Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಣಜಿ ಟ್ರೋಫಿಯಲ್ಲಿ ಇತಿಹಾಸ ನಿರ್ಮಿಸಿದ...

ರಣಜಿ ಟ್ರೋಫಿಯಲ್ಲಿ ಇತಿಹಾಸ ನಿರ್ಮಿಸಿದ ಜಾರ್ಖಂಡ್

ತ್ರಿಪುರಾ ವಿರುದ್ಧ ರೋಮಾಂಚಕ ಗೆಲುವು

ವಾರ್ತಾಭಾರತಿವಾರ್ತಾಭಾರತಿ13 Dec 2019 11:55 PM IST
share
ರಣಜಿ ಟ್ರೋಫಿಯಲ್ಲಿ ಇತಿಹಾಸ ನಿರ್ಮಿಸಿದ ಜಾರ್ಖಂಡ್

ಅಗರ್ತಲ, ಡಿ.13: ರಣಜಿ ಟ್ರೋಫಿ ಋತು ಆರಂಭವಾಗಿದ್ದು, ಮೊದಲ ಸುತ್ತಿನ ಪಂದ್ಯದಲ್ಲಿ ಹಲವು ರೋಚಕ ಪಂದ್ಯಗಳು ಆಡಲ್ಪಟ್ಟಿವೆ. ಅಗರ್ತಲದಲ್ಲಿ ಗುರುವಾರ ಜಾರ್ಖಂಡ್ ಹಾಗೂ ತ್ರಿಪುರಾ ಮಧ್ಯೆ ನಡೆದ ‘ಸಿ’ ಗುಂಪಿನ ಪಂದ್ಯ ಕೂಡ ರೋಮಾಂಚಕ ಕ್ಷಣಕ್ಕೆ ಸಾಕ್ಷಿಯಾಯಿತು.

ಮೊದಲು ಬ್ಯಾಟಿಂಗ್ ಮಾಡಿದ್ದ ತ್ರಿಪುರಾ 289 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಜಾರ್ಖಂಡ್ 136 ರನ್ ಗಳಿಸಿ ಆಲೌಟಾಯಿತು. ಹೀಗಾಗಿ ತ್ರಿಪುರಾ ತಂಡ ಜಾರ್ಖಂಡ್‌ಗೆ ಫಾಲೋ-ಆನ್ ವಿಧಿಸಿತು.

ಜಾರ್ಖಂಡ್ ಎರಡನೇ ಇನಿಂಗ್ಸ್‌ನಲ್ಲಿ 138 ರನ್‌ಗೆ 5 ವಿಕೆಟ್‌ಗಳನ್ನು ಕಳೆದುಕೊಂಡು ಮತ್ತೊಮ್ಮೆ ಸಂಕಷ್ಟಕ್ಕೆ ಸಿಲುಕಿತು. ಆಗ ತಂಡಕ್ಕೆ ಆಸರೆಯಾದ ಇಶಾಂಕ್ ಜಗ್ಗಿ (ಔಟಾಗದೆ 107, 207 ಎಸೆತ, 9 ಬೌಂಡರಿ, 2 ಸಿಕ್ಸರ್)ಹಾಗೂ ಸೌರಭ್ ತಿವಾರಿ(ಔಟಾಗದೆ 122, 190 ಎಸೆತ, 8 ಬೌಂಡರಿ) ದ್ವಿಶತಕದ ಜೊತೆಯಾಟದಲ್ಲಿ ಭಾಗಿಯಾದರು. ತಂಡದ ಮೊತ್ತವನ್ನು 8 ವಿಕೆಟ್ ನಷ್ಟಕ್ಕೆ 418 ರನ್‌ಗೆ ತಲುಪಿಸಲು ಯಶಸ್ವಿಯಾದರು.

ಗೆಲ್ಲಲು 266 ರನ್ ಗುರಿ ಪಡೆದ ತ್ರಿಪುರಾ ತಂಡ ಭೋಜನ ವಿರಾಮದ ವೇಳೆಗೆ 48 ರನ್‌ಗೆ 5 ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆತಿಥೇಯ ತಂಡದಿಂದ ಕೆಳ ಕ್ರಮಾಂಕದಲ್ಲಿ ಒಂದಷ್ಟು ಪ್ರತಿರೋಧ ವ್ಯಕ್ತವಾದರೂ 64.4 ಓವರ್‌ಗಳಲ್ಲಿ 211ರ ನ್‌ಗೆ ಆಲೌಟಾಯಿತು. ನಾಟಕೀಯ ಸನ್ನಿವೇಶದಲ್ಲಿ ಜಾರ್ಖಂಡ್ 54 ರನ್‌ಗಳಿಂದ ರೋಚಕ ಜಯ ದಾಖಲಿಸಿತು. ರಣಜಿ ಟ್ರೋಫಿ ಇತಿಹಾಸದಲ್ಲಿ ಫಾಲೋ-ಆನ್ ಸಿಲುಕಿದ ತಂಡವೊಂದು ಪಂದ್ಯ ಗೆದ್ದಿರುವ ಮೊದಲ ನಿದರ್ಶನ ಇದಾಗಿದೆ.

ತ್ರಿಪುರಾದ ಪರ ಕೆಳ ಕ್ರಮಾಂಕದಲ್ಲಿ ಮುರಸಿಂಗ್(103, 145 ಎಸೆತ, 12 ಬೌಂಡರಿ,1 ಸಿಕ್ಸರ್)ಒಂದಷ್ಟು ಹೋರಾಟ ನೀಡಿದರು. ಆದರೆ, ಅವರಿಗೆ ಮತ್ತೊಂದು ತುದಿಯಿಂದ ಯಾವುದೇ ಬೆಂಬಲ ಸಿಗಲಿಲ್ಲ. ಆಶೀಷ್ ಕುಮಾರ್(5-67), ವಿ. ತಿವಾರಿ(3-60) ಹಾಗೂ ಎ.ಆರ್. ಯಾದವ್(2-31) ಶಿಸ್ತುಬದ್ಧ ಬೌಲಿಂಗ್ ಸಂಘಟಿಸಿ ಜಾರ್ಖಂಡ್‌ಗೆ ಅನಿರೀಕ್ಷಿತ ಗೆಲುವು ತಂದುಕೊಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X