Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೌರತ್ವ ಮಸೂದೆ: ಮುಸ್ಲಿಮರಿಗೆ ಆತಂಕ ಬೇಡ;...

ಪೌರತ್ವ ಮಸೂದೆ: ಮುಸ್ಲಿಮರಿಗೆ ಆತಂಕ ಬೇಡ; ಗೃಹ ಸಚಿವ ಅಮಿತ್ ಶಾ

ವಾರ್ತಾಭಾರತಿವಾರ್ತಾಭಾರತಿ11 Dec 2019 9:38 PM IST
share
ಪೌರತ್ವ ಮಸೂದೆ: ಮುಸ್ಲಿಮರಿಗೆ ಆತಂಕ ಬೇಡ; ಗೃಹ ಸಚಿವ ಅಮಿತ್ ಶಾ

ಹೊಸದಿಲ್ಲಿ,ಡಿ.11: ವಿವಾದಾತ್ಮಕ ಪೌರತ್ವ ತಿದ್ದುಪಡಿ ವಿಧೇಯಕವನ್ನು ಕೇಂದ್ರ ಗೃಹ ಸಚಿವ ಅಮಿತ್‌ಶಾ ಬುಧವಾರ ರಾಜ್ಯಸಭೆಯಲ್ಲಿ ಮಂಡಿಸಿದ್ದಾರೆ. ವಿಧೇಯಕದ ಬಗ್ಗೆ ಭಾರತೀಯ ಮುಸ್ಲಿಮರು ಭಯಪಡುವ ಅಗತ್ಯವೇ ಇಲ್ಲ ಹಾಗೂ ಅವರು ಭಾರತದ ಪೌರರಾಗಿಯೇ ಉಳಿದುಕೊಳ್ಳಲಿದ್ದಾರೆಂದು ಅವರು ಹೇಳಿದ್ದಾರೆ.

ವಿಧೇಯಕವನ್ನು ಸದನದಲ್ಲಿ ಮಂಡಿಸಿ ಮಾತನಾಡಿದ ಅವರು ‘‘ಮುಸ್ಲಿಂ ಸಮುದಾಯದ ಸದಸ್ಯರಿಗೆ ಯಾರೂ ಕಿರುಕುಳ ನೀಡಲಾರರು ಎಂದರು. ಪ್ರಸ್ತಾವಿತ ಮಸೂದೆಯು ನೆರೆಹೊರೆಯ ರಾಷ್ಟ್ರಗಳಲ್ಲಿ ದಮನಕ್ಕೊಳಗಾದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಭಾರತದಲ್ಲಿ ಶಿಕ್ಷಣ, ಉದ್ಯೋಗ ಹಾಗೂ ಬದುಕುವ ಹಕ್ಕನ್ನು ನೀಡಲಿದೆಯೆಂದು ಅವರು ಹೇಳಿದರು.

 ‘‘ಮುಸ್ಲಿಮರು ಯಾವ ವಿಷಯದಲ್ಲೂ ಭಯಪಡಬೇಕಾಗಿಲ್ಲ. ಈ ವಿಧೇಯಕವು ನಿರ್ದಿಷ್ಟವಾಗಿ ಮುಸ್ಲಿಮ್ ಸಮುದಾಯಕ್ಕೆ ವಿರುದ್ಧವಾಗಿದೆಯೆಂಬ ತಪ್ಪುಮಾಹಿತಿ ಹಾಗೂ ಗೊಂದಲವನ್ನು ಹರಡಲಾಗುತ್ತಿದೆ. ಈ ಬಗ್ಗೆ ಯಾವುದೇ ಆತಂಕ ಪಡುವ ಅಥವಾ ಚರ್ಚೆ ನಡೆಸಬೇಕಾದ ಪ್ರಶ್ನೆಯೇ ಇರುವುದಿಲ್ಲ. ಮುಸ್ಲಿಮರು ಭಾರತದ ಪೌರರು, ಅವರು ಭಾರತದ ಪೌರರಾಗಿಯೇ ಉಳಿಯಲಿದ್ದಾರೆ ಹಾಗೂ ಅವರಿಗೆ ಯಾರೂ ಕಿರುಕುಳ ನೀಡಲಾರರು’’ ಎಂದು ಶಾ ಹೇಳಿದರು.

