Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ಪತ್ರಿಕಾ ಭವನದಲ್ಲಿ ಮಾಧ್ಯಮ...

ಮಂಗಳೂರು ಪತ್ರಿಕಾ ಭವನದಲ್ಲಿ ಮಾಧ್ಯಮ ಗ್ರಂಥಾಲಯ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ10 Dec 2019 7:29 PM IST
share

ಮಂಗಳೂರು, ಡಿ.10; ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪ್ರೆಸ್‌ಕ್ಲಬ್ ಹಾಗೂ ಪತ್ರಿಕಾಭವನ ಟ್ರಸ್ಟ್ ಸಹಭಾಗಿತ್ವದಲ್ಲಿ ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಆರಂಭಿಸಿರುವ ನೂತನ ಮಾಧ್ಯಮ ಗ್ರಂಥಾಲಯ ಮಂಗಳವಾರ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಸ್ನೇಹಲ್ ರಾಯಮನೆ  ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಓದಿನಿಂದ ಹೆಚ್ಚಿನ ಜ್ಞಾನ ಸಂಪಾದನೆ ಸಾಧ್ಯ. ಸಮಾಜಕ್ಕೆ ಮೌಲ್ಯಯುತ ಸುದ್ದಿಗಳನ್ನು ನೀಡುವ ಪತ್ರಕರ್ತರ  ಜ್ಞಾನಾರ್ಜನೆಯ ದೃಷ್ಟಿಯಿಂದ ನೂತನ ಗ್ರಂಥಾಲಯ ಉಪಯುಕ್ತವಾಗಿದೆ. ಪತ್ರಕರ್ತರು ಕೇವಲ ಸುದ್ದಿಯ ಜೊತೆಗೆ  ಜ್ಞಾನಾರ್ಜನೆಗೆ ಪೂರಕವಾಗುವ ಇತರ ವಿಷಯಗಳನ್ನು ಓದುಗರಿಗೆ  ನೀಡಬೇಕು. ಉತ್ತಮ ಬರವಣಿಗೆ ಕೂಡ ಓದಿನಿಂದ ಸಾಧ್ಯವಾಗುತ್ತದೆ ಎಂದವರು ಹೇಳಿದರು.

ಪುಸ್ತಕ ಓದುವ ಹವ್ಯಾಸವನ್ನು ಪ್ರತಿಯೊಬ್ಬರೂ ರೂಢಿಸಿಕೊಳ್ಳಬೇಕು. ಹೊಸ ಹೊಸ ವಿಚಾರಗಳನ್ನು ತಿಳಿದುಕೊಳ್ಳದಿದ್ದರೆ ಬಹಳಷ್ಟು ಹಿಂದೆ ಉಳಿಯಬೇಕಾಗುತ್ತದೆ. ಈ ನಿಟ್ಟಿನಲ್ಲಿ ಪತ್ರಕರ್ತರೂ ಕೂಡ ವಿಶೇಷ ಅಧ್ಯಯನದಲ್ಲಿ ತೊಡಗಿಸಿಕೊಳ್ಳಲು ಗ್ರಂಥಾಲಯ ಅತ್ಯಂತ ಪೂರಕ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸೆಲ್ವಮಣಿ ಆರ್ ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಿ ಮಾತನಾಡಿ, ನಾವಿಂದು ಮೊಬೈಲ್ ಲೋಕದಲ್ಲಿದ್ದೇವೆ ಎಂದ ಮಾತ್ರಕ್ಕೆ ಎಲ್ಲಾ ಮಾಹಿತಿಯನ್ನು ಅದು ಪೂರೈಸುತ್ತದೆ ಎನ್ನಲಾಗದು. ಹೆಚ್ಚಿನ ಜ್ಞಾನ ಸಂಪಾದನೆಗೆ ಪತ್ರಿಕೆ ಮತ್ತು ಉತ್ತಮ ಪುಸ್ತಕಗಳ ಓದುವಿಕೆ ಅತಿ ಮುಖ್ಯ. ನೂತನ ಗ್ರಂಥಾಲಯದಲ್ಲಿ ಪತ್ರಕರ್ತರ ಜ್ಞಾನ ವೃದ್ಧಿಸುವ,  ಪ್ರೇರಣೆ ನೀಡುವ ಪುಸ್ತಗಳಿಗೆ ಆದ್ಯತೆ ನೀಡುವಂತಾಗಲಿ ಎಂದು ಆಶಿಸಿದರು.

ಇದೇ ಸಂದರ್ಭ ಶಿವಾನಂದ ತಗಡೂರು ಅವರನ್ನು ಪತ್ರಕರ್ತರ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್, ಎಸ್‌ಇಝಡ್‌ನ ಸಾರ್ವಜನಿಕ ಸಂಪರ್ಕಾಧಿಕಾರಿ ರಾಮಚಂದ್ರ ಭಂಡಾರ್ಕರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಸ್ವಾಗತಿಸಿದರು. ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಪತ್ರಿಕಾ ಭವನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್ ಬಿ.ಎನ್.ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X