Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗ್ರಾಹಕರ ಮನೆ ಬಾಗಿಲಿಗೆ ಬರಲಿದೆ ತಾಜಾ...

ಗ್ರಾಹಕರ ಮನೆ ಬಾಗಿಲಿಗೆ ಬರಲಿದೆ ತಾಜಾ ತರಕಾರಿ: ಬಿಗ್ ಬಾಸ್ಕೆಟ್ ಮಾದರಿ ಸೇವೆ ಆರಂಭಕ್ಕೆ ಸಿದ್ಧತೆ

- ಬಾಬುರೆಡ್ಡಿ ಚಿಂತಾಮಣಿ- ಬಾಬುರೆಡ್ಡಿ ಚಿಂತಾಮಣಿ10 Dec 2019 10:13 PM IST
share
ಗ್ರಾಹಕರ ಮನೆ ಬಾಗಿಲಿಗೆ ಬರಲಿದೆ ತಾಜಾ ತರಕಾರಿ: ಬಿಗ್ ಬಾಸ್ಕೆಟ್ ಮಾದರಿ ಸೇವೆ ಆರಂಭಕ್ಕೆ ಸಿದ್ಧತೆ

ಬೆಂಗಳೂರು, ಡಿ.10: ವಿನೂತನ ಕಾರ್ಯಕ್ರಮಗಳ ಮೂಲಕ ಗ್ರಾಹಕರನ್ನು ಸೆಳೆದಿರುವ ಹಾಪ್‌ಕಾಮ್ಸ್ ಇದೀಗ ‘ಬಿಗ್‌ ಬಾಸ್ಕೆಟ್’ ಮಾದರಿಯಲ್ಲಿ ಮನೆ ಮನೆಗೆ ತರಕಾರಿ ತಲುಪಿಸುವ ಸೇವೆ ಪ್ರಾರಂಭಿಸಲು ಮುಂದಾಗಿದೆ. ಮಳಿಗೆಗಳು ಹಾಗೂ ಟೆಂಪೋಗಳ ಮೂಲಕ ಗ್ರಾಹಕರಿಗೆ ತಾಜಾ ತರಕಾರಿ ಮತ್ತು ಹಣ್ಣುಗಳ ಒದಗಿಸಲಾಗುತ್ತಿತ್ತು. ಇದೀಗ ಭಿನ್ನವಾಗಿ ಯೋಚಿಸಿರುವ ಹಾಪ್ ಕಾಮ್ಸ್ ಆನ್‌ಲೈನ್ ಮೂಲಕ ಖರೀದಿಸುವವರಿಗೆ ಮನೆಗೆ ತರಕಾರಿಗಳನ್ನು ತಲುಪಿಸಲು ಸಿದ್ಧತೆ ನಡೆದಿದೆ.

ಫುಡ್ ಡೆಲಿವೆರಿ ಕಂಪೆನಿಗಳು ಆಹಾರ ಪಾದಾರ್ಥಗಳನ್ನು ಮನೆ ಬಾಗಿಲಿಗೆ ತಲುಪಿಸುತ್ತಿರುವ ಮಾದರಿಯಲ್ಲಿಯೇ ಆನ್‌ಲೈನ್‌ನಲ್ಲಿ ಬುಕ್ ಮಾಡಿದರೆ, ನಿಗದಿತ ಸಮಯದಲ್ಲಿ ಹಣ್ಣು ಮತ್ತು ತರಕಾರಿಗಳನ್ನು ಗ್ರಾಹಕರ ಮನೆ ಬಾಗಿಲಿಗೆ ತಲುಪಿಸಲಾಗುತ್ತದೆ. ಮುಂದಿನ ಎರಡು ತಿಂಗಳಲ್ಲಿ ಯೋಜನೆ ಜಾರಿಯಾಗಲಿದೆ.

ಈ ಯೋಜನೆ ಉದ್ದೇಶ: ರೈತರಿಗೆ ಉತ್ತಮ ಬೆಲೆ ದೊರಕಿಸಿಕೊಡುವುದು ಹಾಗೂ ಗ್ರಾಹಕರಿಗೆ ಗುಣಮಟ್ಟದ ಹಣ್ಣ ಮತ್ತು ತರಕಾರಿಗಳನ್ನು ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದ್ದು, ಖಾಸಗಿ ಸಂಸ್ಥೆಗಳ ಸಹಭಾಗಿತ್ವದಲ್ಲಿ ಗ್ರಾಹಕರ ಮನೆ ಬಾಗಿಲಿಗೆ ಹಣ್ಣು ಮತ್ತು ತರಕಾರಿ ತಲುಪಿಸಲು ಈ ಯೋಜನೆ ಜಾರಿ ಮಾಡಲಾಗುತ್ತಿದೆ ಎಂದು ಹಾಪ್‌ಕಾಮ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಪ್ರಸಾದ್ ತಿಳಿಸಿದ್ದಾರೆ.

ನಗರದಲ್ಲಿ ಹಲವಾರು ಖಾಸಗಿ ಸಂಸ್ಥೆಗಳು ಈ ಕೆಲಸ ಮಾಡುತ್ತಿವೆ. ಆದರೆ, ಅವರು ಲಾಭದ ದೃಷ್ಟಿಯಲ್ಲಿ ಕೆಲಸ ಮಾಡುತ್ತಿವೆ. ಹಾಪ್‌ಕಾಮ್ಸ್ ರೈತರ ಪರವಾಗಿದ್ದು, ರೈತರ ಬೆಳೆಗೆ ನಿಗದಿತ ಬೆಲೆ ದೊರಕಿಸಿ ಕೊಡುವುದರ ಜತೆಗೆ, ಕನಿಷ್ಠ ಸೇವಾ ಶುಲ್ಕವನ್ನು ಪಡೆಯಲಿದೆ.

