Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿಜೆಪಿ ದ.ಕ. ಜಿಲ್ಲಾ ಸಮಿತಿ ಉಪಾಧ್ಯಕ್ಷ...

ಬಿಜೆಪಿ ದ.ಕ. ಜಿಲ್ಲಾ ಸಮಿತಿ ಉಪಾಧ್ಯಕ್ಷ ಜಿ. ಆನಂದ ನಿಧನ

ವಾರ್ತಾಭಾರತಿವಾರ್ತಾಭಾರತಿ10 Dec 2019 8:10 PM IST
share
ಬಿಜೆಪಿ ದ.ಕ. ಜಿಲ್ಲಾ ಸಮಿತಿ ಉಪಾಧ್ಯಕ್ಷ ಜಿ. ಆನಂದ ನಿಧನ

ಬಂಟ್ವಾಳ, ಡಿ. 10: ಬಿಜೆಪಿ ದ.ಕ. ಜಿಲ್ಲಾ ಸಮಿತಿ ಉಪಾಧ್ಯಕ್ಷ, ಬಂಟ್ವಾಳ ಕ್ಷೇತ್ರದ ಮಾಜಿ ಅಧ್ಯಕ್ಷ, ಸಹಕಾರಿ ಧುರೀಣ ಜಿ.ಆನಂದ (68) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ನುಸುಕಿನ ಜಾವ  ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮೃತರು ಪತ್ನಿ, ಪುತ್ರ, ಪುತ್ರಿ ಸಹಿತ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪಾಡಿ, ಮುಖಂಡರಾದ ದೇವದಾಸ ಶೆಟ್ಟಿ, ಬಂಟ್ವಾಳ ಕ್ಷೇತ್ರ ಬಿಜೆಪಿ ಸಮಿತಿ ಸಹಿತ ಹಲವಾರು ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ.

ಮೃತರ ಅಂತಿಮ ಯಾತ್ರೆಯು ಡಿ. 11ರ ಬೆಳಿಗ್ಗೆ ತುಂಬೆಯಿಂದ ಬಂಟ್ವಾಳದವರೆಗೆ ನಡೆಯಲಿದೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿದೆ. 

ಬಂಟ್ವಾಳ ಬಡ್ಡಕಟ್ಟೆಯ ದೈವಗುಡ್ಡೆ ನಿವಾಸಿಯಾಗಿರುವ ಅವರು ಟೈಲರ್ ಅಂಗಡಿಯನ್ನು ನಡೆಸುತ್ತಿದ್ದರು. ಬಂಟ್ವಾಳ ಪರಿಸರ ಮತ್ತು ಪಕ್ಷದ ಕಾರ್ಯಕರ್ತರು, ನಾಯಕರಲ್ಲಿ ಆನಂದಣ್ಣ ಎಂದೇ ಚಿರಪರಿಚಿತರಾಗಿದ್ದು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ವಯಂಸೇವಕರಾಗಿದ್ದರು. ಜನ ಸಂಘದ ಮೂಲಕ ರಾಜಕಾರಣಕ್ಕೆ ಕಾಲಿಟ್ಟಿರುವ ಅವರು ಬಂಟ್ವಾಳ ತಾಲೂಕಿನ ಕಕ್ಕೆ ಪದವಿನಿಂದ ಮಂಗಳೂರಿನ ಗುರುಪುರದವರೆಗೆ ಸಂಚರಿಸಿ ಭಾರತೀಯ ಜನತಾ ಪಕ್ಷಕ್ಕೆ ಭದ್ರ ತಳಪಾಯ ಹಾಕಿರುವಲ್ಲಿ ಆಂಗ್ರಪಂಕ್ತಿಯ ನಾಯಕರಾಗಿರುವ ಇವರು,  ಎರಡು ಬಾರಿ ಬಂಟ್ವಾಳ ಪುರಸಭೆಯ ಸದಸ್ಯರಾಗಿಯು ಕಾರ್ಯ ನಿರ್ವಹಿಸಿದ್ದರು.

