Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಮಾಜಕ್ಕೆ ಶಕ್ತಿ ತುಂಬುವ ಸಂಘಟನೆಯನ್ನು...

ಸಮಾಜಕ್ಕೆ ಶಕ್ತಿ ತುಂಬುವ ಸಂಘಟನೆಯನ್ನು ಬಲಪಡಿಸಿ: ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ

ಬಿ.ಸಿ.ರೋಡ್: "ನಮ ಬಿರುವೆರ್ ಐಕ್ಯತಾ ಸಮಾವೇಶ"

ವಾರ್ತಾಭಾರತಿವಾರ್ತಾಭಾರತಿ8 Dec 2019 8:20 PM IST
share
ಸಮಾಜಕ್ಕೆ ಶಕ್ತಿ ತುಂಬುವ ಸಂಘಟನೆಯನ್ನು ಬಲಪಡಿಸಿ: ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ

ಬಂಟ್ವಾಳ, ಡಿ. 8: ಸಮಾಜಕ್ಕೆ ಶಕ್ತಿ ತುಂಬುವ ಸಂಘಟನೆಯನ್ನು ಬಲಪಡಿಸುವುದರ ಜೊತೆಗೆ ಸಮಾಜದ ಸ್ವಾಮೀಜಿಗಳು ಪಕ್ಷಾತೀತವಾಗಿ ಸೇವೆ ಸಲ್ಲಿಸಿದಾಗ ಅಭಿವೃದ್ಧಿ ಸಾಧ್ಯ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.

ಬಂಟ್ವಾಳ ಬಿಲ್ಲವ ಕಣ್ಮಣಿಗಳ ಅಭಿನಂದನಾ ಸಮಿತಿ, ತಾಲೂಕಿನ ಬಿಲ್ಲವ ಸಂಘಟನೆಗಳು, ಯುವವಾಹಿನಿ ಬಂಟ್ವಾಳ ಮತ್ತು ಮಾಣಿ ಘಟಕಗಳ ಸಹಭಾಗಿತ್ವದಲ್ಲಿ ರವಿವಾರ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆದ "ನಮ ಬಿರುವೆರ್ ಐಕ್ಯತಾ ಸಮಾವೇಶ" ದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

ರಾಜ್ಯದ ದೈವಸ್ಥಾನ, ದೇವಸ್ಥಾನಗಳಿಗೆ ಅಭಿವೃದ್ಧಿಗಾಗಿ ಮುಜರಾಯಿ ಇಲಾಖೆಯಯಿಂದ 55 ಕೋಟಿ ರೂ. ಬಿಡುಗಡೆ ಮಾಡಲಾ ಗಿದೆ. ತಾನು ಈ ಹಿಂದೆ ಮುಜರಾಯಿ ಖಾತೆ ಸಚಿವನಾಗಿದ್ದಾಗ ತುಳುನಾಡಿನ ಗರಡಿ, ದೈವಸ್ಥಾನಗಳಿಗೂ ಸರಕಾರದಿಂದ ನೆರವು ಸಿಗುವ ಪ್ರಯತ್ನ ನಡೆಸಿದ್ದೇನೆ ಎಂದ ಅವರು, ಧ್ವನಿ ಇಲ್ಲದ ಸಮಾಜದ ಧ್ವನಿಯಾಗುವ ಮೂಲಕ ನಮ್ಮನ್ನು ಈ ಮಟ್ಟಕ್ಕೇರಿಸಿರು ವುದು ಬ್ರಹ್ಮಶ್ರೀ ನಾರಾಯಣ ಗುರು ಅವರ ಸಂದೇಶ. ನಾರಾಯಣ ಗುರು ಅಧ್ಯಯನ ಪೀಠಕ್ಕೆ ಪ್ರತೀ ವರ್ಷ ಸರಕಾರದ ಬಜೆಟ್‍ನಲ್ಲಿ ಅನುದಾನ ಮೀಸಲಿಡುವ ಬಗ್ಗೆ ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.

ಶ್ರೀ ರಾಮಕ್ಷೇತ್ರ ಕನ್ಯಾಡಿಯ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಬಲ್ಯೊಟ್ಟು ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಕಣಿಯೂರು ಶ್ರೀ ಮಹಾಬಲ ಸ್ವಾಮೀಜಿ ಮತ್ತು ಕುಕ್ಕಾಜೆ ಆಂಜನೇಯ ಕ್ಷೇತ್ರದ ಶ್ರೀಕೃಷ್ಣ ಗುರೂಜಿ ಆಶೀರ್ವಚನ ನೀಡಿ ಶುಭಹಾರೈಸಿದರು.

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಅಧ್ಯಕ್ಷ ಕೆ. ಸೇಸಪ್ಪ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವ ಮಹಾಮಂಡಲ ಗೌರವಾಧ್ಯಕ್ಷ ಜಯ ಸಿ.ಸುವರ್ಣ ಅವರಿಗೆ ಗೌರವಾಭಿನಂದನೆ ಮತ್ತು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ಅವರನ್ನು ಅಭಿನಂದಿಸಲಾಯಿತು.