ಹಾಪ್‌ಕಾಮ್ಸ್ ಗ್ರಾಹಕರಿಗೆ ಗುಣಮಟ್ಟ ಹಾಗೂ ತಾಜಾತನದಿಂದಲೇ ಹೆಸರುವಾಸಿಯಾಗಿದೆ. ಈ ನಿಟ್ಟಿನಲ್ಲಿ ಯೋಜನೆಯ ಮೂಲಕ ಮತ್ತಷ್ಟು ಜನರನ್ನು ತಲುಪಲು ಸಾಧ್ಯವಾಗಿಸುವ ಕೆಲಸ ಮಾಡಲಾಗುತ್ತಿದೆ ಎಂದು ಸಂಸ್ಥೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಸೇವೆಯಿಂದ ಶೇ.10 ರಿಂದ 20ರ ವರೆಗೂ ವ್ಯಾಪಾರ ವಹಿವಾಟು ವೃದ್ಧಿಯಾಗುವ ಸಾಧ್ಯತೆಯಿದೆ. ಜೊತೆಗೆ, ಗ್ರಾಹಕರಿಗೆ ವಿತರಿಸುವ ಹಣ್ಣ ಮತ್ತು ತರಕಾರಿಗಳನ್ನು ರೈತರಿಂದ ನೇರವಾಗಿ ಖರೀದಿಸಲು ಒಪ್ಪಂದ ಮಾಡಿಕೊಳ್ಳಲಿದ್ದು, ರೈತರಿಗೂ ಹೆಚ್ಚು ಲಾಭಾಂಶವಿರಲಿದೆ ಎಂದು ಅವರು ತಿಳಿಸಿದರು.

ಹಂತ ಹಂತವಾಗಿ ವಿಸ್ತರಣೆ: ‘ಬಿಗ್‌ಬಾಸ್ಕೆಟ್’ ಮಾದರಿ ಯೋಜನೆಯನ್ನು ನಡೆಸಲು ಕನಕಪುರ ಮೂಲದ ಸಂಸ್ಥೆಯೊಂದು ನಮ್ಮೆಂದಿಗೆ ಕೈಜೋಡಿಸಿದೆ. ಈ ಹಿನ್ನೆಲೆಯಲ್ಲಿ ಕನಕಪುರ ರಸ್ತೆಗೆ ಹೊಂದಿಕೊಂಡಿರುವ ಜೆ.ಪಿ.ನಗರ, ಜಯನಗರ, ಬನಶಂಕರಿ ಭಾಗಗಳಲ್ಲಿನ ಗ್ರಾಹಕರಿಗೆ ಹಣ್ಣು ತರಕಾರಿಗಳನ್ನು ತಲುಪಿಸಲಾಗುವುದು. ಬಳಿಕ ಹಂತ ಹಂತವಾಗಿ ಬೆಂಗಳೂರು ನಗರದ ವಿವಿಧ ಭಾಗಗಳಿಗೆ ವಿಸ್ತರಣೆ ಮಾಡಲಾಗುವುದು ಎಂದು ಅವರು ವಿವರಿಸಿದರು.

ಆನ್‌ಲೈನ್‌ನಲ್ಲಿ ಬುಕ್‌ಮಾಡಬೇಕು: ಈಗಿರುವ ಹಾಪ್ ಕಾಮ್ಸ್ ವೆಬ್‌ಸೈಟ್‌ನಲ್ಲಿ ಪ್ರತೇಕ ಪುಟ ರಚಿಸಲಾಗುವುದು. ಆ ಪುಟದಲ್ಲಿ ಹಣ್ಣು ಮತ್ತು ತರಕಾರಿಗಳನ್ನು ಬುಕ್ ಮಾಡಲು ಅವಕಾಶ ಕಲ್ಪಿಸಿ ಗ್ರಾಹಕರಿಗೆ ನೆರವಾಗುವಂತೆ ಮಾಡಲಾಗುವುದು ಎಂದರು.

ಗ್ರಾಹಕರ ಮನೆಗೆ ಹಣ್ಣು ಮತ್ತು ತರಕಾರಿಗಳನ್ನು ಖಾಸಗಿ ಸಂಸ್ಥೆಗಳ ರೀತಿಯಲ್ಲಿ ತಲುಪಿಸಬೇಕು, ಅಂತಹ ಯೋಜನೆ ಬೇಕು ಎಂದು ಹಲವು ದಿನಗಳಿಂದ ನಿರಂತರ ಶ್ರಮ ಪಟ್ಟಿದ್ದೆವು. ಇದೀಗ ಅದನ್ನು ಅಂತಿಮ ಹಂತಕ್ಕೆ ತರಲಾಗಿದೆ. ಅದರ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳುತ್ತಿದ್ದು, ಮುಂದಿನ ಎರಡು ತಿಂಗಳಲ್ಲಿ ಆರಂಭ ಮಾಡಲಾಗುತ್ತದೆ.

-ಪ್ರಸಾದ್, ಹಾಪ್ ಕಾಮ್ಸ್‌ನ ವ್ಯವಸ್ಥಾಪಕ ನಿರ್ದೇಶಕ

share
- ಬಾಬುರೆಡ್ಡಿ ಚಿಂತಾಮಣಿ
- ಬಾಬುರೆಡ್ಡಿ ಚಿಂತಾಮಣಿ
Next Story
X