ಏಷ್ಯನ್ ಕ್ಲಾಸಿಕ್ ಪವರ್ಲಿಫ್ಟಿಂಗ್ ಚಾಂಪಿಯನ್ಶಿಪ್: ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗೆ ಚಿನ್ನ
ಮಂಗಳೂರು, ಡಿ.14: ನಗರದ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ (ಎಸ್ಜೆಇಸಿ) ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿ ಆರೆನ್ ಜಾಯ್ ಫೆರ್ನಾಂಡಿಸ್ ಕಝಕ್ಸ್ತಾನ್ನಲ್ಲಿ ಇತ್ತೀಚೆಗೆ ನಡೆದ ಏಷ್ಯನ್ ಕ್ಲಾಸಿಕ್ ಪವರ್ಲಿಫ್ಟಿಂಗ್ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಕಾಲೇಜಿಗೆ ಹಿರಿಮೆಯನ್ನು ತಂದಿತ್ತಿದ್ದಾರೆ.
ಸ್ಕ್ವಾಟ್ನಲ್ಲಿ ಪ್ರಥಮ ಸ್ಥಾನ, ಡೆಡ್ಲಿಫ್ಟ್ನಲ್ಲಿ ಎರಡನೇ ಸ್ಥಾನದ ಜೊತೆಗೆ 66 ಕೆಜಿ ಪವರ್ಲಿಫ್ಟಿಂಗ್ ಚಾಂಪಿಯನ್ಶಿಪ್ನಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.
ಚಿಕ್ಕ ವಯಸ್ಸಿನಲ್ಲಿಯೇ ಕ್ರೀಡಾ ಜಗತ್ತನ್ನು ಪ್ರವೇಶಿಸಿದ ಆರೆನ್ 6 ಚಿನ್ನ, 3 ಬೆಳ್ಳಿ ಮತ್ತು 2 ಕಂಚಿನ ಪದಕಗಳನ್ನು ವಿವಿಧ ರಾಜ್ಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಚಾಂಪಿಯನ್ಶಿಪ್ಗಳಲ್ಲಿ ಪಡೆದಿದ್ದಾರೆ.
ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿಯು ಆರೆನ್ರ ಸಾಧನೆಗಳನ್ನು ಪರಿಗಣಿಸಿ ಸನ್ಮಾನಿಸಿತು.
Next Story