Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯ ಸರ್ಕಾರದ ದಬ್ಬಾಳಿಕೆ, ದಮನಕಾರಿ...

ರಾಜ್ಯ ಸರ್ಕಾರದ ದಬ್ಬಾಳಿಕೆ, ದಮನಕಾರಿ ನೀತಿ ಸಲ್ಲದು: ಚಿಂತಕ ಕೆ.ದೊರೈರಾಜ್

ವಾರ್ತಾಭಾರತಿವಾರ್ತಾಭಾರತಿ11 Dec 2019 11:56 PM IST
share
ರಾಜ್ಯ ಸರ್ಕಾರದ ದಬ್ಬಾಳಿಕೆ, ದಮನಕಾರಿ ನೀತಿ ಸಲ್ಲದು: ಚಿಂತಕ ಕೆ.ದೊರೈರಾಜ್

ತುಮಕೂರು, ಡಿ.11: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಲು ಮುಂದಾಗದ ರಾಜ್ಯ ಸರ್ಕಾರ ದಬ್ಬಾಳಿಕೆ, ದಮನಕಾರಿ ನೀತಿ ಅನುಸರಿಸುತ್ತಿರುವುದು ಬಿಡಬೇಕು ಎಂದು ಪಿಯುಜಿಎಲ್ ಹಾಗೂ ಜನಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕೆ.ದೊರೈರಾಜ್ ಹೇಳಿದ್ದಾರೆ.

ತುಮಕೂರಿನ ಅಮಾನಿಕೆರೆಯಲ್ಲಿ ಅಂಗನವಾಡಿ ನೌಕರರ ಸಂಘ ಸಿಐಟಿಯು ನೇತೃತ್ವದಲ್ಲಿ ಹಮ್ಮಿಕೊಂಡಿರುವ ಪಾದಯಾತ್ರೆಯ ಭಾಗವಾಗಿ ನಡೆಸುತ್ತಿರುವ ಧರಣಿ ನಿರತರನ್ನು ಉದ್ದೇಶಿಸಿ ಅವರು ಮಾತನಾಡಿದರು. ಅಂಗನವಾಡಿ ಕಾರ್ಯಕರ್ತೆಯರು 1975ರಿಂದ ಮಕ್ಕಳ ಪೋಷಣೆ ಮತ್ತು ಕಲಿಕೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಅವರ ಬೇಡಿಕೆಗಳು ಸರಿಯಾಗಿವೆ. ಹಾಗಾಗಿ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.

ಮಾತೃದೇವೋಭವ ಎನ್ನುವವರು ಅಂಗನವಾಡಿ ಕಾರ್ಯಕರ್ತೆಯರನ್ನು ಕಡೆಗಣಿಸಿದ್ದಾರೆ. ಅಂಗನವಾಡಿಗಳನ್ನು ರಾಜ್ಯ ಸರ್ಕಾರ ದಮನ ಮಾಡುವ ಪ್ರಕ್ರಿಯೆಯನ್ನು ನಿಲ್ಲಿಸಬೇಕು. ಅಂಗನವಾಡಿಗಳನ್ನು ಬಲಿಷ್ಠಗೊಳಿಸಲು ಪ್ರಯತ್ನಿಸಬೇಕು. ಅಂಗನವಾಡಿಗಳನ್ನು ಮುಚ್ಚಿದರೆ ಲಕ್ಷಾಂತರ ಮಂದಿಯ ಬದುಕು ಬೀದಿಗೆ ಬೀಳುತ್ತದೆ. ಇದಕ್ಕೆ ಸರ್ಕಾರ ಅವಕಾಶ ಕೊಡಬಾರದು ಎಂದು ತಿಳಿಸಿದರು.

