ಕನ್ನಡ ಸಾಹಿತ್ಯ ಸಮ್ಮೇಳನ: ಡಿ.12ರಿಂದ ಪ್ರತಿನಿಧಿಗಳ ನೋಂದಣಿಗೆ ಅವಕಾಶ
ಬೆಂಗಳೂರು, ಡಿ.10: ಕಲಬುರಗಿಯಲ್ಲಿ ಫೆ.5 ರಿಂದ ಮೂರು ದಿನಗಳ ಕಾಲ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳುವ ಪ್ರತಿನಿಧಿಗಳು ಜ.14 ರೊಳಗೆ ನೋಂದಾಯಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಸಮ್ಮೇಳನದಲ್ಲಿ ಪ್ರತಿನಿಧಿಗಳಾಗಿ ಪಾಲ್ಗೊಳ್ಳುವ ಆಸಕ್ತರು ಆಯಾ ಜಿಲ್ಲಾ ಕನ್ನಡ ಸಾಹಿತ್ಯಪರಿಷತ್ತಿನಲ್ಲಿ ಅಥವಾ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕೇಂದ್ರ ಕಚೇರಿಯಲ್ಲಿ 250 ಪ್ರತಿನಿಧಿ ಶುಲ್ಕ ಪಾವತಿಸಿ ಹೆಸರು ನೋಂದಣಿ ಮಾಡಿಕೊಳ್ಳಬಹುದಾಗಿದೆ. ನೋಂದಣಿ ಪ್ರಕ್ರಿಯೆಯು ಡಿ.12 ರಿಂದ ಜ.14 ರವರೆಗೂ ನಡೆಯಲಿದೆ. ಅವಧಿಯ ನಂತರ ಬರುವ ಅರ್ಜಿಗಳನ್ನು ಪುರಸ್ಕರಿಸುವುದಿಲ್ಲ ಎಂದು ಪ್ರಕಟನೆ ತಿಳಿಸಿದೆ.
Next Story