ಯಾಜ್ಯ ನಿರ್ವಹಣೆ-ಪ್ಲಾಸ್ಟಿಕ್ ಬಳಕೆ’ಯ ಕುರಿತ ಜಾಗೃತಿ ಕಾರ್ಯಾಗಾರವನ್ನು ಶನಿವಾರ ಅಲೆವೂರಿನಲ್ಲಿ ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಅಲೆವೂರು ಗ್ರಾಪಂ ಅಧ್ಯಕ್ಷ ಶ್ರೀಕಾಂತ್ ನಾಯಕ್ ಅಧ್ಯಕ್ಷತೆ ವಹಿಸಿ ಮಾತನಾಡಿ ಅಲೆವೂರು ಗ್ರಾಪಂ ವ್ಯಾಪ್ತಿಯಲ್ಲಿ ಸಮರ್ಪ ಕವಾಗಿ ತ್ಯಾಜ್ಯ ನಿರ್ವಹಣೆ ಮಾಡಲಾಗುತ್ತಿದ್ದು, ಪ್ಲಾಸ್ಟಿಕ್ ಬಳಕೆಯ ಬಗ್ಗೆ ಜಾಗೃತಿ ಮೂಡಿಸ ಲಾಗುತ್ತಿದೆ ಎಂದರು.
ಮಣಿಪಾಲ ರೋಟರಿ ಹಿಲ್ಸ್‌ನ ಅಧ್ಯಕ್ಷ ಬಾಲಕೃಷ್ಣ ಕೆ, ಸೇಸಪ್ಪ ರೈ, ಮಣಿಪಾಲ ಪೊಲಿಸ್ ಠಾಣೆಯ ಉಪನಿರೀಕ್ಷಕ ಶ್ರೀಧರ್ ನಂಬಿಯಾರ್, ಡಾ.ಅರವಿಂದ್, ಅಲೆವೂರು ಗ್ರಾಪಂನ ಅಭಿವೃದ್ಧಿ ಅಧಿಕಾರಿ ದಯಾನಂದ್ ಹಾಗೂ ಇತರರು ಉಪಸ್ಥಿತರಿದ್ದರು.
ಸಮುದಾಯ ವೈದ್ಯಕೀಯ ವಿಭಾಗದ ಸಹ ಪ್ರಾಧ್ಯಾಪಕಿ ಚೈತ್ರಾ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವೈದ್ಯಕೀಯ ಸಮಾಜ ಸೇವಕಿ ನಿೀಲಾವತಿ ಕಾರ್ಯಕ್ರಮ ನಿರೂಪಿಸಿದರು.
ಸಮುದಾಯ ವೈದ್ಯಕೀಯ ವಿಾಗದಸಹಪ್ರ್ಯಾಾಪಕಿ ಚೈತ್ರಾ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವೈದ್ಯಕೀಯ ಸಮಾಜ ಸೇವಕಿ ನೀಲಾವತಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಮಣಿಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಂಜಲಿ, ಅಸಮರ್ಪಕ ತ್ಯಾಜ್ಯ ನಿರ್ವಹಣೆ-ಪರಿಸರ ಮಾಲಿನ್ಯದಿಂದ ಆರೋಗ್ಯದ ಮೇಲಿನ ಪರಿಣಾಮ ಮತ್ತು ವೈಜ್ಞಾನಿಕ ರೀತಿಯಲ್ಲಿ ತ್ಯಾಜ್ಯ ನಿರ್ವಹಣೆ ಕುರಿತು ಪರಿಸರ ಅಭಿಯಂತರು ಟಿ.ಮೂರ್ತಿ ಅವರು ಮಾಹಿತಿ ನೀಡಿದರು.