ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ
ಹಿರಿಯಡ್ಕ, ಡಿ.8: ಅನಾರೋಗ್ಯದಿಂದ ಬಳಲುತ್ತಿದ್ದ ಪೆರ್ಡೂರು ಸಂಕ್ರಾಡಿ ನಿವಾಸಿ ಸಂತೋಷ ನಾಯ್ಕ(31) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಡಿ.8ರಂದು ಬೆಳಗ್ಗೆ ಮನೆಯ ಹತ್ತಿರದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಬ್ರಿ: ವಿಪರೀತ ಮದ್ಯಪಾನ ಸೇವನೆಯಿಂದ ಎರಡು ಕಿಡ್ನಿಗಳು ವೈಫಲ್ಯ ಗೊಂಡ ವಿಚಾರದಲ್ಲಿ ಮಾನಸಿಕವಾಗಿ ನೊಂದ ನಾಲ್ಕೂರು ಗ್ರಾಮದ ಕಜ್ಕೆ ಜಡ್ಡಿನ ಮನೆ ನಿವಾಸಿ ಗಣೇಶ್ ನಾಯ್ಕಿ ಎಂಬವರ ಮಗ ರಮೇಶ್ ನಾಯ್ಕ್(26) ಎಂಬವರು ಡಿ.7ರಂದು ರಾತ್ರಿ ವೇಳೆ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿರ್ವ: ವಿಪರೀತ ಕುಡಿತದ ಚಟ ಹೊಂದಿದ್ದ ಕುರ್ಕಾಲು ಗ್ರಾಮದ ಕುಲೇದು ನಿವಾಸಿ ಪರುಶುರಾಮ ರೆಡ್ಡಿ(74) ಎಂಬವರು ವೈಯಕ್ತಿಕ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಡಿ.6ರಂದು ಸಂಜೆ ಮನೆಯಲ್ಲಿ ಮದ್ಯದೊಂದಿಗೆ ವಿಷ ಬೆರೆಸಿ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.