ಮಂಗಳೂರು: ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು
ಮಂಗಳೂರು, ಡಿ.8: ಆ್ಯಕ್ಟೀವಾ ಸ್ಕೂಟರ್‌ವೊಂದಕ್ಕೆ ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ನಗರದ ಹೊರವಲಯದ ಅಡ್ಯಾರ್‌ನಲ್ಲಿ ರವಿವಾರ ನಡೆದಿದೆ.
ಅಡ್ಡೂರು ನಿವಾಸಿ ಹಮೀದ್ (50) ಮೃತ ಸ್ಕೂಟರ್ ಸವಾರ ಎಂದು ಗುರುತಿಸಲಾಗಿದೆ.
ಹಮೀದ್ ಅವರು ಅರ್ಕುಳದ ಹಾಲ್‌ವೊಂದರಲ್ಲಿ ರವಿವಾರ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ತೆರಳಿ ಆ್ಯಕ್ಟೀವಾದಲ್ಲಿ ವಾಪಸಾಗುತ್ತಿದ್ದರು. ಬೆಳಗ್ಗೆ ಸುಮಾರು 11:45ಕ್ಕೆ ಸ್ಕೂಟರ್ ಅಡ್ಯಾರ್ ಸಮೀಪಿಸುತ್ತಿದ್ದ ವೇಳೆ ಅವಘಡ ಸಂಭವಿಸಿದೆ.
ಬಿ.ಸಿ.ರೋಡ್ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮುಂದೆ ಹೋಗುತ್ತಿದ್ದ ಸ್ಕೂಟರ್‌ಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್‌ನೊಂದಿಗೆ ರಸ್ತೆಗೆಸೆಯಲ್ಪಟ್ಟ ಸವಾರ ಹಮೀದ್ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ.
ಈ ಕುರಿತು ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
Next Story