ಅಂಗನವಾಡಿ ಕಾರ್ಯಕರ್ತೆಯರು ಪಾದಯಾತ್ರೆ ನಡೆಸಲು ಮುಂದಾಗಿದ್ದರೆ ಅದಕ್ಕೆ ಸರ್ಕಾರ ಅವಕಾಶ ನೀಡಿಲ್ಲ. ಇದು ಸಮರ್ಥನೀಯವಲ್ಲ. ಅಂಗನವಾಡಿ ನೌಕರರ ಬೇಡಿಕೆಗಳನ್ನು ಈಡೇರಿಸದೆ ಹೋದರೆ ಇದುವರೆಗೆ ಅಂಗನವಾಡಿಗಳಲ್ಲಿ ಶಿಕ್ಷಣ ಪಡೆದಿರುವ ಪೋಷಕರೊಂದಿಗೆ ಬೃಹತ್ ಹೋರಾಟಕ್ಕೆ ಸಜ್ಜಾಗಬೇಕಾಗುತ್ತದೆ. ಪಿಯುಸಿಎಲ್ ಮತ್ತು ಜನಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆಗೆ ಬೆಂಬಲ ನೀಡುತ್ತದೆ. ಮುಂದೆಯೂ ಕೂಡ ನಿಮ್ಮೊಂದಿಗೆ ಇರಲಿದ್ದೇವೆ ಎಂದು ತಿಳಿಸಿದರು.

ಪ್ರಜಾಪ್ರಭುತ್ವ ಮಾದರಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹೋರಾಟ ನಡೆಸಿಕೊಂಡು ಬಂದಿದ್ದಾರೆ. ಇಂತಹ ಹೋರಾಟ ಗಳನ್ನು ಹತ್ತಿಕ್ಕುವ ಮೂಲಕ ಬಡವರ ಮಕ್ಕಳ ಶಿಕ್ಷಣ ಹಕ್ಕನ್ನು ಮೊಟುಕುಗೊಳಿಸದಂತೆ ಆಗುತ್ತದೆ. ಮಹಿಳೆಯರ ಸಬಲೀಕರಣದ ಮಾತನಾಡುವ ಸರ್ಕಾರ ಈ ರೀತಿ ಹತ್ತಿಕ್ಕುವುದು ಸಹನೀಯವಲ್ಲ ಎಂದು ಕಿಡಿಕಾರಿದರು.

ನಿವೃತ್ತ ಪ್ರಾಂಶುಪಾಲ ಜಿ.ಎಂ.ಶ್ರೀನಿವಾಸಯ್ಯ ಮಾತನಾಡಿ, ಸರ್ಕಾರ ಅಂಗನವಾಡಿ ತಾಯಂದಿರ ನೆರವಿಗೆ ಬರಬೇಕು. ಅಂಗನವಾಡಿ ಗಳಿಗೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಬೇಕು. ಅವರು ಕೇಳುತ್ತಿರುವ ಬೇಡಿಕೆಗಳು ನ್ಯಾಯಯುತವಾಗಿವೆ. ಕೂಡಲೇ ಅಂಗನವಾಡಿ ನೌಕರರ ಮುಖಂಡರನ್ನು ಕರೆಸಿ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.

ಅಂಗನವಾಡಿ ಕಾರ್ಯಕರ್ತೆಯರು ರಾತ್ರಿಯೆಲ್ಲ ಇಲ್ಲೇ ಕಾಲಕಳೆದಿದ್ದಾರೆ. ಅವರ ನೋವು, ಕಷ್ಟಗಳನ್ನು ಸರ್ಕಾರ ಅರ್ಥ ಮಾಡಿಕೊ ಳ್ಳಬೇಕು. ಅವರ ನೆರವಿಗೆ ಬರಬೇಕು. ಅಂಗನವಾಡಿ  ತಾಯಂದಿರು ಸಾಕಷ್ಟು ಕೆಲಸ ಮಾಡುತ್ತಾ ಬಂದಿದ್ದಾರೆ. ಪ್ರಾಮಾಣಿಕವಾಗಿ ದುಡಿಯುವತ್ತ ಮಕ್ಕಳನ್ನು ತಿದ್ದುವ ತಾಯಂದಿರ ಸಮಸ್ಯೆಗಳಿಗೆ ಸರ್ಕಾರ ಕೂಡಲೇ ಸ್ಪಂದಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್, ಪ್ರಧಾನ ಕಾರ್ಯದರ್ಶಿ, ಎನ್.ಕೆ.ಸುಬ್ರಮಣ್ಯ, ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಜಿ.ಕಮಲ, ಪ್ರಧಾನ ಕಾರ್ಯದರ್ಶಿ ಗುಲ್ಜಾರ್ ಬಾನು ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X