 ಆದಾಗ್ಯೂ ಇತರ ದೇಶಗಳಿಂದ ಬಂದು ಅಕ್ರಮವಾಗಿ ನೆಲೆಸಿದ ಮುಸ್ಲಿಮ್ ವಲಸಿಗರಿಗೆ ಪೌರತ್ವವನ್ನು ನೀಡಲಾರದು ಎಂದವರು ಹೇಳಿದರು.

‘‘ಪಾಕಿಸ್ತಾನದಿಂದ ಬಂದ ಮುಸ್ಲಿಮರಿಗೆ ಪೌರತ್ವ ನೀಡಲು ನೀವು ಬಯಸುತ್ತೀರಾ? ಬಾಂಗ್ಲಾದಿಂದ ಬಂದ ಮುಸ್ಲಿಮರನ್ನು ಪೌರರನ್ನಾಗಿ ಮಾಡಬೇಕೇನು?. ಅಫ್ಘಾನಿಸ್ತಾನದಿಂದ ಬಂದ ಮುಸ್ಲಿಮರಿಗೆ ಪೌರತ್ವ ನೀಡಬೇಕೇನು?. ಜಗತ್ತಿನಾದ್ಯಂತ ಬರುವ ಮುಸ್ಲಿಮರಿಗೂ ನಾವು ಪೌರತ್ವ ಕೊಡಬೇಕೇನು?. ಈ ರೀತಿಯಾಗಿ ನಾವು ದೇಶವನ್ನು ಹೇಗೆ ನಡೆಸಲು ಸಾಧ್ಯ?’’ ಎಂದು ಅವರು ಪ್ರಶ್ನಿಸಿದರು.

 ಪ್ರಸ್ತಾವಿತ ಪೌರತ್ವ ತಿದ್ದುಪಡಿ ಮಸೂದೆಯು ಐತಿಹಾಸಿಕವೆಂದು ಬಣ್ಣಿಸಿದ ಶಾ ಅವರು, ನೆರೆಹೊರೆಯ  ದೇಶಗಳಲ್ಲಿ ಶೋಷಣೆಗೊಳಗಾದ ಕೋಟ್ಯಂತರ ಮಂದಿಯ ಬಾಳಲ್ಲಿ ಇದರಿಂದ ಹೊಸ ಆಶಾಕಿರಣ ಮೂಡಲಿದೆ.ಅವರಿಗೆ ತಮ್ಮ ಧರ್ಮವನ್ನು ಗೌರವದಿಂದ ಅನುಸರಿಸಬಹುದು ಹಾಗೂ ತಮ್ಮ ಮಹಿಳೆಯರ ಘನತೆಯನ್ನು ಕಾಪಾಡಬಹುದಾಗಿದೆ ಎಂದು ಶಾ ಹೇಳಿದರು.

 ಅಫ್ಘಾನಿಸ್ತಾನ, ಪಾಕಿಸ್ತಾನ ಹಾಗೂ ಬಾಂಗ್ಲಾದೇಶಗಳಲ್ಲಿ ಅಲ್ಪಸಂಖ್ಯಾತರನ್ನು ಸರಿಸಮಾನವಾಗಿ ಕಾಣುತ್ತಿಲ್ಲ ಹಾಗೂ ಅವರ ಜನಸಂಖ್ಯೆಯು ಶೇ.20ಕ್ಕೆ ಕುಸಿದೆ. ಅವರನ್ನು ಹತ್ಯೆಗೈಯಲಾಗುತ್ತಿದೆ ಅಥವಾ ಬಲವಂತವಾಗಿ ಮತಾಂತರಗೊಳಿಸಲಾಗುತ್ತಿದೆ ಇಲ್ಲವೇ ಭಾರತಕ್ಕೆ ವಲಸೆಹೋಗುವಂತೆ ಮಾಡಲಾಗುತ್ತಿದೆ ಎಂದು ಶಾ ಸದನದಲ್ಲಿ ಹೇಳಿದರು.

  2019ರ ಲೋಕಸಭಾ ಚುನಾವಣೆಯ ವೇಳೆ ಬಿಜೆಪಿಯು ಇಂತಹ ಪ್ರಸ್ತಾವಿತ ಶಾಸನವನ್ನು ಜಾರಿಗೊಳಿಸುವ ಬಗ್ಗೆ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿತ್ತು ಹಾಗೂ ಅದಕ್ಕಾಗಿ ದೇಶದ ಜನತೆ ಪಕ್ಷವನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಿದ್ದಾರೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X