ವೇದಿಕೆಯಲ್ಲಿ ಕಲಬುರ್ಗಿ ಆಕಾಶವಾಣಿಯ ಕಾರ್ಯಕ್ರಮ ನಿರ್ವಹಣಾಧಿಕಾರಿ ಡಾ.ಸದಾನಂದ ಪೆರ್ಲ, ಕುದ್ರೋಳಿ ಗೋಕರ್ಣ ಕ್ಷೇತ್ರದ ಅಧ್ಯಕ್ಷ ಎಚ್.ಎಸ್. ಸಾಯಿರಾಮ್, ಬೃಹತ್ ಮತ್ತು ಮದ್ಯಮ ಕೈಗಾರಿಕೆ ಇಲಾಖೆಯ ಸಚಿವರ ಆಪ್ತ ಸಹಾಯಕ ಜಗನ್ನಾಥ ಬಂಗೇರ, ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು, ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷ ಜಯಂತ ನಡುಬೈಲು, ಶ್ರೀನಾರಾಯಣ ಗುರು ಧರ್ಮ ಪರಿಪಾಲನಾ ಸಂಘದ ಮಹಿಳಾ ಸಮಿತಿ ರಾಜ್ಯಾಧ್ಯಕ್ಷೆ ಗೀತಾಂಜಲಿ ಸುವರ್ಣ, ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ಬಿ. ಇಂದಿರೇಶ್, ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷ ರಮೇಶ್ ಮುಜಲ ಚಿತ್ರ ನಟಿ ಚಿರಶ್ರೀ ಅಂಚನ್, ತಾಲೂಕಿನ ವಿವಿಧ ಬಿಲ್ಲವ ಸಂಘಟನೆಗಳ ಅಧ್ಯಕ್ಷರು ಉಪಸ್ಥಿತರಿದ್ದರು. ಸಮಿತಿಯ ಗೌರವಾಧ್ಯಕ್ಷರಾದ ರುಕ್ಮಯ ಪೂಜಾರಿ, ಸಂಜೀವ ಪೂಜಾರಿ, ಮಾಯಿಲಪ್ಪ ಸಾಲ್ಯಾನ್ ವೇದಿಕೆಯಲ್ಲಿದ್ದರು.

2018-19ನೇ ಸಾಲಿನಲ್ಲಿ ಬಂಟ್ವಾಳ ತಾಲೂಕಿನಲ್ಲಿ ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ 90 ಕ್ಕಿಂತ ಹೆಚ್ಚು ಅಂಕ ಪಡೆದ ಬಿಲ್ಲವ ಸಮುದಾಯದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಬೆಳಿಗ್ಗೆ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಗುರುಪೂಜೆಯಾಗಿ ಅಲ್ಲಿಂದ ಸ್ವಾಮೀಜಿ ಸಹಿತ ಗಣ್ಯರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಸ್ಪರ್ಶಾ ಕಲಾಮಂದಿರಕ್ಕೆ ತರಲಾಯಿತು.

ಅಧ್ಯಕ್ಷ ಯಶವಂತ ದೇರಾಜೆ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಜಗದೀಶ್ ಕೊಯ್ಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೋಪಾಲ ಅಂಚನ್ ವಿವಿಧ ಬೇಡಿಕೆಗಳ ಮನವಿಯನ್ನು ವಾಚಿಸಿದರು. ಪ್ರೇಮನಾಥ್ ವಂದಿಸಿದರು. ದಿನೇಶ್ ಸುವರ್ಣ, ಮಹೇಶ್ ಕರ್ಕೆರಾ ಕಾರ್ಯಕ್ರಮ ನಿರೂಪಿಸಿದರು.

ಬೇಡಿಕೆಗಳು

ನಾರಾಯಣ ಗುರು ಅಧ್ಯಯನ ಪೀಠಕ್ಕೆ ಸರಕಾರವು ಪ್ರತೀ ವರ್ಷ ಬಜೆಟ್‍ನಲ್ಲಿ 5 ಕೋಟಿ ರೂ. ಮೀಸಲಿಡಬೇಕು. ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಪ್ರತೀ ತಾಲೂಕಿನಲ್ಲಿ ಬಿಲ್ಲವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಿದ್ಯಾರ್ಥಿ ನಿಲಯ ಸ್ಥಾಪನೆಯಾಗಬೇಕು. ಪ್ರತೀ ಲೋಕಸಭೆ ಅಥವಾ ವಿಧಾನಸಭಾ ಕ್ಷೇತ್ರವಾರು ರಾಜಕೀಯ ಪ್ರಾತಿನಿಧ್ಯವನ್ನು ಎಲ್ಲಾ ರಾಷ್ಟ್ರೀಯ ಪಕ್ಷಗಳು ನೀಡಬೇಕು. ಸರಕಾರದ ಅಧೀನದಲ್ಲಿರುವ ಎಲ್ಲ ಅಕಾಡೆಮಿಗಳು, ನಿಗಮಗಳು, ಮಂಡಳಿಗಳಲ್ಲಿ ಬಿಲ್ಲವ ಸಮುದಾಯಕ್ಕೆ ಸೂಕ್ತ ಸ್ಥಾನಮಾನಗಳನ್ನು ನೀಡಬೇಕು. ಲಕ್ಷಾಂತರ ಬಿಲ್ಲವರು ಅನಾಧಿಕಾಲದಿಂದಲೂ ಮಾತೃಭಾಷೆಯಾಗಿ ಬಳಸುತ್ತಿರುವ ತುಳು ಭಾಷೆಯನ್ನು ಸರಕಾರ 8ನೇ ಪರಿಚ್ಚೇದದಲ್ಲಿ ಸೇರಿಸಬೇಕು. ಅನಾದಿಕಾಲದಿಂದಲೂ ಗುಡಿ, ಗರಡಿ, ದೇವಸ್ಥಾನಗಳಲ್ಲಿ ಗಡಿ ಪ್ರಧಾನರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯರ ಜೀವನಕ್ಕೆ ಸರಕಾರ ವಿಶೇಷ ಆರ್ಥಿಕ ನೆರವು ನೀಡಬೇಕು. ಬಿಲ್ಲವ ಅಭಿವೃದ್ದಿ ನಿಗಮ ಸ್ಥಾಪಿಸಬೇಕೆಂಬುವುದು ಸಮಾವೇಶದ ಬೇಡಿಕೆಗಳಾಗಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X