ಬಿಜೆಪಿ ಕ್ಷೇತ್ರ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ, ಎರಡು ಅವಧಿಯಲ್ಲಿ ಕ್ಷೇತ್ರ ಸಮಿತಿಯ ಅಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸಿದ್ದರು. ಅಸಂಖ್ಯಾತ ಕಾರ್ಯಕರ್ತರನ್ನು ನಾಯಕರನ್ನಾಗಿ, ಜನಪ್ರತಿನಿಧಿಗಳಾಗಿ ಬೆಳೆಸಿದ ಮೇರು ವ್ಯಕ್ತಿತ್ವ ಇವರದ್ದು. 1990 ದಶಕದ ಅಯೋಧ್ಯ ಹೋರಾಟದಲ್ಲಿ ಕರಸೇವಕರಾಗಿ ಭಾಗಿಯಾಗಿದ್ದ ಇವರು, 2017ರಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಪರಿವರ್ತನಾ ಯಾತ್ರೆ ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಅಗಮಿಸಿದಾಗ ನಗರ ಅಲಂಕಾರಕ್ಕೆ ಬೇಕಾದ ಪಕ್ಷದ ಧ್ವಜಗಳನ್ನು ತಯಾರಿಸಿಕೊಟ್ಟಿದ್ದರು.

ಪ್ರಸ್ತುತ ದ.ಕ.ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸುತ್ತಿರುವ ಇವರು, ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿಗೆ ಮೂರು ಅವಧಿಯಲ್ಲಿ ಅಧ್ಯಕ್ಷರಾಗಿ ಬ್ಯಾಂಕಿನ ಏಳಿಗೆಗೆ ದುಡಿದಿದ್ದಾರೆ. ಇವರ ಪರಿಶ್ರಮದಿಂದ ಬಿ.ಸಿ.ರೋಡಿನಲ್ಲಿ ಬ್ಯಾಂಕಿಗೆ ಸ್ವಂತಕಟ್ಟಡ ನಿರ್ಮಾಣ ಹಂತದಲ್ಲಿದೆ. ಬಂಟ್ವಾಳ ವೀಣಾಧಾರಿಣಿ ಕಲಾ ಯುವಕ ಸಂಘದ ಮೂಲಕ ಬಡವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಸಹಿತ ಪ್ರತಿಭಾ ಪುರಸ್ಕಾರವನ್ನಿತ್ತು ಪ್ರೋತ್ಸಾಹಿಸುತ್ತಿದ್ದರು. ಸಹಕಾರ ಭಾರತಿ, ಟೈಲರ್ಸ್ ಆಸೋಸಿಯೇಶನ್ ಹೀಗೆ ಹತ್ತು ಹಲವು ಸಂಘ ಸಂಸ್ಥೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಬ್ಯಾಂಕಿನಲ್ಲಿ ಸಂತಾಪ ಸಭೆ

ಬಂಟ್ವಾಳ ವ್ಯವಸಾಯ ಸೇವಾ ಸಹಕಾರಿ ನಿ.ದ ಅಧ್ಯಕ್ಷ ಜಿ.ಅನಂದ ಅವರ ನಿಧನದ ಹಿನ್ನಲೆಯಲ್ಲಿ  ಬಂಟ್ವಾಳದಲ್ಲಿರುವ ನಿಯಮಿತದ ಪ್ರಧಾನ ಕಚೇರಿಯಲ್ಲಿ ಉಪಾಧ್ಯಕ್ಷ ಮಹಾಬಲ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಸಂತಾಪ ಸೂಚಕ ಸಭೆಯು ನಡೆಯಿತು.

ಈ ಸಂದರ್ಭದಲ್ಲಿ ನಿರ್ದೇಶಕ ವಿದ್ಯಾವತಿ ಪ್ರಮೋದ್ ಕುಮಾರ್, ಲಕ್ಮೀಪ್ರಭು, ಕರುಣೇಂದ್ರ ಪೂಜಾರಿ, ಶೇಖರ್, ಮನೋಹರ್ ಮೂಲ್ಯ, ಪ್ರಕಾಶ್, ಕೇಶವ ಕಿಣಿ, ಭವಾನಿಶಂಕರ್, ಸಂಘದ ಮುಖ್ಯಕಾರ್ಯನಿರ್ವಣಾಧಿಕಾರಿ ಜಯಪ್ರಕಾಶ್ ಕಾಮತ್ ಹಾಗೂ ಸಿಬ್ಬಂದಿ ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X